Firecracker; ಪಟಾಕಿ ಮಾರುಕಟ್ಟೆಯಲ್ಲಿ ಭೀಕರ ಅಗ್ನಿ ಅವಘಡ: ಹಲವರಿಗೆ ಗಂಭೀರ ಗಾಯ
Team Udayavani, Nov 12, 2023, 4:41 PM IST
ಮಥುರಾ : ದೀಪಾವಳಿ ಸಂಭ್ರಮ ಸಡಗರದ ವೇಳೆಯಲ್ಲಿ ಉತ್ತರಪ್ರದೇಶದ ಮಥುರಾ ನಗರದ ಹೊರವಲಯದಲ್ಲಿರುವ ಗೋಪಾಲ್ಬಾಗ್ನಲ್ಲಿ ಪಟಾಕಿ ಮಾರುಕಟ್ಟೆಯಲ್ಲಿ ಭಾನುವಾರ ಭೀಕರ ಅಗ್ನಿ ಅವಘಡ ಸಂಭವಿಸಿದ್ದು ಹಲವರು ಸುಟ್ಟ ಗಂಭೀರ ಗಾಯಗಳಿಗೆ ಗುರಿಯಾಗಿದ್ದಾರೆ.
ಬೆಂಕಿ ಕಾಣಿಸಿಕೊಂಡ ಬಳಿಕ ಹಲವರಿಗೆ ತಗುಲಿದ್ದು, ಪಟಾಕಿ ಮಾರಾಟ ಮಾಡುತ್ತಿದ್ದ ಕನಿಷ್ಠ 9 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
“ಗೋಪಾಲಬಾಗ್ ಪ್ರದೇಶದಲ್ಲಿ ಪಟಾಕಿ ಮಾರಾಟ ಮಾಡುತ್ತಿದ್ದ ಏಳು ಅಂಗಡಿಗಳಿಗೆ ಬೆಂಕಿ ಹೊತ್ತಿಕೊಂಡು ಸುಟ್ಟು ಭಸ್ಮವಾಗಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ರಾಯಾ ಪೊಲೀಸ್ ಠಾಣೆ ಎಸ್ಎಚ್ಒ ಅಜಯ್ ಕಿಶೋರ್ ಹೇಳಿದ್ದಾರೆ.
ಏಳು ಅಂಗಡಿಗಳಿಗೆ ಪಟಾಕಿ ಮಾರಾಟ ಮಾಡಲು ಅನುಮತಿ ನೀಡಲಾಗಿತ್ತು. ಸ್ಥಳಕ್ಕೆ ಅಗ್ನಿ ಶಾಮಕ ದಳದ ಸಿಬಂದಿಗಳು ದೌಡಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ