ನಾಥೂರಾಮ್ ಗೋಡ್ಸೆ ಮತ್ತು ಮೋದಿಯವರದ್ದು ಒಂದೇ ಸಿದ್ದಾಂತ : ರಾಹುಲ್ ಗಾಂಧಿ ಹೇಳಿಕೆ
Team Udayavani, Jan 30, 2020, 12:59 PM IST
ವಯನಾಡ್: ರಾಷ್ಟ್ರಪಿತ ಮಹಾತ್ಮ ಗಾಂಧಿ ಹಂತಕ ನಾಥೂರಾಮ್ ಗೋಡ್ಸೆ ಮತ್ತು ನರೇಂದ್ರ ಮೋದಿ ಒಂದೇ ಸಿದ್ದಾಂತ ಹೊಂದಿರುವವರು. ಅದರೆ ಗೋಡ್ಸೆಯ ಸಿದ್ದಾಂತವನ್ನು ನಂಬುತ್ತೇನೆ ಎಂದು ಬಹಿರಂಗವಾಗಿ ಹೇಳಲು ಮೋದಿಯವರಿಗೆ ಧೈರ್ಯ ಇಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿಕೆ ನೀಡಿದ್ದಾರೆ.
ಮಹಾತ್ಮ ಗಾಂಧಿಯವರ 72ನೆ ಪುಣ್ಯತಿಥಿಯಾದ ಗುರುವಾರ ಕೇರಳದ ವಯನಾಡ್ ಕ್ಷೇತ್ರದ ಸಂಸದನಾಗಿರುವ ರಾಹುಲ್ ಗಾಂಧಿ ಈ ಹೇಳಿಕೆ ನೀಡಿದ್ದಾರೆ.
ವಯನಾಡ್ ನಲ್ಲಿ ನಡೆಯುತ್ತಿರುವ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿ ರಾಹುಲ್ ಗಾಂಧಿ ಮಾತನಾಡಿದರು.
ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು 1948 ಜನವರಿ 30ರಂದು ನಾಥೂರಾಮ್ ಗೋಡ್ಸೆ ಗುಂಡು ಹಾರಿಸಿ ಹತ್ಯೆ ಮಾಡಿದ್ದ. ಗಾಂಧಿ ಹತ್ಯೆಯಾದ ದಿನವನ್ನು ದೇಶದಲ್ಲಿ ಹುತಾತ್ಮರ ದಿನವಾಗಿ ಆಚರಿಸಲಾಗುತ್ತದೆ.