ವೈವಾಹಿಕ ಅತ್ಯಾಚಾರ ಶಿಕ್ಷಾರ್ಹ ಅಪರಾಧವಲ್ಲ: ಸುಪ್ರೀಂ ಕೋರ್ಟ್
Team Udayavani, Aug 10, 2017, 8:25 AM IST
ಹೊಸದಿಲ್ಲಿ: ವೈವಾಹಿಕ ಅತ್ಯಾಚಾರ (ಪತ್ನಿಗೆ ಒತ್ತಾಯ ಪೂರ್ವಕವಾಗಿ ಲೈಂಗಿಕ ಕ್ರಿಯೆ ನಡೆಸುವುದು)ವನ್ನು ಶಿಕ್ಷಾರ್ಹ ಅಪರಾಧ ಎಂದು ಪರಿಗಣಿಸಬೇಕೇ, ಬೇಡವೇ ಎಂಬ ಬಗ್ಗೆ ಸಂಸತ್ನಲ್ಲಿ ವಿಸ್ತೃತ ಚರ್ಚೆ ನಡೆದಿದೆ. ಇದನ್ನು ಕ್ರಿಮಿನಲ್ ಕೃತ್ಯ ಎಂದು ಪರಿಗಣಿಸಬೇಕಾಗಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಭಾರತೀಯ ದಂಡ ಸಂಹಿತೆಯ 375ನೇ ವಿಧಿಯು ಅತ್ಯಾಚಾರಕ್ಕೆ ಸಂಬಂಧಿಸಿದ ಅಂಶಗಳನ್ನು ಒಳಗೊಂಡಿದೆ. ಪತ್ನಿಯೊಂದಿಗೆ (15 ವರ್ಷ ಮೇಲ್ಪಟ್ಟ) ಪತಿಯು ಮಾಡುವ ಲೈಂಗಿಕ ಕ್ರಿಯೆಯನ್ನು ಅತ್ಯಾಚಾರ ಎಂದು ಪರಿಗಣಿಸ ಲಾಗದು ಎಂದು ಈ ಸೆಕ್ಷನ್ನಲ್ಲಿ ಹೇಳಲಾಗಿದೆ. ಆದರೆ, “15ರಿಂದ 18ರ ವಯಸ್ಸಿನ ವಿವಾಹಿತ ಯುವತಿಯರ ಮೇಲೆ ಪತಿಯು ಒತ್ತಾಯಪೂರ್ವಕ ಲೈಂಗಿಕ ದೌರ್ಜನ್ಯ ನಡೆಸಿದರೆ, ಅಂಥ ಯುವತಿಯರನ್ನು ರಕ್ಷಿಸುವ ಕುರಿತು ಏನು ಮಾಡಬೇಕು ಎಂಬುದರ ಬಗ್ಗೆ ಚಿಂತನೆ ನಡೆಸಬೇಕಿದೆ’ ಎಂದು ಕೋರ್ಟ್ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ