ಚುನಾವಣೆಯಲ್ಲಿ ಆಯ್ಕೆಯಾದ ಮಹಿಳೆಯ ಬದಲು ಆಕೆಯ ಪತಿಯರಿಂದ ಪ್ರಮಾಣ ವಚನ ಸ್ವೀಕಾರ!
ಗ್ರಾಮ ಪಂಚಾಯತ್
Team Udayavani, Aug 6, 2022, 6:50 AM IST
ಭೋಪಾಲ್: ಗ್ರಾಮ ಪಂಚಾಯಿತಿಗೆ ಅಧ್ಯಕ್ಷರಾಗಿ ಆಯ್ಕೆಯಾದ ಮಹಿಳೆಯ ಬದಲು ಆಕೆಯ ಪತಿಯೇ ಪ್ರಮಾಣ ವಚನ ಸ್ವೀಕರಿಸಿರುವ ಘಟನೆ ಮಧ್ಯ ಪ್ರದೇಶದ ದಮೋಹ್ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಗೈಸಾಬಾದ್ ಗ್ರಾಮದಲ್ಲಿ ಇತ್ತೀಚೆಗೆ ಗ್ರಾಮ ಪಂಚಾಯಿತಿ ಚುನಾವಣೆ ಹಾಗೂ ಅಧ್ಯಕ್ಷರ ಚುನಾವಣೆ ನಡೆದಿದೆ. ಅಧ್ಯಕ್ಷರ ಸ್ಥಾನ ಪರಿಶಿಷ್ಟ ವರ್ಗದವರಿಗೆ ಮೀಸಲಿದ್ದು, ಮಹಿಳಾ ಸದಸ್ಯೆ ಅಧ್ಯಕ್ಷೆಯಾಗಿ ಆಯ್ಕೆಯಾಗಿದ್ದಾರೆ. ಆದರೆ ಅಧ್ಯಕ್ಷರ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಅವರೇ ಬಂದಿರಲಿಲ್ಲ.
ಹಾಗಾಗಿ, ಅವರ ಪತಿಯೇ ಪ್ರಮಾಣ ಸ್ವೀಕರಿಸಿದ್ದಾರೆ. ಅಧ್ಯಕ್ಷರ ವಿಚಾರದಲ್ಲಿ ಹೀಗಾಗಿಲ್ಲ, ಹಲವು ಮಹಿಳಾ ಸದಸ್ಯರ ಪ್ರಮಾಣ ವಚನ ಸ್ವೀಕಾರ ವಿಚಾರದಲ್ಲಿಯೂ ಅವರ ಪತಿಯರೇ ಪ್ರಮಾಣ ವಚನ ಸ್ವೀಕರಿಸಿದ್ದು, ಇದಕ್ಕೆ ಗ್ರಾಮ ಪಂಚಾಯಿತಿ ಕಾರ್ಯದರ್ಶಿಯೂ ಅನುಮತಿ ಕೊಟ್ಟಿರುವುದಾಗಿ ಹೇಳಲಾಗಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾಡಳಿತವು ವಿಸ್ತೃತ ವರದಿ ಕೇಳಿದ್ದು, ವರದಿ ಬಂದ ನಂತರ ಸೂಕ್ತ ಕ್ರಮ ತೆಗೆದುಕೊಳ್ಳುವುದಾಗಿ ತಿಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್