ಉಗ್ರರ ಗುಂಡೇಟಿಗೆ ಯೋಧ ಹುತಾತ್ಮ
Team Udayavani, May 13, 2018, 8:27 AM IST
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಸಿಆರ್ಪಿಎಫ್ ಯೋಧರೊಬ್ಬರು ಹುತಾತ್ಮರಾಗಿದ್ದಾರೆ.
ಪುಲ್ವಾಮಾದ ಮೊಹಲ್ಲಾ ಟಾಕಿಯ ಚಿನಾರ್ ಬಾಗ್ನ ಮನೆಯೊಂದರಲ್ಲಿ ಉಗ್ರರು ಅಡಗಿರುವ ಮಾಹಿತಿ ಮೇರೆಗೆ ಭದ್ರತಾ ಪಡೆ ಶೋಧ ಕಾರ್ಯ ಆರಂಭಿಸಿತ್ತು. ಈ ವೇಳೆ ಉಗ್ರರು ಏಕಾಏಕಿ ಗುಂಡು ಹಾರಿಸಿದ್ದು, ಮನೆಯ ಮಾಲಕ ಬಶೀರ್ ಅಹಮದ್ ತೀವ್ರವಾಗಿ ಗಾಯಗೊಂಡಿದ್ದಾರೆ. ಅಲ್ಲದೆ, ಮುಂದುವರಿದ ಚಕಮಕಿಯಲ್ಲಿ ಗಾಯ ಗೊಂಡಿದ್ದ ಯೋಧ ಮನ್ದೀಪ್ ಕುಮಾರ್ ಕೂಡ ಅನಂತರ ಕೊನೆಯುಸಿರೆಳೆದಿದ್ದಾರೆ. ಕತ್ತಲಿನಲ್ಲಿ ಉಗ್ರರು ಪರಾರಿಯಾಗಿದ್ದು, ಕಾರ್ಯಾಚರಣೆ ಮುಂದುವರಿಸಲಾಗಿದೆ ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ.
ಏತನ್ಮಧ್ಯೆ, ರಜೌರಿಯಲ್ಲಿ ಹವಾಲಾ ವಹಿವಾಟಿನಲ್ಲಿ ನಿರತವಾಗಿದ್ದ ಹಿಜ್ಬುಲ್ ಮುಜಾಹಿದೀನ್ನ ಘಟಕವೊಂದನ್ನು ಭದ್ರತಾ ಪಡೆ ಪತ್ತೆಹಚ್ಚಿದ್ದು, ನಾಲ್ವರನ್ನು ಬಂಧಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
MUST WATCH
ಹೊಸ ಸೇರ್ಪಡೆ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು
Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ
Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್ಪೋಸ್ಟ್ಗಳಲ್ಲಿ ತಪಾಸಣೆ
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು