ಮಿಡಲ್‌ ಕ್ಲಾಸ್‌ಗೆ ಮೆಡಲ್‌


Team Udayavani, Jul 6, 2019, 3:08 AM IST

lakshmi

ಮಧ್ಯಂತರ ಬಜೆಟ್‌ನಲ್ಲಿ ಪ್ರಸ್ತಾಪಿಸಿದ 5 ಲಕ್ಷ ರೂ.ವರೆಗಿನ ಆದಾಯಕ್ಕೆ ತೆರಿಗೆ ವಿನಾಯಿತಿಯನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಈ ಬಜೆಟ್‌ನಲ್ಲಿ ಜಾರಿಗೊಳಿಸಿದ್ದಾರೆ. 5 ಲಕ್ಷ ರೂ.ವರೆಗಿನ ಆದಾಯ ಹೊಂದಿರುವವರು ಶೇ. 100 ತೆರಿಗೆ ರಿಯಾಯಿತಿ ಪಡೆಯಲಿದ್ದಾರೆ.

ಆದರೆ ಇಲ್ಲಿ ಸರ್ಕಾರಕ್ಕೆ ಉಂಟಾಗುವ ನಷ್ಟವನ್ನು ಸರಿದೂಗಿಸಿಕೊಳ್ಳಲು 2 ಕೋಟಿ ರೂ.ಗಿಂತ ಹೆಚ್ಚಿನ ಆದಾಯ ಹೊಂದಿರುವವರು ಹೆಚ್ಚುವರಿ ಸರ್ಚಾರ್ಜ್‌ ತೆರಬೇಕಾಗುತ್ತದೆ. 2-5 ಕೋಟಿ ರೂ. ವಹಿವಾಟು ಹೊಂದಿರುವವರು ಶೇ. 25 ರಷ್ಟು ಸರ್ಚಾರ್ಜ್‌ ಪಾವತಿ ಮಾಡಬೇಕಾಗುತ್ತದೆ.

ಈ ಹಿಂದೆ ಇದು ಶೇ. 15 ರಷ್ಟಿತ್ತು. ಇದರಿಂದಾಗಿ ಇವರು ಹೆಚ್ಚುವರಿ ಶೇ. 3 ತೆರಿಗೆ ಪಾವತಿ ಮಾಡಿದಂತಾಗುತ್ತದೆ. ಇದೇ ರೀತಿ 5 ಕೋಟಿ ರೂ.ಗಿಂತ ಹೆಚ್ಚು ಆದಾಯ ಹೊಂದಿರುವವರು ಶೇ. 37 ರಷ್ಟು ಸರ್ಚಾರ್ಜ್‌ ಪಾವತಿ ಮಾಡಬೇಕು. ಮೂಲ ತೆರಿಗೆ ವಿನಾಯಿತಿಯನ್ನು 2 ಲಕ್ಷ ರೂ. ಇಂದ 2.5 ಲಕ್ಷ ರೂ.ಗೆ ಏರಿಕೆ ಮಾಡಲಾಗಿದೆ.

ಹಿರಿಯ ನಾಗರಿಕರಿಗೆ ಇದನ್ನು 2.5 ಲಕ್ಷ ರೂ. ಇಂದ 3 ಲಕ್ಷ ರೂ.ಗೆ ಏರಿಸಲಾಗಿದೆ. ಅಂದರೆ 2.5 ಲಕ್ಷ ರೂ. ಆದಾಯ ಹೊಂದಿರುವ 60 ಕ್ಕಿಂತ ಕಡಿಮೆ ವಯಸ್ಸಿನವರು ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸಬೇಕಿಲ್ಲ. 2.5 ಲಕ್ಷ ರೂ. ಇಂದ 5 ಲಕ್ಷ ರೂ.ವರೆಗೆ ಆದಾಯ ಹೊಂದಿರುವವರು ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸಬೇಕು.

ಇವರಿಗೆ ತೆರಿಗೆ ರಿಯಾಯಿತಿ ಇದ್ದರೂ ರಿಟರ್ನ್ಸ್ ಸಲ್ಲಿಕೆ ಮಾಡಬೇಕಾಗುತ್ತದೆ. ಅದೇ ರೀತಿ, 5 ಲಕ್ಷಕ್ಕಿಂತ ಹೆಚ್ಚು ಆದಾಯ ಇದ್ದವರು 2.5 ಲಕ್ಷ ರೂ. ಇಂದ 5 ಲಕ್ಷ ರೂ.ವರೆಗಿನ ಆದಾಯದ ಮೇಲೆ ಶೇ. 5 ರ ತೆರಿಗೆ ಪಾವತಿ ಮಾಡಬೇಕಾಗುತ್ತದೆ. ಇದು ಈ ಹಿಂದೆ ಶೇ. 10 ಇತ್ತು.

ಸ್ಟಾಂಡರ್ಡ್‌ ಡಿಡಕ್ಷನ್‌ 50 ಸಾವಿರಕ್ಕೆ: ನೌಕರ ವರ್ಗದವರು ಹಾಗೂ ಪಿಂಚಣಿದಾರರಿಗೆ ಒದಗಿಸಲಾಗುತ್ತಿರುವ ಸ್ಟಾಂಡರ್ಡ್‌ ಡಿಡಕ್ಷನ್‌ ಅನ್ನು 40 ಸಾವಿರ ರೂ. ಇಂದ 50 ಸಾವಿರ ರೂ.ಗೆ ಏರಿಕೆ ಮಾಡಲಾಗಿದೆ.

ತೆರಿಗೆ ಫೈಲಿಂಗ್‌ಗೆ ಪ್ಯಾನ್‌ ಬೇಕಿಲ್ಲ: ಆದಾಯ ತೆರಿಗೆ ಪಾವತಿ ಮಾಡಲು ಈವರೆಗೆ ಪ್ಯಾನ್‌ ಕಡ್ಡಾಯವಾಗಿತ್ತು. ಆದರೆ ಈ ನಿಯಮವನ್ನು ಈ ಬಾರಿಯ ಬಜೆಟ್‌ನಲ್ಲಿ ತೆಗೆದುಹಾಕಲಾಗಿದೆ. ಬದಲಿಗೆ ಆಧಾರ್‌ ಇದ್ದರೂ ಸಾಕು ಎಂಬ ಹೊಸ ನಿಯಮವನ್ನು ಜಾರಿಗೊಳಿಸಲಾಗಿದೆ. ಈಗಾಗಲೇ ಪ್ಯಾನ್‌ ಮತ್ತು ಆಧಾರ್‌ ಲಿಂಕ್‌ ಮಾಡಲಾಗಿದ್ದು, ಆಧಾರ್‌ ಬಳಸಿಯೂ ಆದಾಯ ತೆರಿಗೆ ಪಾವತಿಸಬಹುದು.
ಆದರೆ ಪ್ಯಾನ್‌ಗೆ ಆಧಾರ್‌ ಲಿಂಕ್‌ ಮಾಡಿದವರಿಗೆ ಮಾತ್ರ ಈ ಸೌಲಭ್ಯ ಅನ್ವಯವಾಗಲಿದೆ. ಸದ್ಯ ಪ್ಯಾನ್‌ ಹಾಗೂ ಆಧಾರ್‌ ಲಿಂಕ್‌ ಮಾಡಿಲ್ಲದಿದ್ದರೆ, ಪ್ಯಾನ್‌ ಕಾರ್ಡ್‌ ಅನ್ನು ಅಮಾನ್ಯಗೊಳಿಸಲಾಗುತ್ತಿದೆ. ಆದರೆ ಈಗಾಗಲೇ ಪ್ಯಾನ್‌ ಕಾರ್ಡ್‌ ಬಳಸಿ ಮಾಡಿದ ವಹಿವಾಟುಗಳನ್ನು ರಕ್ಷಿಸುವ ದೃಷ್ಟಿಯಿಂದ, ಪ್ಯಾನ್‌ ಕಾರ್ಡ್‌ ಅನ್ನು ನಿಷ್ಕ್ರಿಯಗೊಳಿಸಲು ನಿರ್ಧರಿಸಲಾಗಿದೆ.

ರಿಟರ್ನ್ ಫೈಲಿಂಗ್‌ ಕಡ್ಡಾಯ: ಒಂದು ವಿತ್ತ ವರ್ಷದಲ್ಲಿ ಒಂದು ಕೋಟಿ ರೂಪಾಯಿಗೂ ಹೆಚ್ಚು ಡೆಪಾಸಿಟ್‌ ಮಾಡಿದ ಎಲ್ಲ ವ್ಯಕ್ತಿಗಳೂ ರಿಟರ್ನ್ ಫೈಲಿಂಗ್‌ ಮಾಡುವುದು ಕಡ್ಡಾಯವಾಗಿರುತ್ತದೆ. ಅಷ್ಟೇ ಅಲ್ಲ, ವಿದೇಶ ಪ್ರಯಾಣದಲ್ಲಿ 2 ಲಕ್ಷ ರೂ. ವೆಚ್ಚ ಮಾಡಿದರೆ ಅಥವಾ 1 ಲಕ್ಷ ರೂ. ವಿದ್ಯುತ್‌ ಬಿಲ್‌ ಪಾವತಿ ಮಾಡಿದರೆ ಕೂಡ ರಿಟರ್ನ್ ಫೈಲ್‌ ಮಾಡುವುದು ಕಡ್ಡಾಯವಾಗಿರುತ್ತದೆ.

ಎಲೆಕ್ಟ್ರಿಕ್‌ ವಾಹನ ಖರೀದಿಗೆ ಪ್ರೋತ್ಸಾಹ: ಎಲೆಕ್ಟ್ರಿಕ್‌ ವಾಹನಗಳ ಬಳಕೆ ಪ್ರೋತ್ಸಾಹಿಸುವ ದೃಷ್ಟಿಯಿಂದ ಮಹತ್ವದ ಕ್ರಮ ಕೈಗೊಂಡಿರುವ ಕೇಂದ್ರ ಸರ್ಕಾರ, ಆದಾಯ ತೆರಿಗೆಯಲ್ಲಿ ವಿನಾಯಿತಿ ನೀಡಲು ನಿರ್ಧರಿಸಿದೆ. 1.5 ಲಕ್ಷ ರೂ.ವರೆಗೆ ಆದಾಯ ತೆರಿಗೆ ವಿನಾಯಿತಿಯನ್ನು ಪಡೆಯಬಹುದಾಗಿದೆ. ಇದು ಸಾಲದ ಮೇಲಿನ ಬಡ್ಡಿಗೆ ಮಾತ್ರ ಅನ್ವಯಿಸಲಿದ್ದು, ಒಟ್ಟು ಸಾಲದ ಮೇಲೆ 2.5 ಲಕ್ಷ ರೂ.ವರೆಗೂ ವಿನಾಯಿತಿ ಪಡೆಯಬಹುದಾಗಿದೆ. ಇನ್ನೊಂದೆಡೆ ಬ್ಯಾಟರಿಗಳನ್ನು ಉತ್ಪಾದಿಸಲು ಪ್ರೋತ್ಸಾಹ ನೀಡಲಾಗುತ್ತಿದೆ.

ಎನ್‌ಪಿಎಸ್‌ಗೆ ಇನ್ನು ತೆರಿಗೆ ಇಲ್ಲ: ಕಳೆದ ಡಿಸೆಂಬರ್‌ನಲ್ಲಿ ಸಂಪುಟ ಸಭೆಯಲ್ಲಿ ಘೋಷಣೆಯಾದಂತೆ ಎನ್‌ಪಿಎಸ್‌ನಿಂದ ಹಣ ಹಿಂಪಡೆಯುವುದರ ಮೇಲೆ ಈ ಹಿಂದೆ ವಿಧಿಸಲಾಗುತ್ತಿದ್ದ ತೆರಿಗೆಯನ್ನು ಸಂಪೂರ್ಣವಾಗಿ ತೆಗೆದುಹಾಕಲಾಗಿದೆ. ಸದ್ಯ ಎನ್‌ಪಿಎಸ್‌ನಿಂದ ಹಣ ಹಿಂಪಡೆಯುವಾಗ ಶೇ. 40 ರಷ್ಟು ಮೊತ್ತದ ಮೇಲೆ ಆದಾಯ ತೆರಿಗೆ ವಿನಾಯಿತಿ ನೀಡಲಾಗುತ್ತಿತ್ತು. ಈಗ ಇದನ್ನು ಶೇ. 100 ಕ್ಕೆ ಏರಿಸಲಾಗಿದ್ದು, ಎನ್‌ಪಿಎಸ್‌ನಿಂದ ಹಣ ಹಿಂಪಡೆದರೆ ಯಾವುದೇ ಆದಾಯ ತೆರಿಗೆ ಪಾವತಿ ಮಾಡುವ ಅಗತ್ಯವಿಲ್ಲ.

ಕಾರ್ಪೊರೇಟ್‌ ವಲಯಕ್ಕೆ ನಿರಾಳ: ಉದ್ಯಮ ವಲಯದ ನಿರೀಕ್ಷೆಯಂತೆ ಕಾರ್ಪೊರೇಟ್‌ ತೆರಿಗೆಯನ್ನು ಶೇ. 30 ರಿಂದ ಶೇ. 25ಕ್ಕೆ ಕೇಂದ್ರ ಸರ್ಕಾರ ಇಳಿಕೆ ಮಾಡಿದೆ. 400ಕೋಟಿ ರೂ. ವಾರ್ಷಿಕ ವಹಿವಾಟು ಹೊಂದಿರುವ ಕಾರ್ಪೊರೇಟ್‌ ಕಂಪನಿಗಳಿಗೆ ಇದು ಅನ್ವಯವಾಗುತ್ತದೆ. ಕಳೆದ ವರ್ಷ 250 ಕೋಟಿ ರೂ. ವಹಿವಾಟು ಹೊಂದಿರುವ ಕಾರ್ಪೊರೇಟ್‌ ಕಂಪನಿಗಳಿಗೆ ಆದಾಯ ತೆರಿಗೆಯನ್ನು ಶೇ. 25 ಕ್ಕೆ ಇಳಿಕೆ ಮಾಡಲಾಗಿತ್ತು. ಸಣ್ಣ ಉದ್ಯಮಗಳಿಗೆ ಪೂರಕ ವಾತಾವರಣವನ್ನು ಒದಗಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಈ ಕ್ರಮ ಕೈಗೊಂಡಿದೆ.

ಖಾಸಗಿ ಮತ್ತು ಸರ್ಕಾರಿ ಕಂಪನಿಗಳೆರಡೂ ನಿವ್ವಳ ಆದಾಯದ ಮೇಲೆ ತೆರಿಗೆ ಪಾವತಿ ಮಾಡಬೇಕಿದೆ. ಈ ಹಿಂದೆ 500 ಕೋಟಿ ರೂ.ವರೆಗೆ ಆದಾಯ ಹೊಂದಿರುವ ಕಂಪನಿಗಳು ಶೇ. 30ರ ತೆರಿಗೆ ಪಾವತಿ ಮಾಡಬೇಕಿತ್ತು. ಈಗ 400 ಕೋಟಿ ರೂ.ವರೆಗೆ ಆದಾಯ ಹೊಂದಿರುವ ಕಂಪನಿಗಳು ಶೇ. 25 ಹಾಗೂ 500 ಕೋಟಿ ರೂ. ವಹಿವಾಟು ಹೊಂದಿರುವ ಕಂಪನಿಗಳು ಶೇ. 30 ಆದಾಯ ತೆರಿಗೆ ಪಾವತಿ ಮಾಡಬೇಕಿದೆ.

ಹೆಚ್ಚು ಕ್ಯಾಶ್‌ಗೆ 2% ತೆರಿಗೆ: ದೇಶದಲ್ಲಿ ಡಿಜಿಟಲ್‌ ವಹಿವಾಟಿಗೆ ಹೆಚ್ಚಿನ ಪ್ರೋತ್ಸಾಹ ನೀಡುವುದಕ್ಕಾಗಿ, 1 ಕೋಟಿ ರೂ.ಗಿಂತ ಹೆಚ್ಚು ನಗದು ಹಿಂಪಡೆಯುವ ವ್ಯಕ್ತಿಗೆ ಶೇ. 2 ಟಿಡಿಎಸ್‌ ವಿಧಿಸಲು ನಿರ್ಧರಿಸಲಾಗಿದೆ. ಆದರೆ ಕೆಲವು ಉದ್ಯಮಗಳಿಗೆ ಹೆಚ್ಚಿನ ಪ್ರಮಾಣದ ನಗದು ವಹಿವಾಟು ನಡೆಸುವುದು ಅಗತ್ಯವಾಗಿದ್ದು, ಇವುಗಳಿಗೆ ಈ ನಿರ್ಬಂಧದಿಂದ ವಿನಾಯಿತಿ ನೀಡಲಾಗಿದೆ. ಯಾವ ಉದ್ಯಮಗಳಿಗೆ ಇದರಿಂದ ವಿನಾಯಿತಿ ನೀಡಲಾಗುತ್ತದೆ ಎಂಬುದನ್ನು ಆರ್‌ಬಿಐ ಸಲಹೆ ಪಡೆದು ಕೇಂದ್ರ ಸರ್ಕಾರ ಮುಂದಿನ ದಿನಗಳಲ್ಲಿ ಪ್ರಕಟಣೆ ಹೊರಡಿಸಲಿದೆ. ಡಿಜಿಟಲ್‌ ವಹಿವಾಟು ಹೆಚ್ಚಳಕ್ಕೆ ನರೇಂದ್ರ ಮೋದಿ ಸರ್ಕಾರ ಕಳೆದ ಐದು ವರ್ಷದಿಂದಲೂ ಹೆಚ್ಚಿನ ಪ್ರೋತ್ಸಾಹ ನೀಡುತ್ತಿದ್ದು, ಈ ಕ್ರಮ ಈ ನಿಟ್ಟಿನಲ್ಲಿ ಮತ್ತೂಂದು ಮಹತ್ವದ ಹೆಜ್ಜೆಯಾಗಿದೆ.

ಟಾಪ್ ನ್ಯೂಸ್

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.