48 ಗಂಟೆಯಲ್ಲಿ 150 ಬೆಡ್ಗಳ ಕೋವಿಡ್ ಆರೈಕೆ ಕೇಂದ್ರ: ಇದು ಭಾರತೀಯ ಯೋಧರ ಶ್ರಮದಾನ
Team Udayavani, Apr 26, 2021, 6:56 PM IST
ಭೂಪಾಲ್ : ಹೆಚ್ಚುತ್ತಿರುವ ಕೋವಿಡ್ ರೋಗಿಗಳ ರಕ್ಷಣೆಗೆ ಭಾರತೀಯ ಸೇನೆಯ ಯೋಧರು ನೆರವಾಗಿದ್ದಾರೆ. ಕೇವಲ 48 ಗಂಟೆಯಲ್ಲಿ 150 ಬೆಡ್ಗಳ ಕೋವಿಡ್ ಕೇರ್ ಸೆಂಟರ್ ತೆರೆದಿದ್ದಾರೆ.
ಮಧ್ಯ ಪ್ರದೇಶದಲ್ಲಿ ಕೋವಿಡ್ ಪಿಡುಗು ಉಲ್ಬಣಿಸುತ್ತಿದೆ. ಆಸ್ಪತ್ರೆಗಳಲ್ಲಿ ಬೆಡ್ ಅಭಾವ ಎದುರಾಗಿದೆ. ಈ ಸಮಸ್ಯೆ ಮನಗಂಡಿರುವ ಭಾರತೀಯ ಸೇನೆ ಭೂಪಾಲ್ನಲ್ಲಿ 150 ಬೆಡ್ಗಳ ಕೋವಿಡ್ ಆರೈಕೆ ಕೇಂದ್ರವನ್ನು ಸ್ಥಾಪಿಸಿದೆ. ಇವುಗಳಲ್ಲಿ 40 ಬೆಡ್ಗಳನ್ನು ಮಹಿಳೆಯರಿಗೆ ಹಾಗೂ ಮಕ್ಕಳಿಗೆ ಮೀಸಲಿರಿಸಿದೆ.
ಇಂದು (ಸೋಮವಾರ) ಕೋವಿಡ್ ಆರೈಕೆ ಕೇಂದ್ರಕ್ಕೆ ಭೇಟಿ ನೀಡಿರುವ ವೈದ್ಯಕೀಯ ಶಿಕ್ಷಣ ಸಚಿವ ವಿಶ್ವಾಸ ಸಾರಂಗ್, ಕೋವಿಡ್ ರೋಗಿಗಳಿಗೆ ಅಗತ್ಯ ಇರುವ ಎಲ್ಲ ಸೌಲಭ್ಯಗಳನ್ನು ಇಲ್ಲಿ ಕಲ್ಪಿಸಲಾಗಿದೆ. ತುರ್ತು ಸೇವೆಗಾಗಿ ಆ್ಯಂಬುಲೆನ್ಸ್ ಹಾಗೂ ಆಕ್ಸಿಜನ್ ವ್ಯವಸ್ಥೆ ಕೂಡ ಇದೆ. ಇದೇ ಮಾದರಿಯಲ್ಲಿ ಪ್ರತಿ ಜಿಲ್ಲೆಯಲ್ಲಿಯೂ ಒಂದೊಂದು ಕೋವಿಡ್ ಆರೈಕೆ ಕೇಂದ್ರಗಳನ್ನು ತೆರೆಯಲಾಗುತ್ತದೆ ಎಂದಿದ್ದಾರೆ.
ಇನ್ನು ಮಧ್ಯ ಪ್ರದೇಶದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚು ಇವೆ. ಭೂಪಾಲ್ ನಲ್ಲೂ ಮಹಾಮಾರಿ ಸೋಂಕು ಕೈ ಮೀರಿ ವ್ಯಾಪಿಸಿದೆ.ಏಪ್ರಿಲ್ 12 ರಂದು ಮೊದಲ ಬಾರಿಗೆ ಕೋವಿಡ್ ಕರ್ಫ್ಯೂ ಭೂಪಾಲ್ನಲ್ಲಿ ಹೇರಲಾಗಿತ್ತು. ಇದು ಮೇ 3ರ ವರೆಗೆ ಮುಂದುವರೆಸಿ ಸರ್ಕಾರ ಆದೇಶ ಹೊರಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ