ಉದ್ಯಮಕ್ಕೆ ಮೋದಿ ನೀತಿ: ಸದ್ಯದಲ್ಲೇ  ಪ್ರಧಾನಿಯಿಂದ ಘೋಷಣೆ ಸಾಧ್ಯತೆ

Team Udayavani, Dec 1, 2018, 6:00 AM IST

22.jpg

ಹೊಸದಿಲ್ಲಿ: ವರ್ಷಗಳಿಂದಲೂ ಕಾಯುತ್ತಿದ್ದ ಔದ್ಯಮಿಕ ನೀತಿಯನ್ನು ಪ್ರಧಾನಿ ನರೇಂದ್ರ ಮೋದಿ ಶೀಘ್ರದಲ್ಲೇ ಘೋಷಿಸುವ ನಿರೀಕ್ಷೆಯಿದೆ. ಲೋಕಸಭೆ ಚುನಾವಣೆಗೂ ಮುನ್ನ ದೇಶದಲ್ಲಿ ಔದ್ಯ ಮಿಕ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡುವ ನಿಟ್ಟಿ ನಲ್ಲಿ ಈ ಉದ್ಯಮ ನೀತಿ ಇರಲಿದ್ದು, ಉದ್ಯಮ ಸ್ಥಾಪನೆ ನಿಯಮಾವಳಿಗಳಲ್ಲಿ ಹಲವು ಮಹತ್ವದ ಬದಲಾವಣೆಗಳನ್ನು ಇದರಲ್ಲಿ ಪ್ರಸ್ತಾವಿಸಲಾಗಿದೆ ಎಂದು ಹೇಳಲಾಗಿದೆ. ಅಷ್ಟೇ ಅಲ್ಲ, 7 ಲಕ್ಷ ಕೋಟಿ ರೂ. ಹೂಡಿಕೆಯನ್ನು ಆಕರ್ಷಿಸುವ ಪ್ರಯತ್ನವನ್ನೂ ಸರಕಾರ ಮಾಡಲಿದೆ.

ಮೂಲಗಳ ಪ್ರಕಾರ ಹೊಸದಾಗಿ ಕೈಗಾರಿಕೆ ಸ್ಥಾಪಿಸಲು ಬಯಸುವ ಕಂಪೆನಿಗಳು ಭೂಮಿ ಖರೀದಿ ಮಾಡಬೇಕಿಲ್ಲ. ಬದಲಿಗೆ ಭೋಗ್ಯಕ್ಕೆ ಪಡೆಯಬಹುದಾಗಿದ್ದು, ಇದರಿಂದ ವೆಚ್ಚ ಗಮನಾರ್ಹವಾಗಿ ಕಡಿಮೆಯಾಗುತ್ತದೆ. ಇನ್ನೊಂದೆಡೆ ಔದ್ಯಮಿಕ ವಲಯದಲ್ಲಿರುವ ಕಂಪೆನಿಗಳು ತಮ್ಮ ಮೂಲಸೌಕರ್ಯವನ್ನು ಇತರ ಕಂಪೆನಿಗಳೊಂದಿಗೆ ಹಂಚಿ ಕೊಳ್ಳಲು ನೀತಿಗಳನ್ನು ಸುಲಭವಾಗಿಸಲು ನಿರ್ಧರಿಸ ಲಾಗಿದೆ. ತಂತ್ರಜ್ಞಾನ, ವೆಚ್ಚ ಕಡಿತ, ಸಾರಿಗೆ ವ್ಯವಸ್ಥೆ ಸುಧಾರಣೆ, ಕೌಶಲ ಕಾರ್ಮಿಕರನ್ನು ಒದಗಿಸುವಿಕೆ ವಿಚಾರದಲ್ಲಿ ಈ ಔದ್ಯಮಿಕ ನೀತಿ ಮಹತ್ವದ ಬದಲಾವಣೆಗೆ ಕಾರಣವಾಗಲಿದೆ ಎಂದು ಔದ್ಯಮಿಕ ನೀತಿ ಹಾಗೂ ಉತ್ತೇಜನ ಇಲಾಖೆಯ ಅಧಿಕಾರಿ ರಮೇಶ್‌ ಅಭಿಷೇಕ್‌ ಹೇಳಿದ್ದಾರೆ.

ಚುನಾವಣೆ ದೃಷ್ಟಿ 
ಬ್ಯಾಂಕ್‌ಗಳಲ್ಲಿ ಮೂರು ತಿಂಗಳಿನಿಂದ ಹಣಕಾಸಿನ ಹರಿವಿನ ಸಮಸ್ಯೆ ಉಂಟಾಗಿದ್ದುದರಿಂದ ಜಿಡಿಪಿ ಶೇ. 8.1ರಿಂದ ಶೇ. 7.1ಕ್ಕೆ ಇಳಿಕೆ ಕಂಡಿದೆ. ನೋಟು ಅಪ ಮೌಲ್ಯ ಹಾಗೂ ಜಿಎಸ್‌ಟಿ ಜಾರಿಯಿಂದಾಗಿ ಸಂಕಷ್ಟ ಕ್ಕೀಡಾಗಿದ್ದ ಆರ್ಥಿಕತೆ ಸುಧಾರಿಸುತ್ತಿದ್ದಂತೆಯೇ, ಹಣಕಾಸು ಹರಿವು ಸಮಸ್ಯೆ ಉಂಟಾಗಿದ್ದು ಸರಕಾರಕ್ಕೆ ತಲೆನೋವು ಉಂಟು ಮಾಡಿದೆ. ಈ ಹಿನ್ನೆಲೆಯಲ್ಲಿ ಉದ್ಯಮ ವಲಯಕ್ಕೆ ಉತ್ತೇಜನ ನೀಡಲು ಸರಕಾರ ತತ್‌ಕ್ಷಣ ಕ್ರಮ ಕೈಗೊಳ್ಳದಿದ್ದರೆ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಜನರ ಸಿಟ್ಟನ್ನು ಎದುರಿಸಬೇಕಾದೀತು ಎಂದು ಪ್ರಧಾನಿ ಮೋದಿ ಭಾವಿಸಿದ್ದಾರೆ ಎನ್ನಲಾಗಿದೆ.

ಒಂದು ಕೋಟಿ ಉದ್ಯೋಗ ಸೃಷ್ಟಿ ನಿರೀಕ್ಷೆ
2014ರ ಚುನಾವಣೆಯಲ್ಲಿ ಘೋಷಣೆ ಮಾಡಿದ 1 ಕೋಟಿ ಉದ್ಯೋಗ ಸೃಷ್ಟಿಯ ಭರವಸೆಯನ್ನು ಪೂರೈಸುವ ನಿಟ್ಟಿನಲ್ಲಿ ಮೋದಿ ಸರಕಾರ ಪ್ರಯತ್ನ ನಡೆಸಿದೆ. ಇದೇ ವಿಚಾರವನ್ನು ಕಾಂಗ್ರೆಸ್‌ ಕೂಡ ಮುಖ್ಯ ವಿಷಯವನ್ನಾಗಿ ಚುನಾವಣೆ ವೇಳೆ ಚರ್ಚೆಗೆ ತರುವ ಸಾಧ್ಯತೆಯಿದೆ. ಹೀಗಾಗಿ ಹಲವು ಪ್ರಮುಖ ಸುಧಾರಣೆಗಳನ್ನು ಜಾರಿಗೆ ತರುವ ಅಗತ್ಯ ಈಗ ಪ್ರಧಾನಿ ಎದುರು ಇದೆ. ಈ ಹಿನ್ನೆಲೆಯಲ್ಲಿ ದೇಶದ ಶೇ. 90ರಷ್ಟು ಆರ್ಥಿಕತೆಗೆ ಕಾರಣವಾಗಿರುವ ಸಣ್ಣ ಮತ್ತು ಮಧ್ಯಮ ವಲಯದ ಉದ್ಯಮಗಳ ಮೇಲೆ ಉದ್ಯಮ ನೀತಿಯಲ್ಲಿ ಹೆಚ್ಚಿನ ಗಮನ ಹರಿಸಲು ನಿರ್ಧರಿಸಲಾಗಿದೆ. ಇನ್ನೊಂದೆಡೆ 7 ಲಕ್ಷ ಕೋಟಿ ರೂ. ಮೌಲ್ಯದ ದಿಲ್ಲಿ-ಮುಂಬಯಿ ಔದ್ಯಮಿಕ ಕಾರಿಡಾರ್‌ ಯೋಜನೆಯ ಕಾಮಗಾರಿ ಕೂಡ ಮುಕ್ತಾಯಗೊಳಿಸಲಾಗುತ್ತಿದೆ. ಈ ಯೋಜನೆ ದಶಕಗಳಿಂದಲೂ ನನೆಗುದಿಗೆ ಬಿದ್ದಿತ್ತು. ಮತ್ತೂಂದೆಡೆ ಸುಮಾರು 2 ಸಾವಿರ ಕೋಟಿ ರೂ. ಮೌಲ್ಯದ ಪ್ರಾಜೆಕ್ಟ್ ಗಳು ಪೂರ್ಣಗೊಂಡಿದ್ದು, ಹಲವು ಕಂಪೆನಿಗಳು ತಮ್ಮ ಫ್ಯಾಕ್ಟರಿಗಳನ್ನು ಸ್ಥಾಪಿಸಿವೆ. ಇವು ಕಾರ್ಯನಿರ್ವಹಣೆ ಆರಂಭಿಸಿ, ಆರ್ಥಿಕತೆಗೆ ಕೊಡುಗೆ ನೀಡಲು ಕೆಲವು ತಿಂಗಳುಗಳ ಕಾಲಾವಕಾಶ ಬೇಕಿದೆ.

ಟಾಪ್ ನ್ಯೂಸ್

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.