“ಮೋದಿ’ ಕುಲನಾಮ ಹೇಳಿಕೆ ಪ್ರಕರಣ: Rahul Gandhi ತೀರ್ಪು ಎ.20ಕ್ಕೆ
Team Udayavani, Apr 14, 2023, 6:00 AM IST
ಸೂರತ್ (ಗುಜರಾತ್): “ಮೋದಿ’ ಕುಲನಾಮ ಹೇಳಿಕೆ ಪ್ರಕರಣದಲ್ಲಿ ತಮಗೆ ವಿಧಿಸಲಾಗಿರುವ 2 ವರ್ಷಗಳ ಜೈಲುಶಿಕ್ಷೆಯನ್ನು ರದ್ದು ಮಾಡಬೇಕೆಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೂರತ್ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ಈ ಕುರಿತು ವಿಚಾರಣೆ ಮುಗಿಸಿರುವ ಸೂರತ್ನ ಸೆಷನ್ಸ್ ನ್ಯಾಯಾಲಯ ಎ. 20ಕ್ಕೆ ತೀರ್ಪನ್ನು ಕಾಯ್ದಿರಿಸಿದೆ. ಎರಡೂ ಕಡೆಯ ವಾದಗಳನ್ನು ಆಲಿಸಿದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶರು, ಮುಂದಿನ ಗುರುವಾರಕ್ಕೆ ತೀರ್ಪನ್ನು ಕಾಯ್ದಿರಿಸಿದರು.
ಕರ್ನಾಟಕದ ಕೋಲಾರದಲ್ಲಿ 2019ರ ಚುನಾವಣಾ ರ್ಯಾಲಿ ಉದ್ದೇಶಿಸಿ ಮಾತನಾಡಿದ್ದ ರಾಹುಲ್ ಗಾಂಧಿ, “ಎಲ್ಲಾ ಕಳ್ಳರಿಗೂ ಮೋದಿ ಎಂಬ ಕುಲನಾಮ ಏಕಿದೆ?’ ಎಂದು ಟೀಕೆ ಮಾಡಿದ್ದರು. ಈ ಹೇಳಿಕೆ ಸಂಬಂಧ ಬಿಜೆಪಿಯ ಗುಜರಾತ್ ಶಾಸಕ ಪೂರ್ಣೇಶ್ ಮೋದಿ ಕ್ರಿಮಿನಲ್ ಮಾನನಷ್ಟ ಪ್ರಕರಣ ದಾಖಲಿಸಿದ್ದರು.
ಮೊದಲು ಪ್ರಕರಣದ ವಿಚಾರಣೆ ನಡೆಸಿದ್ದ ಸೂರತ್ನ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯ, ರಾಹುಲ್ ಗಾಂಧಿ ಅವರನ್ನು ತಪ್ಪಿತಸ್ಥರೆಂದು ಪರಿಗಣಿಸಿ, ಎರಡು ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿತ್ತು. ಪರಿಣಾಮ ರಾಹುಲ್ ಸಂಸತ್ ಸದಸ್ಯತ್ವ ಕಳೆದುಕೊಂಡಿದ್ದರು. ಈ ತೀರ್ಪಿನ ವಿರುದ್ಧ ರಾಹುಲ್ ಮೇಲ್ಮನವಿ ಸೆಷನ್ಸ್ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ಅವರಿಗೆ ಆಗಲೇ ಜಾಮೀನು ನೀಡಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ