Pulwama: ಪುಲ್ವಾಮಾದಲ್ಲಿ ಭಯೋತ್ಪಾದಕರಿಂದ ವಲಸೆ ಕಾರ್ಮಿಕನ ಗುಂಡಿಕ್ಕಿ ಹತ್ಯೆ
Team Udayavani, Oct 30, 2023, 1:47 PM IST
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಉತ್ತರ ಪ್ರದೇಶದ ವಲಸೆ ಕಾರ್ಮಿಕನನ್ನು ಭಯೋತ್ಪಾದಕರು ಇಂದು ಗುಂಡಿಕ್ಕಿ ಕೊಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
“ಪುಲ್ವಾಮಾದ ತುಮ್ಚಿ ನೌಪೋರಾ ಪ್ರದೇಶದಲ್ಲಿ ಯು.ಪಿ.ಯ ಮುಕೇಶ್ ಎಂದು ಗುರುತಿಸಲಾದ ಕಾರ್ಮಿಕನ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದು ಗಂಭೀರ ಗಾಯಗೊಂಡ ಮುಕೇಶ್ ಮೃತಪಟ್ಟಿದ್ದಾರೆ. ಗುಂಡಿನ ದಾಳಿ ನಡೆಸಿದ ಪ್ರದೇಶವನ್ನು ಪೊಲೀಸರು ಸುತ್ತುವರಿದಿದ್ದು ಭಯೋತ್ಪಾದಕರ ಪತ್ತೆಗೆ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಕಾಶ್ಮೀರ ವಲಯ ಪೊಲೀಸರು ಎಕ್ಸ್ನಲ್ಲಿ ತಿಳಿಸಿದ್ದಾರೆ.
ಕಳೆದ 24 ಗಂಟೆಗಳಲ್ಲಿ ಪುಲ್ವಾಮಾದಲ್ಲಿ ನಡೆದ ಎರಡನೇ ಉಗ್ರರ ದಾಳಿ ಇದಾಗಿದೆ. ಇನ್ಸ್ಪೆಕ್ಟರ್ ಮಸ್ರೂರ್ ಅಹ್ಮದ್ ವಾನಿ ಭಾನುವಾರ ಈದ್ಗಾ ಪ್ರದೇಶದಲ್ಲಿ ಕ್ರಿಕೆಟ್ ಆಡುತ್ತಿದ್ದಾಗ ಮೂರು ಬಾರಿ ಗುಂಡು ಹಾರಿಸಿದ್ದರು.
ದಾಳಿಯ ನಂತರ ಭದ್ರತಾ ಪಡೆಗಳು ಪುಲ್ವಾಮಾ ಮತ್ತು ಜಮ್ಮು ಮತ್ತು ಕಾಶ್ಮೀರದ ಇತರ ಭಾಗಗಳಲ್ಲಿ ವಾಹನಗಳು ಮತ್ತು ಪಾದಚಾರಿಗಳ ತಪಾಸಣೆಯನ್ನು ತೀವ್ರಗೊಳಿಸಿವೆ.
ಇದನ್ನೂ ಓದಿ: Alphonse Puthren: ಸಿನಿಮಾರಂಗ ಬಿಡುವ ಬಗ್ಗೆ ʼಪ್ರೇಮಂʼ ನಿರ್ದೇಶಕ ಪೋಸ್ಟ್; ಕಾರಣವೇನು?
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್ ಮೈಂಡ್; ಗೋಲ್ಡಿ ಬ್ರಾರ್ ಶೂಟೌಟ್ – ವರದಿ
ಸಲ್ಮಾನ್ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ
Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
ಧ್ರುವ್ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್ ಪೋಸ್ಟ್ನ ಸತ್ಯಾಸತ್ಯತೆ ಏನು?
MUST WATCH
ಹೊಸ ಸೇರ್ಪಡೆ
ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…
Kollywood: ದಳಪತಿ ವಿಜಯ್ ʼGOATʼ ಸಿನಿಮಾದಲ್ಲಿ ಧೋನಿ, ರುತ್ ರಾಜ್ ನಟನೆ?
Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ
ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ
Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್ಗೆ ಗೆಲುವು: ಮುನಿಯಪ್ಪ ವಿಶ್ವಾಸ