ಮುಂದಿನ ಎಲ್ಲಾ ಚುನಾವಣೆಗಳಲ್ಲಿ ಏಕಾಂಗಿ ಹೋರಾಟ: ಮಾಯಾವತಿ
Team Udayavani, Jun 24, 2019, 12:24 PM IST
ಲಕ್ನೋ : ಪಕ್ಷದ ಹಿತದೃಷ್ಟಿಯಿಂದ ಮುಂಬರುವ ಎಲ್ಲಾ ಚುನಾವಣೆಗಳಲ್ಲಿ ಬಿಎಸ್ಪಿ ಏಕಾಂಗಿಯಾಗಿ ಹೋರಾಟ ನಡೆಸಲಿದೆ ಎಂದು ಬಿಎಸ್ಪಿ ಅಧಿನಾಯಕಿ ಮಾಯಾವತಿ ಅವರು ಹೇಳಿಕೊಂಡಿದ್ದಾರೆ.
ಟ್ವೀಟರ್ನಲ್ಲಿ ಬರೆದುಕೊಂಡಿರುವ ಮಾಯಾವತಿ, ಲೋಕಸಭಾ ಚುನಾವಣೆ ಬಳಿಕ ಸಮಾಜವಾದಿ ಪಕ್ಷದ ವ್ಯವಹಾರ ನಮಗೆ ಹೀಗೆ ಮಾಡಿದರೆ ಬಿಜೆಪಿಯನ್ನು ಸೋಲಿಸಲು ಸಾಧ್ಯವೇ ಎಂದು ಯೋಚಸುವಂತೆ ಮಾಡಿದೆ.ಪಕ್ಷದ ಹಿತದೃಷ್ಟಿಯಿಂದ ಮುಂದಿನ ಎಲ್ಲಾ ಚುನಾವಣೆಗಳಲ್ಲಿ ಏಕಾಂಗಿ ಹೋರಾಟ ನಡೆಸುತ್ತೇವೆ ಎಂದು ಬರೆದಿದ್ದಾರೆ.
2012 ರಿಂದ 17 ರ ವರೆಗೆ ಅಖೀಲೇಶ್ ಯಾದವ್ ಅವರ ಸಮಾಜವಾದಿ ಪಕ್ಷದ ಸರ್ಕಾರವಿದ್ದ ವೇಳೆ ನಡೆದ ದಲಿತರು ಮತ್ತು ಬಿಎಸ್ಪಿ ಕಾರ್ಯಕರ್ತರ ಮೇಲಿನ ದೌರ್ಜನ್ಯಗಳು ನಮ್ಮ ಸೋಲಿಗೆ ಕಾರಣವಾಯಿತು ಎಂದು ಹೇಳಿಕೊಂಡಿದ್ದಾರೆ.
ಉತ್ತರ ಪ್ರದೇಶದಲ್ಲಿ ಎಸ್ಪಿ-ಬಿಎಸ್ಪಿ ಮತ್ತು ಆರ್ಎಲ್ಡಿ ಮೈತ್ರಿಕೂಟ 80 ಸ್ಥಾನಗಳ ಪೈಕಿ 15 ರಲ್ಲಿ ಮಾತ್ರ ಗೆಲುವು ಸಾಧಿಸಿತ್ತು. ಬಿಎಸ್ಪಿ 10 ಮತ್ತು ಎಸ್ಪಿ 5 ಅಭ್ಯರ್ಥಿಗಳು ಗೆಲುವು ಸಾಧಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ