ಕೇರಳದಲ್ಲಿ ಮುಂಗಾರು ಚುರುಕು

Team Udayavani, Jun 10, 2019, 6:00 AM IST

ತಿರುವನಂತಪುರ: ಮುಂಗಾರು ಪ್ರವೇಶದ ಬೆನ್ನಲ್ಲೇ ಕೇರಳದ ಹಲವು ಭಾಗಗಳಲ್ಲಿ ರವಿವಾರಧಾರಾಕಾರ ಮಳೆಯಾಗಿದೆ. ಇದರ ನಡುವೆಯೇ, ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಕಾರಣ, ಮುಂದಿನ 2 ದಿನಗಳಲ್ಲಿ
ಲಕ್ಷದ್ವೀಪ ಮತ್ತು ಕೇರಳದ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಒಂದು ವಾರ ಕಾಲ ವಿಳಂಬವಾಗಿ ಮುಂಗಾರು ಪ್ರವೇಶವಾಗಿದ್ದರೂ, ಕೇರಳದ ಎಲ್ಲ ಜಿಲ್ಲಾಧಿಕಾರಿಗಳು ಎಚ್ಚರಿಕೆಯಿಂದ ಇರುವಂತೆ ಕೇರಳ ರಾಜ್ಯ ಪ್ರಾಕೃತಿಕ ವಿಪತ್ತು ನಿರ್ವಹಣ ಪ್ರಾಧಿಕಾರದ ಶೇಖರ್‌ ಕುರಿಯಾಕೋಸ್‌ ತಿಳಿಸಿದ್ದಾರೆ. ತಾಲೂಕು ಮಟ್ಟದಲ್ಲಿ ಕೂಡ ವಿಪತ್ತು ನಿರ್ವಹಣ ತಂಡವನ್ನು ಸನ್ನದ್ಧ ಸ್ಥಿತಿಯಲ್ಲಿ ಇರುವಂತೆ ನೋಡಿಕೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.

ಮಳೆ ಕೊರತೆ ಶೇ. 45ಕ್ಕೇರಿಕೆ: ಈ ತಿಂಗಳ ಮೊದಲ 9 ದಿನಗಳಲ್ಲಿ ಮಳೆಯಾಗದೇ ಇದ್ದ ಕಾರಣದಿಂದಲಾಗಿ ದೇಶದಲ್ಲಿ ಮಳೆ ಕೊರತೆ ಪ್ರಮಾಣ ಶೇ.45ಕ್ಕೆ ಏರಿಕೆಯಾಗಿದೆ. ಈ ಬಗ್ಗೆ ಭಾರತೀಯ ಹವಾಮಾನ ಇಲಾಖೆ ರವಿವಾರಮಾಹಿತಿ ನೀಡಿದೆ. ದೇಶಾದ್ಯಂತ 17.7 ಮಿಲಿ ಮೀ.ಗಳಷ್ಟು ಮಳೆಯಾಗಿದೆ. ಈ ಅವಧಿಯಲ್ಲಿ ಸಾಮಾನ್ಯವಾಗಿ 32.4 ಮಿ.ಮೀ. ಮಳೆಯಾಗಬೇಕಾಗಿತ್ತು. ಹೀಗಾಗಿ ಮಳೆ ಕೊರತೆ ಪ್ರಮಾಣ ಶೇ. 45ಕ್ಕೆ ಏರಿಕೆಯಾಗಿದೆ. ಅರಬ್ಬೀ ಸಮುದ್ರದಲ್ಲಿ ಉಂಟಾಗುತ್ತಿರುವ ವಾಯುಭಾರ ಕುಸಿತದಿಂದಾಗಿ ಮುಂಗಾರು ಮಳೆ ಹೆಚ್ಚಿನ ಸ್ಥಳಗಳಿಗೆ ವಿಸ್ತಾರವಾಗುವುದನ್ನು ತಡೆಯಲಿದೆ ಎಂದೂ ಇಲಾಖೆ ತಿಳಿಸಿದೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ

  • ಲ್ಯಾರಿ ಟೆಸ್ಲರ್‌ ಎಂಬ ಕಂಪ್ಯೂಟರ್‌ ವಿಜ್ಞಾನಿ ಕೆಲ ದಿನಗಳ ಹಿಂದಷ್ಟೆ ತೀರಿಕೊಂಡರು. ಜಗತ್ತಿನೆಲ್ಲೆಡೆ ಅದು ಸುದ್ದಿಯಾಯಿತು. ಏಕೆಂದರೆ, ಇಂದು ಜಗತ್ತಿನಲ್ಲಿರುವ...

  • ಎಷ್ಟೋ ಬಾರಿ ನಮ್ಮದಲ್ಲದ ತಪ್ಪಿಗೆ ನಮ್ಮನ್ನು ಗುರಿಮಾಡಿದಾಗ ಕೋಪ, ಅಸಹನೆ, ದಃಖ ಹೀಗೆ ಎಲ್ಲೂವೂ ಒಟ್ಟಿಗೆ ಅಭಿವ್ಯಕ್ತಗೊಳ್ಳುವುದು ಸಹಜ. ಇಂತಹ ಸಂದರ್ಭದಲ್ಲಿ...

  • ವಿಶೇಷ ವರದಿ-ಮಹಾನಗರ: ಕೆಲವು ದಿನಗಳಿಂದ ನಗರದಲ್ಲಿ ಅಬ್ಟಾ ... ಏನ್‌ ಸೆಕೇನಪ್ಪಾ ! ಎಂದು ಹೇಳಿಕೊಂಡವರೇ ಹೆಚ್ಚು. ಏಕೆಂದರೆ ಕೆಲವುದಿನಗಳಿಗೆ ಹೋಲಿಕೆ ಮಾಡಿದರೆ...

  • ಬೋಂಡಾ, ಬಜ್ಜಿ, ಪಕೋಡವನ್ನು ಸಾಮಾನ್ಯವಾಗಿ ಎಲ್ಲಾ ಕಡೆ ಮಾಡ್ತಾರೆ. ಆದ್ರೆ, ಕೆಲವರು ತಿಂಡಿಗೆ ಬಳಸುವ ಪದಾರ್ಥ, ಕೈ ರುಚಿ, ಶುಚಿತ್ವ, ಹೀಗೆ... ಹಲವು ಕಾರಣಗಳಿಂದ ಗ್ರಾಹಕರಿಂದ...

  • ಜೇನು ಕುಟುಕಿದರೆ ಮಾತ್ರ ಉರಿ, ಕೃಷಿಕರಿಗೆ ಸಿಹಿಯೇ. ಜೇನು ಕೃಷಿಯ ಹೆಗ್ಗಳಿಕೆ ಎಂದರೆ, ಸ್ವಂತ ಜಮೀನು ಹೊಂದಿರಬೇಕಾದ ಅಥವಾ ಹೆಚ್ಚಿನ ಬಂಡವಾಳ ಹೂಡಬೇಕಾದ ಅಗತ್ಯವಿಲ್ಲ....