ಯುಪಿ: ಬಹಿರ್ದೆಸೆಗೆ ತೆರಳಿದ್ದ ಅಪ್ರಾಪ್ತ ಸಹೋದರಿಯರಿಬ್ಬರ ಮೇಲೆ ಗ್ಯಾಂಗ್ ರೇಪ್
Team Udayavani, Jul 3, 2022, 4:27 PM IST
ಲಕ್ನೋ : ಜಿಲ್ಲೆಯಲ್ಲಿ ಇಬ್ಬರು ಅಪ್ರಾಪ್ತ ವಯಸ್ಕ ಸಹೋದರಿಯರಿಬ್ಬರ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಆರೋಪದ ಮೇಲೆ ಐವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.ಘೋಸಿ ಪೊಲೀಸ್ ಠಾಣಾ ವ್ಯಾಪ್ತಿಯ ನಡ್ವಾಸರೈ ಪ್ರದೇಶದ ಗ್ರಾಮದಲ್ಲಿ ಈ ಘಟನೆ ನಡೆದಿದೆ.
17 ಮತ್ತು 15 ವರ್ಷ ವಯಸ್ಸಿನ ಇಬ್ಬರು ಸಹೋದರಿಯರ ಮೇಲೆ ಐವರು ಅತ್ಯಾಚಾರ ಎಸಗಿದ್ದಾರೆ. ಆರೋಪಿಗಳನ್ನು ಶನಿವಾರ ಬಂಧಿಸಲಾಗಿದೆ ಎಂದು ಘೋಸಿ ಪೊಲೀಸ್ ಠಾಣೆಯ ಸ್ಟೇಷನ್ ಹೌಸ್ ಆಫೀಸರ್ ನಾಗೇಶ್ ಉಪಾಧ್ಯಾಯ ತಿಳಿಸಿದ್ದಾರೆ.
ಸಂತ್ರಸ್ತರ ತಂದೆ ನೀಡಿದ ದೂರಿನ ಪ್ರಕಾರ, ಜೂನ್ 30 ರಂದು ತನ್ನ ಹೆಣ್ಣುಮಕ್ಕಳು ಪ್ರಕೃತಿಯ ಕರೆಗೆ ಹಾಜರಾಗಲು ಹೊರಟಿದ್ದಾಗ ಆರೋಪಿಗಳು ದೌರ್ಜನ್ಯ ಎಸಗಿದ್ದಾರೆ. ಘಟನೆಯ ಬಗ್ಗೆ ಯಾರಿಗಾದರೂ ತಿಳಿಸಿದರೆ ಇಬ್ಬರನ್ನೂ ಕೊಲ್ಲುವುದಾಗಿ ಆರೋಪಿಗಳು ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ಹೇಳಿಕೊಂಡಿದ್ದಾರೆ.
ಆರೋಪಿಗಳನ್ನು ವಿಶಾಲ್ (22), ಅರುಣ್ (19), ಸುದಿನ್ (23), ಜಿತೇಶ್ (20) ಮತ್ತು ಚಂದ್ರಕಾಂತ್ (20) ಎಂದು ಗುರುತಿಸಲಾಗಿದೆ. ಆರೋಪಿಗಳ ವಿರುದ್ಧ ಐಪಿಸಿ ಮತ್ತು ಪೋಕ್ಸೊ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ) ಕಾಯ್ದೆಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್