ಹೆಚ್ಚಲಿದೆ ಮಾರುತಿ ಕಾರು ದರ
Team Udayavani, Aug 2, 2018, 2:46 PM IST
ಹೊಸದಿಲ್ಲಿ: ದೇಶದ ಅತ್ಯಂತ ದೊಡ್ಡ ಕಾರು ಉತ್ಪಾದಕ ಸಂಸ್ಥೆ ಮಾರುತಿ ಸುಜುಕಿ ಇಂಡಿಯಾ ತನ್ನ ಎಲ್ಲಾ ಮಾದರಿಯ ಕಾರುಗಳ ದರ ಶೀಘ್ರ ಹೆಚ್ಚಿಸಲಿದೆ. ಕಚ್ಚಾ ತೈಲ ದರದಲ್ಲಿ ಏರಿಕೆ, ವಿದೇಶ ವಿನಿಮಯ ದರದಲ್ಲಿ ಉಂಟಾಗುತ್ತಿರುವ ವ್ಯತ್ಯಯ ಸೇರಿದಂತೆ ಪ್ರಮುಖ ಕಾರಣಗಳಿಂದ ದರ ಪರಿಷ್ಕರಣೆಯ ನಿರ್ಧಾರ ಕೈಗೊಳ್ಳಲೇಬೇಕಾಗಿದೆ ಎಂದು ಸಂಸ್ಥೆಯ ಮಾರ್ಕೆಟಿಂಗ್ ಮತ್ತು ಸೇಲ್ಸ್ ವಿಭಾಗದ ಹಿರಿಯ ಕಾರ್ಯನಿರ್ವಾಹಕ ನಿರ್ದೇಶಕ ಆರ್.ಎಸ್.ಕಲ್ಸಿ ಬುಧವಾರ ಹೇಳಿದ್ದಾರೆ.
ಎಲ್ಲಾ ಖರ್ಚು ವೆಚ್ಚಗಳ ಜತೆ ಕಾರುಗಳನ್ನು ದೇಶದ ವಿವಿಧ ಭಾಗಗಳಿಗೆ ಸಾಗಿಸುವ ವೆಚ್ಚವೂ ಏರಿಕೆಯಾಗಿದೆ ಎಂದಿದ್ದಾರೆ. ಯಾವ ಮಾದರಿ ಕಾರ್ಗೆ ಎಷ್ಟು ಬೆಲೆ ಹೆಚ್ಚಾಗಲಿದೆ ಎಂದು ಸದ್ಯ ಮಾಹಿತಿ ನೀಡಲು ಸಾಧ್ಯವಿಲ್ಲ ಎಂದಿದ್ದಾರೆ ಕಲ್ಸಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್
ನೀವು ಬದುಕಿದ್ದಾಗಲೂ, ಸತ್ತಾಗಲೂ ಲೂಟಿ ಮಾಡುವುದೇ ಕಾಂಗ್ರೆಸ್ನ ಮಂತ್ರ: ಮೋದಿ
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ