ಭೀಕರ ಕಾರು ಅಪಘಾತ: ಒಂದೇ ಕುಟುಂಬದ ಐವರು ಸ್ಥಳದಲ್ಲೇ ಸಾವು

Team Udayavani, Nov 17, 2019, 1:50 PM IST

ಮಧ್ಯಪ್ರದೇಶ:  ಕಾರೊಂದು ಮತ್ತೊಂದು ಭಾರೀ ವಾಹನಕ್ಕೆ ಗುದ್ದಿದ ಪರಿಣಾಮ ಒಂದೇ ಕುಟುಂಬದ ಐವರು ಸ್ಥಳದಲ್ಲೇ ಸಾವನ್ನಪ್ಪಿ ಓರ್ವ ಗಂಭೀರ ಗಾಯಗೊಂಡ ಘಟನೆ ಬರ್ವಾನಿ ಜಿಲ್ಲೆಯ ಮಂಡ್ವಾಡ ಗ್ರಾಮದಲ್ಲಿ ನಡೆದಿದೆ.

ಕಾಸ್ರವಾಡ್  ಗ್ರಾಮದಲ್ಲಿ ನಡೆಯುತ್ತಿದ್ದ ಮದುವೆ ಸಮಾರಂಭಕ್ಕೆ ಇವರೆಲ್ಲಾ ಕಾರಿನಲ್ಲಿ ತೆರಳುತ್ತಿದ್ದರು ಎಂದು ತಿಳಿದುಬಂದಿದೆ. ಈ ವೇಳೆ ಮತ್ತೊಂದು ವಾಹನಕ್ಕೆ ಗುದ್ದಿದ ಪರಿಣಾಮ ಭೀಕರ ದುರಂತ ಸಂಭವಿಸಿದೆ.

ಅಂಜಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.


ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ