ಯುದ್ಧ ಭೀತಿ; ಭಾರತೀಯ ಪ್ರಜೆಗಳು ಇರಾಕ್ ಪ್ರಯಾಣ ಮುಂದೂಡಿ; ವಿದೇಶಾಂಗ ಸಚಿವಾಲಯ

ಇರಾಕ್ ನಲ್ಲಿರುವ ಭಾರತೀಯ ಪ್ರಜೆಗಳು ಇರಾಕ್ ನೊಳಗೆ ಪ್ರಯಾಣಿಸದಂತೆ ಎಚ್ಚರಿಕೆ ಸಲಹೆ ನೀಡಿದೆ.

Team Udayavani, Jan 8, 2020, 2:58 PM IST

ನವದೆಹಲಿ: ಮಧ್ಯ ಏಷ್ಯಾದಲ್ಲಿ ಯುದ್ಧ ಭೀತಿ ಆವರಿಸಿರುವ ಹಿನ್ನೆಲೆಯಲ್ಲಿ ಭಾರತೀಯ ಪ್ರಜೆಗಳು ಮುಂದಿನ ಸೂಚನೆ ನೀಡುವವರೆಗೆ ಇರಾಕ್ ಗೆ ಪ್ರಯಾಣ ಬೆಳೆಸುವುದನ್ನು ಮುಂದೂಡಬೇಕು ಎಂದು ಕೇಂದ್ರ ಸರ್ಕಾರ ಬುಧವಾರ ಸೂಚನೆ ನೀಡಿದೆ.

ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರವೀಶ್ ಕುಮಾರ್ ಅವರು, ಇರಾಕ್ ಗೆ ಭಾರತೀಯ ಪ್ರಜೆಗಳು ಪ್ರಯಾಣಿಸದಂತೆ ಸಲಹೆ ನೀಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ರವೀಶ್, ಇರಾಕ್ ನಲ್ಲಿನ ಸದ್ಯದ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಭಾರತೀಯ ಪ್ರಜೆಗಳು ಇರಾಕ್ ಪ್ರಯಾಣ ಮುಂದೂಡಬೇಕು. ಮುಂದಿನ ಪ್ರಕಟಣೆಯವರೆಗೆ ಪ್ರಯಾಣ ಕೈಗೊಳ್ಳಬಾರದು ಅಲ್ಲದೇ ಇರಾಕ್ ನಲ್ಲಿರುವ ಭಾರತೀಯ ಪ್ರಜೆಗಳು ಇರಾಕ್ ನೊಳಗೆ ಪ್ರಯಾಣಿಸದಂತೆ ಎಚ್ಚರಿಕೆ ಸಲಹೆ ನೀಡಿದೆ.

ಇರಾಕ್ ನಲ್ಲಿ ನೆಲೆಸಿರುವ ಭಾರತೀಯರಿಗೆ ಎಲ್ಲಾ ರೀತಿಯ ನೆರವು ಮತ್ತು ಸೌಲಭ್ಯವನ್ನು ಬಾಗ್ದಾದ್ ನಲ್ಲಿರುವ ನಮ್ಮ ರಾಯಭಾರ ಕಚೇರಿ ಹಾಗೂ ಇರ್ಬಿಲ್ ನಲ್ಲಿರುವ ರಾಯಭಾರ ಕಚೇರಿ ನೀಡಲಿದೆ ಎಂದು ತಿಳಿಸಿದ್ದಾರೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ