Missing; ಬಿಎಸ್ಎಫ್ ಯೋಧ ಬಿಹಾರದ ಮನೆಯಲ್ಲಿ ಪತ್ತೆ: ಇಲಾಖಾ ವಿಚಾರಣೆ
Team Udayavani, Sep 10, 2023, 5:21 PM IST
ಪೂಂಚ್: ಜಮ್ಮು ಮತ್ತು ಕಾಶ್ಮೀರದ ಜಿಲ್ಲೆಯ ಗಡಿ ನಿಯಂತ್ರಣ ರೇಖೆ (ಎಲ್ಒಸಿ) ಬಳಿ ತನ್ನ ಕರ್ತವ್ಯದ ಸ್ಥಳದಿಂದ ನಾಪತ್ತೆಯಾದ ಎರಡು ದಿನಗಳ ನಂತರ,ಬಿಎಸ್ಎಫ್ ಯೋಧ ಬಿಹಾರದ ನಿವಾಸದಲ್ಲಿ ಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.
ಶುಕ್ರವಾರ ಮುಂಜಾನೆ ಬಾಲಕೋಟ್ ಸೆಕ್ಟರ್ನ ಭರಣಿಯ ಫಾರ್ವರ್ಡ್ ಪೋಸ್ಟ್ನಿಂದ ಯೋಧ ಕಾಣೆಯಾಗಿದ್ದ ಎಂದು ವರದಿಯಾಗಿದ್ದು, ನಂತರ ಬಿಎಸ್ಎಫ್ ಸಂಬಂಧಿತ ಪೊಲೀಸ್ ಠಾಣೆಯಲ್ಲಿ ಕಾಣೆಯಾದ ವ್ಯಕ್ತಿಯ ವರದಿಯನ್ನು ದಾಖಲಿಸಿತ್ತು.
ಏಕಾಏಕಿ ನಾಪತ್ತೆಯಾದ ಯೋಧನನ್ನು ಭಾನುವಾರ ಬೆಳಗ್ಗೆ ಬಿಹಾರದಲ್ಲಿರುವ ಆತನ ಮನೆಯಲ್ಲಿ ಪತ್ತೆ ಹಚ್ಚಲಾಗಿದ್ದು, ಮುಂದಿನ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಅನುಮತಿಯಿಲ್ಲದೆ ತನ್ನ ಕೆಲಸವನ್ನು ಬಿಟ್ಟು ಹೋಗಿದ್ದಕ್ಕಾಗಿ ಬಿಎಸ್ಎಫ್, ಯೋಧನ ವಿರುದ್ಧ ಇಲಾಖಾ ವಿಚಾರಣೆಯನ್ನು ಪ್ರಾರಂಭಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್
Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ
Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ
Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ
MUST WATCH
ಹೊಸ ಸೇರ್ಪಡೆ
Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್
Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!
Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ
Sandalwood: ಧೀರೇನ್ ರೀ ಇಂಟ್ರೊಡಕ್ಷನ್