ಆರೆಸ್ಸೆಸ್ ಕಾರ್ಯಕ್ರಮಕ್ಕೆ ಮಹಿಳಾ ಅತಿಥಿ
Team Udayavani, Sep 16, 2022, 7:36 AM IST
ನವದೆಹಲಿ: ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆಯುವ ವಾರ್ಷಿಕ ದಸರಾ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಪರ್ವತಾರೋಹಿ ಸಂತೋಷ್ ಯಾದವ್ ಅವರನ್ನು ಆರ್ಎಸ್ಎಸ್ ಆಹ್ವಾನಿಸಿದೆ.
ಈ ಮೂಲಕ ಅವರು ಆರ್ಎಸ್ಎಸ್ನ ದಸರಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿರುವ ಮೊದಲ ಮಹಿಳೆಯಾಗಲಿದ್ದಾರೆ.
“ಕಾರ್ಯಕ್ರಮದಲ್ಲಿ ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು ಪ್ರಸ್ತುತ ಸಮಸ್ಯೆಗಳ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳಲಿದ್ದಾರೆ ಹಾಗೂ ಮುಂದಿನ ಕಾರ್ಯಸೂಚಿಯನ್ನು ಪ್ರಕಟಿಸಲಿದ್ದಾರೆ,’ ಎಂದು ಆರ್ಎಸ್ಎಸ್ ಜಂಟಿ ಪ್ರಚಾರ ಮುಖ್ಯಸ್ಥ ನರೇಂದ್ರ ಠಾಕೂರ್ ತಿಳಿಸಿದರು.
ಸಂತೋಷ್ ಯಾದವ್ (54) ಅವರು ಎರಡು ಬಾರಿ ಮೌಂಟ್ ಎವರೆಸ್ಟ್ ಏರಿದ ಮೊದಲ ಮಹಿಳೆಯಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್