ಹಿಮಾಲಯದೆತ್ತರಕ್ಕೆ ಭಾರತ-ನೇಪಾಳ ಸಂಬಂಧ

ನೇಪಾಳ ಪ್ರಧಾನಿ ಪ್ರಚಂಡ ಜತೆ ಮಾತುಕತೆ ಬಳಿಕ ಪ್ರಧಾನಿ ಮೋದಿ

Team Udayavani, Jun 2, 2023, 6:50 AM IST

ಹಿಮಾಲಯದೆತ್ತರಕ್ಕೆ ಭಾರತ-ನೇಪಾಳ ಸಂಬಂಧ

ನವದೆಹಲಿ:ಭಾರತ ಮತ್ತು ನೇಪಾಳ ಸರ್ಕಾರಗಳು ತಮ್ಮ ಬಾಂಧವ್ಯವನ್ನು ಹಿಮಾಲಯದೆತ್ತರಕ್ಕೆ ಕೊಂಡೊಯ್ಯಲಿವೆ ಮತ್ತು ಗಡಿ ಸೇರಿದಂತೆ ಎಲ್ಲ ರೀತಿಯ ಸಮಸ್ಯೆಗಳಿಗೂ ಪರಿಹಾರ ಕಂಡುಕೊಳ್ಳಲಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಗುರುವಾರ ನೇಪಾಳ ಪ್ರಧಾನಿ ಪುಷ್ಪಕಮಲ್‌ ದಹಲ್‌ (ಪ್ರಚಂಡ) ಅವರೊಂದಿಗೆ ನಡೆಸಿದ ದ್ವಿಪಕ್ಷೀಯ ಮಾತುಕತೆ ಬಳಿಕ ಅವರು ಈ ಮಾತುಗಳನ್ನಾಡಿದ್ದಾರೆ.

ಉಭಯ ನಾಯಕರ ಮಾತುಕತೆಯ ನಂತರ ಬಿಡುಗಡೆ ಮಾಡಲಾದ ಮಾಧ್ಯಮ ಹೇಳಿಕೆಯಲ್ಲಿ ಮೋದಿಯವರು ತಮ್ಮ ಚರ್ಚೆಯ ವಿವರಗಳನ್ನು ಹಂಚಿಕೊಂಡಿದ್ದಾರೆ. “ನಾವಿಬ್ಬರೂ ಜಂಟಿಯಾಗಿ ಹಲವು ಅಭಿವೃದ್ಧಿ ಕಾರ್ಯಗಳಿಗೆ ಶಿಲಾನ್ಯಾಸ ಮತ್ತು ಉದ್ಘಾಟನೆಯನ್ನು ವರ್ಚುವಲ್‌ ಆಗಿ ನೆರವೇರಿಸಿದ್ದೇವೆ. ಎರಡೂ ದೇಶಗಳ ನಡುವಿನ ಪಾಲುದಾರಿಕೆಯನ್ನು ಸೂಪರ್‌ಹಿಟ್‌ ಮಾಡುವ ನಿಟ್ಟಿನಲ್ಲಿ ಮಹತ್ವದ ಮಾತುಕತೆಯನ್ನೂ ನಡೆಸಿದ್ದೇವೆ’ ಎಂದರು.

9 ವರ್ಷಗಳ ಹಿಂದೆ ಅಂದರೆ 2014ರಲ್ಲಿ ನಾನು ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ಮೂರೇ ತಿಂಗಳಲ್ಲಿ ನೇಪಾಳಕ್ಕೆ ಮೊದಲ ಬಾರಿಗೆ ಭೇಟಿ ನೀಡಿದ್ದೆ. ಆಗ ನಾನು ಭಾರತ-ನೇಪಾಳ ಸಂಬಂಧಕ್ಕೆ ಹೈವೇಸ್‌, ಐ-ವೇಸ್‌ ಮತ್ತು ಟ್ರಾನ್ಸ್‌-ವೇಸ್‌ ಎಂಬ “ಸೂತ್ರ’ವನ್ನು ನೀಡಿದ್ದೆ. ಈ ಸೂತ್ರವು ಈಗ ಸೂಪರ್‌ಹಿಟ್‌ ಆಗಿದೆ ಎಂದೂ ಮೋದಿ ಸ್ಮರಿಸಿಕೊಂಡರು.

ಮಾತುಕತೆಯ ನಂತರ ಪ್ರಧಾನಿ ಮೋದಿ ಹಾಗೂ ಪ್ರಚಂಡ ಅವರು, ಭಾರತದ ರುಪೈದಿಹಾ ಮತ್ತು ನೇಪಾಳದ ನೇಪಾಳ್‌ಗಂಜ್‌ನಲ್ಲಿನ ಸಮಗ್ರ ಚೆಕ್‌ಪೋಸ್ಟ್‌ ಅನ್ನು ವರ್ಚುವಲ್‌ ಆಗಿ ಉದ್ಘಾಟಿಸಿದರು. ಜತೆಗೆ, ಬಿಹಾರದ ಬಥಾ°ಹಾದಿಂದ ನೇಪಾಳದ ಕಸ್ಟಮ್‌ಯಾರ್ಡ್‌ಗೆ ಸಂಚರಿಸುವ ಸರಕು ರೈಲಿಗೂ ಹಸಿರು ನಿಶಾನೆ ತೋರಿದರು. ಆದಷ್ಟು ಬೇಗ, ರಾಮಾಯಣ ಸರ್ಕಿಟ್‌ಗೆ ಸಂಬಂಧಿಸಿದ ಯೋಜನೆಯನ್ನು ತ್ವರಿತಗೊಳಿಸುವ ಕುರಿತೂ ಅವರು ಚರ್ಚಿಸಿದರು.

7 ಒಪ್ಪಂದಗಳಿಗೆ ಸಹಿ
ಭಾರತ ಮತ್ತು ನೇಪಾಳದ ಗಡಿಗಳ ನಡುವಿನ ಪೆಟ್ರೋಲಿಯಂ ಪೈಪ್‌ಲೈನ್‌ ವಿಸ್ತರಣೆ, ಚೆಕ್‌ಪೋಸ್ಟ್‌ಗಳ ನಿರ್ಮಾಣ, ಜಲವಿದ್ಯುತ್ಛಕ್ತಿ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಹಕಾರ ಹೆಚ್ಚಳ ಕುರಿತು ಉಭಯ ನಾಯಕರು ಒಟ್ಟು 7 ಒಪ್ಪಂದಗಳಿಗೆ ಸಹಿ ಹಾಕಿದ್ದಾರೆ. ಈ ಒಪ್ಪಂದಗಳ ಪೈಕಿ ಪ್ರಮುಖವಾದುದೆಂದರೆ, “ಭಾರತ-ನೇಪಾಳ ಪರಿಷ್ಕೃತ ಸಾರಿಗೆ ಒಪ್ಪಂದ’. ಎರಡೂ ರಾಷ್ಟ್ರಗಳ ನಡುವೆ ಪರಸ್ಪರ ಒಪ್ಪಿತ ಮಾರ್ಗಗಳಲ್ಲಿ ನಡೆಯುವ ಸರಕುಗಳ ಮುಕ್ತ ಸಾಗಣೆಗೆ ಸಂಬಂಧಿಸಿದ ಒಪ್ಪಂದ ಇದಾಗಿದೆ.

ಟಾಪ್ ನ್ಯೂಸ್

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.