“ಮೋದಿ ಸರ್ಕಾರದಿಂದ ತನಿಖಾ ಸಂಸ್ಥೆಗಳಿಗೆ ಬಲ ಹೆಚ್ಚಳ’: ಸಚಿವ ಅಮಿತ್ ಶಾ
Team Udayavani, Aug 27, 2022, 9:00 PM IST
ರಾಂಚಿ: “ಪ್ರಧಾನಿ ಮೋದಿ ಅವರ ಸರ್ಕಾರವು ರಾಷ್ಟ್ರೀಯ ತನಿಖಾ ದಳ(ಎನ್ಐಎ)ದಂತಹ ತನಿಖಾ ಸಂಸ್ಥೆಗಳ ಬಲವನ್ನು ಹೆಚ್ಚಿಸಿದೆ’ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
ಶನಿವಾರ ಜಾರ್ಖಂಡ್ನ ರಾಯು³ರದಲ್ಲಿ ಎನ್ಐಎ ಶಾಖೆಯನ್ನು ಉದ್ಘಾಟಿಸಿದ ಅವರು ಈ ಮಾತನ್ನಾಡಿದ್ದಾರೆ. “ಮೋದಿ ಸರ್ಕಾರವು ಉಗ್ರರು, ಎಡಪಂಥೀಯ ಉಗ್ರವಾದಿಗಳ ವಿರುದ್ಧ ಶೂನ್ಯ ಸಹಿಷ್ಣುತೆ ನೀತಿ ಪಾಲಿಸುತ್ತಿದೆ. ಉಗ್ರ ನಿಗ್ರಹ ಕಾನೂನುಗಳನ್ನೂ ಬಲ ಪಡಿಸಿದೆ.
ಜಮ್ಮು ಮತ್ತು ಕಾಶ್ಮೀರವನ್ನು ಉಗ್ರ ಮುಕ್ತ ಮಾಡಲು ಸತತ ಪ್ರಯತ್ನ ಮಾಡುತ್ತಿದೆ’ ಎಂದು ಹೇಳಿದರು. “ನಾವು ಎನ್ಐಎಯಂತಹ ತನಿಖಾ ಸಂಸ್ಥೆಗಳ ಬಲವರ್ಧಿಸಿದ್ದೇವೆ. ಪ್ರತಿ ರಾಜ್ಯದಲ್ಲೂ ಎನ್ಐಎ ಶಾಖೆ ತೆರೆಯಲಿದ್ದೇವೆ’ ಎಂದೂ ಶಾ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Brahmos; ಫಿಲಿಪ್ಪೀನ್ಸ್ಗೆ ಬ್ರಹ್ಮೋಸ್: ಭಾರತದ ಮೊದಲ ರಫ್ತು
EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು