ಬಾಲಕೋಟ್ ದಾಳಿ ಬಳಿಕ ಉಗ್ರರು ಆಫ‌್ಗನ್‌ಗೆ ಶಿಫ್ಟ್!

ಕಾಬೂಲ್, ಕಂದಹಾರ್‌ನಲ್ಲಿ ಹೈ ಅಲರ್ಟ್‌

Team Udayavani, Jul 8, 2019, 5:00 AM IST

m-32

ನವದೆಹಲಿ: ಭಾರತೀಯ ವಾಯುಪಡೆಯು ಬಾಲಕೋಟ್‌ನ ಉಗ್ರರ ನೆಲೆಗಳನ್ನು ಗುರಿಯಾಗಿಸಿಕೊಂಡು ಸರ್ಜಿಕಲ್ ದಾಳಿ ನಡೆಸಿದರೂ ಪಾಕಿಸ್ತಾನ ತನ್ನ ‘ಉಗ್ರ ಪೋಷಣೆ’ಯ ಕೆಲಸವನ್ನು ಮಾತ್ರ ನಿಲ್ಲಿಸಿಲ್ಲ. ಬಾಲಕೋಟ್ ದಾಳಿಯ ಬಳಿಕ ಪಾಕಿಸ್ತಾನಿ ಉಗ್ರರು ತಮ್ಮ ಕಾರ್ಯಸ್ಥಳವನ್ನು ಬದಲಿಸಿದ್ದು, ಅಫ್ಘಾನಿಸ್ತಾನಕ್ಕೆ ತೆರಲಿ ಅಲ್ಲಿ ಉಗ್ರ ತರಬೇತಿ ನೀಡುವ ಕೆಲಸದಲ್ಲಿ ನಿರತರಾಗಿದ್ದಾರೆ ಎಂಬ ಆತಂಕಕಾರಿ ವಿಚಾರವನ್ನು ಕೇಂದ್ರ ಗುಪ್ತಚರ ಇಲಾಖೆ ಬಹಿರಂಗಪಡಿಸಿದೆ.

ಜೈಶ್‌-ಎ-ಮೊಹಮ್ಮದ್‌, ಲಷ್ಕರ್‌-ಎ-ತೊಯ್ಬಾ ಸೇರಿದಂತೆ ಕೆಲವು ಉಗ್ರ ಸಂಘಟನೆಗಳು ಈಗ ಅಫ್ಘಾನಿಸ್ತಾನದ ಕುನಾರ್‌, ನಂಗರ್ಹಾರ್‌, ನುರಿಸ್ತಾನ್‌ ಮತ್ತು ಕಂದಹಾರ್‌ ಪ್ರಾಂತ್ಯಗಳಿಗೆ ಶಿಫ್ಟ್ ಆಗಿವೆ. ಅಷ್ಟೇ ಅಲ್ಲ, ಈ ಎರಡೂ ಸಂಘಟನೆಗಳು ಆಫ‌್ಗನ್‌ ಮೂಲಕ ತಾಲಿಬಾನ್‌ ಹಾಗೂ ಹಖನಿ ನೆಟ್ವರ್ಕ್‌ ಜತೆ ಕೈಜೋಡಿಸಿಕೊಂಡಿವೆ. ಅಲ್ಲಿ ಹಲವಾರು ಉಗ್ರರಿಗೆ ತರಬೇತಿ ಕೂಡ ನೀಡಲಾಗುತ್ತಿದೆ ಎಂದು ಗುಪ್ತಚರ ಮೂಲಗಳು ಮಾಹಿತಿ ನೀಡಿವೆ.

ಈ ಹಿನ್ನೆಲೆಯಲ್ಲಿ ಕಾಬೂಲ್ ಹಾಗೂ ಕಂದಹಾರ್‌ನಲ್ಲಿರುವ ಭಾರತೀಯ ರಾಜತಾಂತ್ರಿಕ ಕಚೇರಿಗಳಲ್ಲಿ ಬಿಗಿಭದ್ರತೆ ಏರ್ಪಡಿಸಲಾಗಿದ್ದು, ಹೈಅಲರ್ಟ್‌ ಘೋಷಿಸಲಾಗಿದೆ ಎಂದು ಹಿಂದುಸ್ಥಾನ್‌ ಟೈಮ್ಸ್‌ ವರದಿ ಮಾಡಿದೆ.

ಎಫ್ಎಟಿಎಫ್ನಿಂದ ಪಾರಾಗುವ ಉದ್ದೇಶ: ಉಗ್ರರ ವಿರುದ್ಧ ಪಾಕಿಸ್ತಾನವು ಕಠಿಣ ಕ್ರಮ ಕೈಗೊಳ್ಳದೇ ಹೋದಲ್ಲಿ, ಪ್ರಸಕ್ತ ವರ್ಷಾಂತ್ಯದಲ್ಲಿ ಪ್ಯಾರಿಸ್‌ನಲ್ಲಿ ನಡೆಯಲಿರುವ ಅಂತಾರಾಷ್ಟ್ರೀಯ ಹಣಕಾಸು ಕ್ರಿಯಾ ಪಡೆ(ಎಫ್ಎಟಿಎಫ್)ಯ ಸಭೆಯಲ್ಲಿ ಪಾಕಿಸ್ತಾನವನ್ನು ಕಪ್ಪುಪಟ್ಟಿಗೆ ಸೇರಿಸಲಾಗುತ್ತದೆ. ಹೀಗಾಗಿ, ಕಪ್ಪುಪಟ್ಟಿಯಿಂದ ತಪ್ಪಿಸಿಕೊಳ್ಳುವ ಸಲುವಾಗಿಯೇ ಉಗ್ರರನ್ನು ಪಾಕಿಸ್ತಾನವೇ ಆಫ‌್ಗನ್‌ ಕಡೆಗೆ ಕಳುಹಿಸಿರಬಹುದೇ ಎಂಬ ಶಂಕೆ ಭಾರತೀಯ ಭದ್ರತಾ ಸಂಸ್ಥೆಗಳದ್ದು ಎನ್ನಲಾಗಿದೆ.

ಲಷ್ಕರ್‌ನಿಂದ ತರಬೇತಿ ಕೇಂದ್ರಗಳು: ಅಫ್ಘಾನಿಸ್ತಾನದ ನಂಗರ್ಹಾರ್‌, ನುರಿಸ್ತಾನ್‌, ಕುನಾರ್‌, ಹೆಲ್ಮಾಂಡ್‌ ಮತ್ತು ಕಂದಹಾಪ್‌ ಪ್ರಾಂತ್ಯಗಳಲ್ಲಿ ಲಷ್ಕರ್‌ ಅನೇಕ ತರಬೇತಿ ಕೇಂದ್ರಗಳನ್ನು ಆರಂಭಿಸಿದೆ. ತನ್ನ ಸದಸ್ಯರನ್ನು ಪೇಶಾವರದಿಂದ ಕಾಬೂಲ್ಗೆ ಕರೆಸಿಕೊಂಡು, ಇಲ್ಲೇ ತರಬೇತಿ ನೀಡಲು ಉದ್ದೇಶಿಸಿದೆ. ತಾಲಿಬಾನ್‌ ನೆರವಿನಿಂದ ಈ ಸದಸ್ಯರನ್ನು ವಿಧ್ವಂಸಕ ಕೃತ್ಯಗಳಿಗೆ ಸಜ್ಜುಗೊಳಿಸಲಾಗುತ್ತಿದೆ. ಆಫ‌್ಗನ್‌ನಲ್ಲಿ 300ಕ್ಕೂ ಹೆಚ್ಚು ಲಷ್ಕರ್‌ ಉಗ್ರರು ಈಗಾಗಲೇ ಇದ್ದು, ಇವರು ಅಮೆರಿಕ ಮತ್ತು ಮಿತ್ರಪಕ್ಷಗಳ ಪಡೆಗಳಿಗೂ ಅತಿದೊಡ್ಡ ಅಪಾಯ ಉಂಟುಮಾಡಿದೆ ಎಂದು ಇತ್ತೀಚೆಗಷ್ಟೇ ಪೆಂಟಗಟ್ ವರದಿ ಹೇಳಿತ್ತು.

ಟಾಪ್ ನ್ಯೂಸ್

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Aravind kejriwal

Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ

Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ

Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.