ಮಾಯಾವತಿ ಮಾಜಿ ಆಪ್ತನ ಮನೆಯಲ್ಲಿ 50 ಲಕ್ಷದ ಪೆನ್!
Team Udayavani, Mar 14, 2019, 12:30 AM IST
ಹೊಸದಿಲ್ಲಿ /ಲಕ್ನೋ: ಬಿಎಸ್ಪಿ ನಾಯಕಿ ಮಾಯಾವತಿಯವರ ಮಾಜಿ ಆಪ್ತ ಕಾರ್ಯದರ್ಶಿ ನೇತ್ ರಾಮ್ ನಿವಾಸದ ಮೇಲೆ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ನಡೆಸಿದ ದಾಳಿಯಲ್ಲಿ 1.64 ಕೋಟಿ ರೂ. ನಗದು, 50 ಲಕ್ಷ ರೂ. ಮೌಲ್ಯದ ಮೌಂಟ್ ಬ್ಲಾಂಕ್ ಪೆನ್ನುಗಳು, ನಾಲ್ಕು ಐಶಾರಾಮಿ ಎಸ್ಯುವಿ ಕಾರುಗಳು ಹಾಗೂ 300 ಕೋಟಿ ರೂ. ಮೌಲ್ಯದ ಬೇನಾಮಿ ಆಸ್ತಿಯ ದಾಖಲೆಗಳು ಪತ್ತೆಯಾಗಿವೆ.
ಮಾಯಾವತಿ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ನೇತ್ ರಾಮ್, ಉತ್ತರ ಪ್ರದೇಶ ಸರಕಾರದಲ್ಲಿ ಅನೇಕ ದೊಡ್ಡ ಹುದ್ದೆಗಳನ್ನು ನಿರ್ವಹಿಸಿದ್ದ ರಾಮ್ ವಿರುದ್ಧ ನೋಟು ಅಮಾನ್ಯ ಸಂದರ್ಭದಲ್ಲಿ ಕೋಲ್ಕತಾ ಮೂಲದ ಶೆಲ್ ಕಂಪೆನಿಗಳಿಂದ 95 ಕೋಟಿ ರೂ. ಅಕ್ರಮ ವ್ಯವಹಾರ ನಡೆಸಿದ ಆರೋಪ ಅವರ ಮೇಲಿದ್ದರಿಂದ ಈ ದಾಳಿ ನಡೆಸಲಾಗಿದೆ. 26 ಗಂಟೆಗಳ ಕಾಲ ನಡೆದಿ ರೈಡ್ನಲ್ಲಿ, ಬ್ಯಾಂಕ್ ಲಾಕರ್ ಒಂದರಲ್ಲಿ 50 ಲಕ್ಷ ರೂ. ಹಣ ಇರುವುದು ಬೆಳಕಿಗೆ ಬಂದಿದೆ ಎಂದು ಐಟಿ ಇಲಾಖೆ ಮೂಲಗಳು ತಿಳಿಸಿವೆ. ನಿವೃತ್ತ ಐಎಎಸ್ ಅಧಿಕಾರಿಯೂ ಆಗಿರುವ ಅವರು ಪ್ರಸಕ್ತ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಪಕ್ಷವೊಂದರ ಟಿಕೆಟ್ಗಾಗಿ ಪ್ರಯತ್ನಿಸುತ್ತಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ
ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್ ಇನ್ ಫ್ಲುಯೆನ್ಸರ್ ನಿಧನ
Lok Sabha Election 2024: ಝಾರ್ಖಂಡ್, ಛತ್ತೀಸ್ಗಢದಲ್ಲಿ ಗೆಲುವು ಯಾರಿಗೆ?
ಗ್ಯಾಂಗ್ ಸ್ಟರ್ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್ ಮನೆಯಿಂದ ಕ್ಯಾಬ್ ಬುಕ್: ಯುವಕ ಅರೆಸ್ಟ್
Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!
MUST WATCH
ಹೊಸ ಸೇರ್ಪಡೆ
PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ
Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ