ಎಂ.ಜೆ. ಅಕ್ಬರ್‌ ರಾಜೀನಾಮೆ ?


Team Udayavani, Oct 12, 2018, 6:00 AM IST

z-49.jpg

ಹೊಸದಿಲ್ಲಿ: “ಮಿ ಟೂ’ ಅಭಿಯಾನದಡಿ ಐವರು ಮಹಿಳೆಯರಿಂದ ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ವಿದೇಶಾಂಗ ಇಲಾಖೆ ಸಹಾಯಕ ಸಚಿವ ಎಂ.ಜೆ. ಅಕ್ಬರ್‌ ರಾಜೀನಾಮೆ ಸಲ್ಲಿಸುವ ಸಾಧ್ಯತೆ ಇದೆ. ಈ ಬಗ್ಗೆ ಮೂಲಗಳನ್ನು ಉಲ್ಲೇಖೀಸಿ “ಎಎನ್‌ಐ’ ಸುದ್ದಿ ಸಂಸ್ಥೆ ವರದಿ ಮಾಡಿದೆ. ಸದ್ಯ ಅವರು ನೈಜೀರಿಯಾದ ಲಾಗೋಸ್‌ನಲ್ಲಿ ಕಾರ್ಯಕ್ರಮದಲ್ಲಿ ಭಾಗ ವಹಿಸುತ್ತಿದ್ದಾರೆ. ಕೆಲವೊಂದು ಮಾಧ್ಯಮ ಗಳಲ್ಲಿ ವರದಿಯಾದಂತೆ ಆರೋಪಗಳ ಹಿನ್ನೆಲೆಯಲ್ಲಿ ಶುಕ್ರವಾರವೇ ಸ್ವದೇಶಕ್ಕೆ ವಾಪಸಾಗಲಿದ್ದಾರೆ ಎಂದು ಹೇಳಲಾಗಿತ್ತು. ಅನಂತರ ಸ್ಪಷ್ಟನೆ ನೀಡಿರುವ ಕೇಂದ್ರ ಸರಕಾರ ಅವರು ನಿಗದಿತ ಕಾರ್ಯ ಕ್ರಮಗಳನ್ನು ಮುಗಿಸಿ ರವಿವಾರ ವಾಪಸಾಗುವರು ಎಂದಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಹಿಳೆಯರ ಹಕ್ಕುಗಳ ಸಂರಕ್ಷಣೆಗೆ ಬದ್ಧವಾಗಿರುವ ಸರಕಾರ ಎಂಬ ಹೆಗ್ಗಳಿಕೆ ಮೋದಿ ಸರಕಾರಕ್ಕೆ ಇರುವುದರಿಂದ, ಲೈಂಗಿಕ ಕಿರುಕುಳ ಆರೋಪಿತ ಅಕ್ಬರ್‌ ಅವರ ರಾಜೀನಾಮೆ  ಪಡೆಯಬಹುದೆಂದು ಸರಕಾರದ ಆಪ್ತ ಮೂಲಗಳು ತಿಳಿಸಿರುವುದಾಗಿ ಎಎನ್‌ಐ ಸುದ್ದಿಸಂಸ್ಥೆ ಹೇಳಿದೆ.

“ಮಿ ಟೂ’ಗೆ ಹೊಸಬಾಳೆ ಬೆಂಬಲ 
ಆರ್‌ಎಸ್‌ಎಸ್‌ನ ಸಹಕಾರ್ಯವಾಹರಾಗಿರುವ ಕರ್ನಾಟಕದ ದತ್ತಾತ್ರೇಯ ಹೊಸಬಾಳೆ ಅವರಿಂದ “ಮಿ ಟೂ’ ಅಭಿಯಾನಕ್ಕೆ ಬೆಂಬಲ ವ್ಯಕ್ತವಾಗಿದೆ. ಫೇಸ್‌ಬುಕ್‌ ಸಂಸ್ಥೆಯ ಸಾರ್ವಜನಿಕ ನೀತಿಸಂಹಿತೆ (ಭಾರತೀಯ ವಿಭಾಗ) ಮುಖ್ಯಸ್ಥರಾಗಿರುವ ಆಂಖೀ ದಾಸ್‌ ಎಂಬ ಮಹಿಳಾ ಉದ್ಯೋಗಿಯ “ಮಿ ಟೂ ಅಭಿಯಾನ ಬೆಂಬಲಿಸಲು ನೀವು ಮಹಿಳೆ ಯರೇ ಆಗಿರಬೇಕೆಂದಿಲ್ಲ. ಸಂವೇದನಾ ಶೀಲ ಮನುಷ್ಯರಾಗಿದ್ದರೆ ಸಾಕು’ ಎಂಬ ಪೋಸ್ಟ್‌ನ ಸ್ಕ್ರೀನ್‌ ಶಾಟ್‌ ತೆಗೆದು ಶೇರ್‌ ಮಾಡಿ ಬೆಂಬಲ ಸೂಚಿಸಿದ್ದಾರೆ.

ಟಾಪ್ ನ್ಯೂಸ್

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.