48 ತಾಸು ನಿಷೇಧ ಪ್ರಶ್ನಿಸಿದ ಮಾಯಾವತಿ ಅರ್ಜಿ ಸುಪ್ರೀಂ ಕೋರ್ಟ್‌ನಿಂದ ತಿರಸ್ಕೃತ

Team Udayavani, Apr 16, 2019, 12:34 PM IST

ಹೊಸದಿಲ್ಲಿ : ಚುನಾವಣಾ ಆಯೋಗ ತನ್ನ ಮೇಲೆ ಹೇರಿರುವ 48 ತಾಸುಗಳ ಚುನಾವಣಾ ಪ್ರಚಾರ ನಿಷೇಧವನ್ನು ಪ್ರಶ್ನಿಸಿ ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಯಾವತಿ ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್‌ ಇಂದು ಮಂಗಳವಾರ ತಿರಸ್ಕರಿಸಿದೆ.

“ನೀವು ಪ್ರತ್ಯೇಕ ಅರ್ಜಿ ಸಲ್ಲಿಸಬೇಕು; ನಾವು ಈಗಲೇ ವಿಚಾರಣೆ ಕೈಗೊಳ್ಳಲಾರೆವು; ಈಗಲೇ ನಾವಿದಕ್ಕೆ ಸ್ಪಷ್ಟೀಕರಣ ನೀಡಬೇಕಾದದ್ದಿಲ್ಲ’ ಎಂದು ಸುಪ್ರೀಂ ಹೇಳಿದೆ.

ಚುನಾವಣಾ ಮಾದರಿ ನೀತಿ ಸಂಹಿತೆಯ ಉಲ್ಲಂಘನೆಗಾಗಿ ಮಾಯಾವತಿ ಅವರನ್ನು ಚುನಾವಣಾ ಆಯೋಗ 48 ತಾಸು ಕಾಲ ಯಾವುದೇ ರೀತಿಯ ಚುನಾವಣಾ ಪ್ರಚಾರ ಕೈಗೊಳ್ಳದಂತೆ ನೀಷೇಧಿಸಿತ್ತು. ಉತ್ತರ ಪ್ರದೇಶದ ದೇವಬಂದ್‌ ನಲ್ಲಿ ಮಾಯಾವತಿ ಅವರು ಪ್ರಚೋದನಕಾರಿ ಭಾಷಣ ಮಾಡಿದ್ದೇ ಇದಕ್ಕೆ ಕಾರಣವಾಗಿತ್ತು.

ದೇವಬಂದ್‌ ರಾಲಿಯಲ್ಲಿ ಮಾಯಾವತಿ ಅವರು ಮುಸ್ಲಿಂ ಸಮುದಾಯದವರು ಕಾಂಗ್ರೆಸ್‌ಗೆ ಓಟ್‌ ಹಾಕಬಾರದು ಮತ್ತು ಉತ್ತರ ಪ್ರದೇಶದಲ್ಲಿನ ಎಸ್‌ಪಿ-ಬಿಎಸ್‌ಪಿ-ಆರ್‌ಎಲ್‌ಡಿ ಮೈತ್ರಿಕೂಟದ ಬೆನ್ನಿಗೆ ದೃಢವಾಗಿ ನಿಲ್ಲಬೇಕು ಎಂದು ಕರೆ ನೀಡಿದ್ದರು.

ಇದನ್ನು ಅನುಸರಿಸಿ ಚುನಾವಣಾ ಆಯೋಗ ಮಾಯಾವತಿ ಅವರು ಮುಂದಿನ 48 ತಾಸುಗಳ ಕಾಲ ಯಾವುದೇ ಸಾರ್ವಜನಿಕ ಸಭೆ, ಮೆರವಣಿಗೆ, ರಾಲಿ, ರೋಡ್‌ ಶೋ, ಸಂದರ್ಶನ, ಮಾಧ್ಯಮಗಳಿಗೆ ಸಾರ್ವಜನಿಕ ಹೇಳಿಕೆ ನೀಡುವುದು ಇತ್ಯಾದಿ ಯಾವುದನ್ನೂ ಮಾಡಕೂಡದು ಎಂದು ನಿಷೇಧ ಹೇರಿತ್ತು.


ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ

  • ಹೊಸದಿಲ್ಲಿ : ಭಾರತದ ವರಿಷ್ಠ ನ್ಯಾಯಮೂರ್ತಿ (ಸಿಜೆಐ) ರಂಜನ್‌ ಗೊಗೊಯ್‌ ಅವರಿಂದು ಶನಿವಾರ ಸುಪ್ರೀಂ ಕೋರ್ಟಿನ ವಿಶೇಷ ಪೀಠದಲ್ಲಿದ್ದುಕೊಂಡು ತನ್ನ ವಿರುದ್ಧ...

  • ಇಂದು ನಿತ್ಯ ಹರಿದ್ವರ್ಣ ಕಾಡುಗಳಲ್ಲಷ್ಟೇ ಬೃಹತ್‌ ಗಾತ್ರದ ದೇವದಾರು, ತೇಗ, ಬೀಟೆ ಮೊದಲಾದ ಮರಗಳನ್ನು ಕಾಣಬಹುದು. ಆದರೆ ಸವಣೂರಿನ ಕಲ್ಮಠದಲ್ಲಿ ಸಾವಿರಾರು ವರ್ಷಗಳ...

  • Gadwall (Anas strepera) M -Duck + ಗದ್ವಾಲ್‌ ಬಾತನ್ನು ಚರ್ಲೆ ಅಥವಾ ಸರಳೆ ಬಾತು ಎಂದು ಕರೆಯಲಾಗುತ್ತದೆ. ಈ ಹಕ್ಕಿ, ನೀರಿನಲ್ಲಿ ಮುಳುಗಿ ಅಲ್ಲಿರುವ ಕ್ರಿಮಿ ಕೀಟಗಳನ್ನು ಬೇಟೆಯಾಡುತ್ತದೆ....

  • ವೃತ್ತಿಯಲ್ಲಿ ಶಿಕ್ಷಕರಾದ ಕಲ್ಯಾಣ್‌ ಕುಮಾರ್‌ ಅವರಿಗೆ ಪತ್ರಿಕೆ ಸಂಗ್ರಹಿಸುವ ಹವ್ಯಾಸ. ಇದು ಹುಟ್ಟಿದ್ದು ಪರ ಊರಿಗೆ ಪ್ರಯಾಣಿಸುವಾಗ . ಬೇಜಾರು ಕಳೆಯಲಿಕ್ಕೆ...

  • ಉದ್ದಾನ ವೀರಭದ್ರಸ್ವಾಮಿಗಳು ಈ ಆಂಜನೇಯನಿಗೆ ಲಿಂಗಧಾರಣೆ ಮಾಡಿದ್ದು, ಕೊರಳಿನಲ್ಲಿ ರುದ್ರಾಕ್ಷಿ ಮಾಲೆ ಇರುವುದು ಒಂದು ವಿಶೇಷ. ಸೊಂಟದಲ್ಲಿ ಕತ್ತಿ ಇರುವುದು...

  • ಅರಳಿಮರದ ಬುಡದಲ್ಲಿ ಕುಳಿತು ಸರ್ವಾಂತರ್ಯಾಮಿಯಾದ ಭಗವಂತನ ಸ್ವರೂಪವನ್ನು ಯೋಗಿಗಳಿಂದ ಕೇಳಿ ತಿಳಿದ ರೀತಿಯಲ್ಲೇ ಧ್ಯಾನ ಮಾಡತೊಡಗಿದ್ದರು. ಏಕಾಗ್ರಚಿತ್ತದಿಂದ...