ಸಾಧ್ವಿ ಮೇಲೆ ಸಾಮೂಹಿಕ ಅತ್ಯಾಚಾರ
Team Udayavani, Oct 28, 2019, 9:33 PM IST
ಶೇಖ್ಪುರ: ಸಾಧ್ವಿಯೊಬ್ಬರ ಮೇಲೆ ಇಬ್ಬರು ಕಾಮುಕರು ಸಾಮೂಹಿಕ ಅತ್ಯಾಚಾರ ಎಸಗಿರುವಂಥ ಘಟನೆ ಬಿಹಾರದ ಶೇಖ್ಪುರ ಜಿಲ್ಲೆಯಲ್ಲಿ ನಡೆದಿದೆ. ಭಾನುವಾರ ರಾತ್ರಿ ಈ ಘಟನೆ ನಡೆದಿದ್ದು, ಸಾಧ್ವಿಯು ಉತ್ತರಪ್ರದೇಶದ ಬಸ್ತಿ ಜಿಲ್ಲೆಯ ತಮ್ಮ ಊರಿಗೆ ತೆರಳುತ್ತಿದ್ದಾಗ ಈ ಕೃತ್ಯ ಎಸಗಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸಾಧ್ವಿಯು ಕಾಕೋಲಟ್ನ ಆಶ್ರಮವೊಂದರಲ್ಲಿ ವಾಸಿಸುತ್ತಿದ್ದು, ಭಾನುವಾರ ಅವರ ಊರಿನವರಾದ ಇಬ್ಬರು ಪುರುಷರು ಆಶ್ರಮಕ್ಕೆ ಬಂದು, ಸಾಧ್ವಿಯ ತಾಯಿಯು ತೀವ್ರ ಅನಾರೋಗ್ಯದಿಂದ ಬಳಲುತ್ತಿರುವುದಾಗಿ ಮಾಹಿತಿ ನೀಡಿದರು. ಕೂಡಲೇ ಸಾಧ್ವಿ ಊರಿಗೆ ಹೊರಟರು. ದಾರಿ ಮಧ್ಯೆ ಈ ಇಬ್ಬರ ಜೊತೆಗೆ ಮತ್ತಿಬ್ಬರು ಸೇರಿಕೊಂಡು ಸಾಮೂಹಿಕ ಅತ್ಯಾಚಾರ ಎಸಗಿದ್ದಾಗಿ ಸಾಧ್ವಿ ದೂರಿನಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು