Udayavni Special

ವಾರಾಣಸಿಯಿಂದ ಮೋದಿ ಸ್ಪರ್ಧೆ

Team Udayavani, Mar 22, 2019, 12:30 AM IST

pti3212019000103b.jpg

ಹೊಸದಿಲ್ಲಿ: ಲೋಕಸಭೆ ಚುನಾವಣೆ ಮೊದಲ ಹಂತದ ನಾಮಪತ್ರ ಸಲ್ಲಿಸಲು ಕೆಲವೇ ದಿನಗಳಿರುವಾಗ ಬಿಜೆಪಿ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಗುರುವಾರ ಬಿಡುಗಡೆ ಮಾಡಿದೆ. ವಾರಾಣಸಿಯಿಂದ ಪ್ರಧಾನಿ ನರೇಂದ್ರ ಮೋದಿ ಈ ಬಾರಿಯೂ ಸ್ಪರ್ಧಿಸಲಿದ್ದಾರೆ. 

ಪಟ್ಟಿಯಲ್ಲಿನ ಮಹತ್ವಪೂರ್ಣ ಬದಲಾವಣೆ ಎಂದರೆ ಗುಜರಾತ್‌ನ ಗಾಂಧಿನಗರ ಕ್ಷೇತ್ರದಿಂದ ಹಾಲಿ ಸಂಸದ ಎಲ್‌.ಕೆ.ಆಡ್ವಾಣಿ ಸ್ಥಾನದಲ್ಲಿ ಬಿಜೆಪಿ ಅಧ್ಯಕ್ಷ  ಅಧ್ಯಕ್ಷ ಅಮಿತ್‌ ಷಾ ಸ್ಪರ್ಧಿಸುತ್ತಿದ್ದಾರೆ. ಇನ್ನು ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿಯ ಎದುರು ಅಮೇಥಿಯಲ್ಲಿ ಸ್ಮತಿ ಇರಾನಿ ಸ್ಪರ್ಧಿಸಲಿದ್ದಾರೆ. 

2014ರಲ್ಲೂ ಸ್ಮತಿ ಸ್ಪರ್ಧಿಸಿದ್ದರಾದರೂ, ಸೋಲು ಅನುಭವಿಸಿದ್ದರು. ಲಕ್ನೋದಿಂದ ಕೇಂದ್ರ ಗೃಹ ಸಚಿವ ರಾಜನಾಥ್‌ ಸಿಂಗ್‌ ಪುನರಾಯ್ಕೆ ಬಯಸಲಿದ್ದಾರೆ.  ಒಟ್ಟು 20 ರಾಜ್ಯಗಳ 182 ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿ ಮುಖಂಡ ಜೆ.ಪಿನಡ್ಡಾ  ಬಿಡುಗಡೆ ಮಾಡಿದ್ದಾರೆ. 

ಉತ್ತರ ಪ್ರದೇಶದಲ್ಲಿ ವಿವಾದಾತ್ಮಕ ಸಂಸದ ಸಾಕ್ಷಿ ಮಹಾರಾಜ್‌ರನ್ನು ಉನ್ನಾವ್‌ ಕ್ಷೇತ್ರದಿಂದ ಕಣಕ್ಕೆ ಇಳಿಸಲಾಗಿದೆ. ಪಶ್ಚಿಮ ಬಂಗಾಳದ 42 ಕ್ಷೇತ್ರಗಳಲ್ಲಿ 22ರಲ್ಲಿ ಗೆಲ್ಲುವ ಗುರಿ ಹಾಕಿಕೊಂಡಿರುವ ಬಿಜೆಪಿ ಅಸಾನ್‌ಸೋಲ್‌ನಿಂದ ಹಾಲಿ ಸಂಸದ, ಕೇಂದ್ರ ಸಚಿವ  ಬಾಬುಲ್‌ ಸುಪ್ರಿಯೋಗೆ ಟಿಕೆಟ್‌ ನೀಡಿದೆ. ಅಲ್ಲದೆ ಕೆಲವೇ ದಿನಗಳ ಹಿಂದೆ ಟಿಎಂಸಿಯಿಂದ ಬಿಜೆಪಿಗೆ ಪಕ್ಷಾಂತರ ಮಾಡಿದ್ದ ಅನುಪಮ್‌ ಹಜ್ರಾಗೆ ಜಾದವ್‌ಪುರ ಟಿಕೆಟ್‌ ನೀಡಲಾಗಿದೆ.

ಕೇರಳದಲ್ಲಿ ನಿರೀಕ್ಷೆಯಂತೆಯೇ ಕಾಂಗ್ರೆಸ್‌ ಹಾಲಿ ಸಂಸದ ಶಶಿ ತರೂರ್‌ ವಿರುದ್ಧ ತಿರುವನಂತಪುರದಲ್ಲಿ ಕುಮ್ಮನಂ ರಾಜಶೇಖರನ್‌ರನ್ನು ಕಣಕ್ಕಿಳಿಸಿದೆ. ರಾಜಶೇಖರನ್‌ ಇತ್ತೀಚೆಗಷ್ಟೇ ರಾಜ್ಯಪಾಲ ಹುದ್ದೆಗೆ ರಾಜೀನಾಮೆ ನೀಡಿ ವಾಪಸಾಗಿದ್ದರು. ಇನ್ನು ಕಾಸರಗೋಡಿನಲ್ಲಿ  ಬಿಜೆಪಿ ನಾಯಕ ರವೀಶ ತಂತ್ರಿ ಕುಂಟಾರು ಅವರಿಗೆ ಟಿಕೆಟ್‌ ನೀಡಲಾಗಿದೆ. ಕೇಂದ್ರ ಗೃಹ ಖಾತೆ ಸಹಾಯಕ ಸಚಿವ ಕಿರಣ್‌ ರಿಜಿಜು ಅರುಣಾಚಲ ಪೂರ್ವದಿಂದ ಸ್ಪರ್ಧಿಸಲಿದ್ದಾರೆ. ರಾಜಸ್ಥಾನದಲ್ಲಿ ಮಾಜಿ ಮುಖ್ಯಮಂತ್ರಿ ವಸುಂಧರಾ ರಾಜೆ ಪುತ್ರ ದುಶ್ಶಂತ್‌ 4ನೇ ಬಾರಿಗೆ ಸ್ಪರ್ಧಿಸಲಿದ್ದಾರೆ.

ಶೀಘ್ರದಲ್ಲಿಯೇ ಬಿಹಾರ ಪಟ್ಟಿ: ಬಿಹಾರದ ಪಟ್ಟಿ ಬಿಡುಗಡೆ ಬಗ್ಗೆ ಪ್ರತಿಕ್ರಿಯೆ ನೀಡಿದ ಜೆ.ಪಿ.ನಡ್ಡಾ 17 ಮಂದಿ ಮೊದಲ ಪಟ್ಟಿಗೆ ಬಿಜೆಪಿ ಚುನಾವಣಾ ಸಮಿತಿ ಅನುಮತಿ ನೀಡಿದೆ. ಅದನ್ನು ರಾಜ್ಯ ಘಟಕಕ್ಕೆ ಕಳುಹಿಸಲಾಗಿದೆ. ಶೀಘ್ರವೇ ಪ್ರಕಟಿಸಲಾಗುತ್ತದೆ ಎಂದಿದ್ದಾರೆ. 

ಮೋದಿ ಕ್ಷೇತ್ರ ಬದಲಾವಣೆ ಇಲ್ಲ
ಪ್ರಧಾನಿ ನರೇಂದ್ರ ಮೋದಿ ಈ ಬಾರಿ ಒಡಿಶಾದ ಪುರಿಯಿಂದ ಸ್ಪರ್ಧಿಸುತ್ತಾರೆ ಎಂದು ಹೇಳಲಾಗಿತ್ತು. ಆದರೆ ಈ ಊಹಾಪೋಹ ಈಗ ಹುಸಿಯಾಗಿದೆ. ಕಳೆದ ಬಾರಿ ವಾರಾಣಸಿಯಲ್ಲಿ ಎಎಪಿಯ ಅರವಿಂದ ಕೇಜ್ರಿವಾಲ್‌ ಹಾಗೂ ಕಾಂಗ್ರೆಸ್‌ನ ಅಜಯ್‌ ರಾಯ್‌ ವಿರುದ್ಧ ಭಾರೀ ಅಂತರದಿಂದ ಗೆಲುವು ಸಾಧಿಸಿದ್ದರು. ಒಡಿಶಾ ವಿಧಾನಸಭೆಗೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಮಹತ್ವದ ಜಯಗಳಿಸಿದ್ದರಿಂದಾಗಿ, ಅಲ್ಲಿ ಮೋದಿ ಸ್ಪರ್ಧಿಸುವ ಊಹಾಪೋಹ ಕೇಳಿಬಂದಿತ್ತು.

ಆಡ್ವಾಣಿ ಸ್ಪರ್ಧೆ ಇಲ್ಲ
ಬಿಜೆಪಿಯ ಹಿರಿಯ ನಾಯಕ ಲಾಲಕೃಷ್ಣ ಆಡ್ವಾಣಿ ವಯಸ್ಸಿನ ಕಾರಣದಿಂದ ಈ ಬಾರಿ ಸ್ಪರ್ಧಿಸುತ್ತಿಲ್ಲ. ಮೂಲಗಳ ಪ್ರಕಾರ ಅವರು ಸ್ಪರ್ಧಿಸಲು ನಿರಾಕರಿ ಸಿ ದ್ದರಿಂದ, ಗಾಂಧಿನಗರದಿಂದ ಅಮಿತ್‌ ಶಾ ಸ್ಪರ್ಧಿಸಲಿದ್ದಾರೆ. ಈಗಾಗಲೇ ಪಕ್ಷದ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿಲ್ಲದ ಆಡ್ವಾಣಿ, ಸಾರ್ವಜನಿಕ ಜೀವನದಿಂ ದಲೇ ದೂರವಾಗಿದ್ದಂತಿದೆ. 

ಎನ್‌ಪಿಪಿ ಪಟ್ಟಿಯಲ್ಲಿ ಬಿಜೆಪಿ ವಲಸಿಗರೇ ಹೆಚ್ಚು
ಅರುಣಾಚಲ ಪ್ರದೇಶ ವಿಧಾನಸಭಾ ಚುನಾವಣೆಗೆ ನ್ಯಾಷನಲ್‌ ಪೀಪಲ್ಸ್‌ ಪಾರ್ಟಿ 29 ಕ್ಷೇತ್ರಗಳಿಗಾಗಿ ಅಭ್ಯರ್ಥಿಗಳ ಮೊದಲಪಟ್ಟಿಯನ್ನು ಗುರುವಾರ ಬಿಡುಗಡೆ ಮಾಡಿದೆ. ಗೃಹ ಸಚಿವ ಕುಮಾರ್‌ ವೈ, ಪ್ರವಾಸೋದ್ಯಮ ಸಚಿವ ಜರ್ಕಾರ್‌ ಗಾಮ್ಲಿನ್‌ರನ್ನು ಕ್ರಮವಾಗಿ ಬಾಮೆಂಗ್‌ ಮತ್ತು ಆಲೋ (ಪೂರ್ವ) ಕ್ಷೇತ್ರದಿಂದ ಕಣಕ್ಕೆ ಇಳಿಸಲಾಗಿದೆ. ಅವರಿಬ್ಬರಿಗೆ ಬಿಜೆಪಿಯಿಂದ ಟಿಕೆಟ್‌ ನಿರಾಕರಿಸಲಾಗಿತ್ತು. ಬಿಜೆಪಿಯಿಂದ ಟಿಕೆಟ್‌ ನಿರಾಕರಿಸಲ್ಪಟ್ಟಿರುವ ತಪುಕ್‌ ಟಕು, ಪಾನಿ ತರಮ್‌, ತಾಗ್ವಾಂಗ್‌ ವಾಂಘಂ, ಪಕ್ನಾಗಾ ಬಾಗೆ ಅವರಿಗೂ  ನ್ಯಾಷನಲ್‌ ಪೀಪಲ್ಸ್‌ ಪಾರ್ಟಿ ಟಿಕೆಟ್‌ ನೀಡಿದೆ. ಒಟ್ಟು 17 ಮಂದಿ ಹೊಸಬರಿಗೆ ಮೇಘಾಲಯ ಮುಖ್ಯಮಂತ್ರಿ ಕೊನಾರ್ಡ್‌ ಸಂಗ್ಮಾ ನೇತೃತ್ವದ ಪಕ್ಷ ಟಿಕೆಟ್‌ ನೀಡಿದೆ. ಏ.11ರಂದು ಮೊದಲ ಹಂತದ ಚುನಾವಣೆಯಲ್ಲಿ ಲೋಕಸಭೆ, ವಿಧಾನಸಭೆಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ.

ಟಾಪ್ ನ್ಯೂಸ್

ಗುಳೇದಗುಡ್ಡ: ಕೆರೆಯಲ್ಲಿ ಮುಳುಗಿ ಮಹಿಳೆಯರಿಬ್ಬರ ಸಾವು

ಗುಳೇದಗುಡ್ಡ: ಕೆರೆಯಲ್ಲಿ ಮುಳುಗಿ ಮಹಿಳೆಯರಿಬ್ಬರ ಸಾವು

Singhu border murder- Accused Nihang Saravjeet Singh sent to 7-day judicial custody

ಸಿಂಘು ಗಡಿ ಹತ್ಯೆ ಪ್ರಕರಣ:- ಆರೋಪಿ ನಿಹಾಂಗ್‌ ಸರ್ವಜೀತ್ ಗೆ 7 ದಿನ ಪೊಲೀಸ್‌ ಕಸ್ಟಡಿ

ನಾವು ಮುಸ್ಲಿಂ ವಿರೋಧಿ ಅಲ್ಲ: ಕೇಂದ್ರ ಸಚಿವ ಜೋಶಿ

ನಾವು ಮುಸ್ಲಿಂ ವಿರೋಧಿ ಅಲ್ಲ: ಕೇಂದ್ರ ಸಚಿವ ಜೋಶಿ

ಹಲವು ಸ್ವಾತಂತ್ರ್ಯ ಹೋರಾಟಗಾರರನ್ನು ಮರೆಮಾಚಲಾಗಿದೆ, ಅವರಿಗೆ ನ್ಯಾಯ ಒದಗಿಸಬೇಕು; ಶಾ

ಹಲವು ಸ್ವಾತಂತ್ರ್ಯ ಹೋರಾಟಗಾರರನ್ನು ಮರೆಮಾಚಲಾಗಿದೆ, ಅವರಿಗೆ ನ್ಯಾಯ ಒದಗಿಸಬೇಕು; ಶಾ

ಕ್ಯಾಚ್ ಆಫ್ ದಿ ಸೀಸನ್, ಪವರ್ ಪ್ಲೇಯರ್, ಗೇಮ್ ಚೇಂಜರ್ ಪ್ರಶಸ್ತಿ ಯಾರಿಗೆ? ಇಲ್ಲಿದೆ ಪಟ್ಟಿ

ಕ್ಯಾಚ್ ಆಫ್ ದಿ ಸೀಸನ್, ಪವರ್ ಪ್ಲೇಯರ್, ಗೇಮ್ ಚೇಂಜರ್ ಪ್ರಶಸ್ತಿ ಯಾರಿಗೆ? ಇಲ್ಲಿದೆ ಪಟ್ಟಿ

b-c-nagesh

1 ರಿಂದ 5ರ ವರೆಗೆ ಶಾಲೆ ಆರಂಭಕ್ಕೆ ಸರ್ವ ಸಿದ್ದತೆ : ಶಿಕ್ಷಣ ಸಚಿವ ಬಿ.ಸಿ.ನಾಗೇಶ್

20

ಶೆರ್ಲಿನ್ ದೂರು: ರಾಜ್ ಕುಂದ್ರಾ ಹಾಗೂ ಶಿಲ್ಪಾ ಶೆಟ್ಟಿಗೆ ಬಂಧನದ ಭೀತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Singhu border murder- Accused Nihang Saravjeet Singh sent to 7-day judicial custody

ಸಿಂಘು ಗಡಿ ಹತ್ಯೆ ಪ್ರಕರಣ:- ಆರೋಪಿ ನಿಹಾಂಗ್‌ ಸರ್ವಜೀತ್ ಗೆ 7 ದಿನ ಪೊಲೀಸ್‌ ಕಸ್ಟಡಿ

ಹಲವು ಸ್ವಾತಂತ್ರ್ಯ ಹೋರಾಟಗಾರರನ್ನು ಮರೆಮಾಚಲಾಗಿದೆ, ಅವರಿಗೆ ನ್ಯಾಯ ಒದಗಿಸಬೇಕು; ಶಾ

ಹಲವು ಸ್ವಾತಂತ್ರ್ಯ ಹೋರಾಟಗಾರರನ್ನು ಮರೆಮಾಚಲಾಗಿದೆ, ಅವರಿಗೆ ನ್ಯಾಯ ಒದಗಿಸಬೇಕು; ಶಾ

ಎಂಜಿಪಿ ಪಕ್ಷ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವ ಪ್ರಶ್ನೆಯೇ ಬರುವುದಿಲ್ಲ:ಸುದೀನ ಧವಳೀಕರ್

ಎಂಜಿಪಿ ಪಕ್ಷ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವ ಪ್ರಶ್ನೆಯೇ ಬರುವುದಿಲ್ಲ:ಸುದೀನ ಧವಳೀಕರ್

Untitled-1

ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಯಾದ ನಟ ರಾಜ್ ದೀಪ ನಾಯ್ಕ್

2022ರಲ್ಲಿ ಸಿಡಬ್ಲ್ಯುಸಿ ಚುನಾವಣೆ; ರಾಹುಲ್ ಗಾಂಧಿಗೆ ಅಧ್ಯಕ್ಷ ಪಟ್ಟ ಸಾಧ್ಯತೆ?

2022ರಲ್ಲಿ ಸಿಡಬ್ಲ್ಯುಸಿ ಚುನಾವಣೆ; ರಾಹುಲ್ ಗಾಂಧಿಗೆ ಅಧ್ಯಕ್ಷ ಪಟ್ಟ ಸಾಧ್ಯತೆ?

MUST WATCH

udayavani youtube

ಟೀಂ ಇಂಡಿಯಾ ಮುಖ್ಯ ಕೋಚ್ ಸ್ಥಾನಕ್ಕೆ ದ್ರಾವಿಡ್ ನೇಮಕ

udayavani youtube

ಅಸಹಾಯಕ ಸ್ಥಿತಿಯಲ್ಲಿದ್ದ ವ್ಯಕ್ತಿ ಹಾಗೂ ಕೋತಿಯನ್ನು ರಕ್ಷಿಸಿ ಮಾದರಿಯಾದ ಯುವಕರು

udayavani youtube

ರಾಮನ ಹೆಸರಲ್ಲಿ ಅಧಿಕಾರಕ್ಕೆ ಬಂದವರಿಗೆ ಕುತ್ತು? ಮೈಲಾರಸ್ವಾಮಿ ಕಾರ್ಣಿಕ ನುಡಿ ಏನು ಗೊತ್ತಾ?

udayavani youtube

ಹುಮನಾಬಾದ್ ನಲ್ಲಿ ವಿಜಯ ದಶಮಿ ಸಂಭ್ರಮ : ನೋಡುಗರ ಗಮನ ಸೆಳೆದ ರಾವಣನ ಪ್ರತಿಕೃತಿ

udayavani youtube

ಯಾರಿಗೆ ಒಲಿಯುತ್ತೆ IPL ಟ್ರೋಫಿ|UDAYAVANI NEWS BULLETIN|15/10/2021

ಹೊಸ ಸೇರ್ಪಡೆ

ರಾಷ್ಟ್ರಮಟ್ಟದ ಅಥ್ಲೆಟಿಕ್ಸ್‌ನಲ್ಲಿ ಮಿಂಚಿದ ಗೌಳಿ ಪ್ರತಿಭೆ

ರಾಷ್ಟ್ರಮಟ್ಟದ ಅಥ್ಲೆಟಿಕ್ಸ್‌ನಲ್ಲಿ ಮಿಂಚಿದ ಗೌಳಿ ಪ್ರತಿಭೆ

ಬನ್ನಿಮಹಾಕಾಳಿ ದೇವಿಗೆ ವಿಶೇಷ ಪೂಜೆ

ಬನ್ನಿಮಹಾಕಾಳಿ ದೇವಿಗೆ ವಿಶೇಷ ಪೂಜೆ

ಗುಳೇದಗುಡ್ಡ: ಕೆರೆಯಲ್ಲಿ ಮುಳುಗಿ ಮಹಿಳೆಯರಿಬ್ಬರ ಸಾವು

ಗುಳೇದಗುಡ್ಡ: ಕೆರೆಯಲ್ಲಿ ಮುಳುಗಿ ಮಹಿಳೆಯರಿಬ್ಬರ ಸಾವು

Singhu border murder- Accused Nihang Saravjeet Singh sent to 7-day judicial custody

ಸಿಂಘು ಗಡಿ ಹತ್ಯೆ ಪ್ರಕರಣ:- ಆರೋಪಿ ನಿಹಾಂಗ್‌ ಸರ್ವಜೀತ್ ಗೆ 7 ದಿನ ಪೊಲೀಸ್‌ ಕಸ್ಟಡಿ

DEMAND FOR PURE WATER

ಶುದ್ಧ ಕುಡಿವ ನೀರಿನ ಘಟಕ ದುರಸ್ತಿಗೆ ಗ್ರಾಮಸ್ಥರ ಒತ್ತಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.