15 ವರ್ಷದ ಬಾಲಕನಿಂದ 13 ವರ್ಷದ ಬಾಲಕಿ ಮೇಲೆ ಎರಡು ವರ್ಷಗಳಿಂದ ಅತ್ಯಾಚಾರ
Team Udayavani, Apr 20, 2022, 12:32 PM IST
ಮಹಾಡ್: ಬಾಲಕನೊಬ್ಬ ತನ್ನ ಗ್ರಾಮದ ಬಾಲಕಿಯ ಮೇಲೆ ಎರಡು ವರ್ಷಗಳಿಂದ ಅತ್ಯಾಚಾರ ನಡೆಸುತ್ತಿದ್ದ ಘಟನೆ ಮಹಾಡ್ ತಾಲೂಕಿನಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಬಾಲಕಿ ಗರ್ಭಿಣಿಯಾಗಿದ್ದ ಕಾರಣ ಆಕೆಯ ಹೆತ್ತವರು ನೀಡಿದ ದೂರಿನ ಮೇರೆಗೆ ಬಾಲಕನ ವಿರುದ್ಧ ಪ್ರಕರಣ ದಾಖಲಾಗಿದೆ.
ಸಂತ್ರಸ್ತ 13 ವರ್ಷದ ಬಾಲಕಿಯು ಕೊತುರ್ಡೆ ನಿವಾಚಿ ವಾಡಿಯಲ್ಲಿ ವಾಸಿಸುತ್ತಾಳೆ. ಅದೇ ಗ್ರಾಮದ 15ರ ಹರೆಯದ ಬಾಲಕ ಕಳೆದ ಎರಡು ವರ್ಷಗಳಿಂದ ಆಕೆಯೊಂದಿಗೆ ಲೈಂಗಿಕ ಸಂಬಂಧ ಹೊಂದಿದ್ದ. ಆಕೆ ಗರ್ಭಿಣಿಯಾಗಿರುವುದನ್ನು ಆಕೆಯ ಪೋಷಕರು ಗಮನಿಸಿದ್ದು, ಸಂತ್ರಸ್ತೆಯ ತಾಯಿ ದೂರು ನೀಡಿದ ಬಳಿಕ ತಾಲೂಕು ಪೊಲೀಸರು ಬಾಲಕನ ವಿರುದ್ಧ ಪೋಸ್ಕೋ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರೋಪಿಯೂ ಅಪ್ರಾಪ್ತ ವಯಸ್ಕನಾಗಿದ್ದರಿಂದ ಆತನ ಹೆತ್ತವರಿಗೆ ನೋಟಿಸ್ ಜಾರಿ ಮಾಡಲಾಗಿದೆ. ಪ್ರಕರಣದ ಬಗ್ಗೆ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಸಹಾಯಕ ಪೊಲೀಸ್ ನಿರೀಕ್ಷಕ ಎಸ್. ಬಿ. ಅವಸರ್ಮೋಲ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ