ಕಾಂಗ್ರೆಸ್ ‘ಹಿಂಸೆ’ಯಿಂದ ಅನಾರೋಗ್ಯ ; ಸಂಸದೆ ಸಾಧ್ವಿ ಪ್ರಜ್ಞಾ ಸಿಂಗ್ ಅಳಲು
Team Udayavani, Jun 22, 2020, 6:41 AM IST
ಭೋಪಾಲ್: ಕಾಂಗ್ರೆಸ್ನ ‘ಚಿತ್ರ ಹಿಂಸೆ’ಯಿಂದಾಗಿ ನಾನು ವಿವಿಧ ಆರೋಗ್ಯ ಸಮಸ್ಯೆ ಎದುರಿಸುತ್ತಿದ್ದೇನೆ ಎಂದು ಭೋಪಾಲ್ ಸಂಸದೆ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ದೂರಿದ್ದಾರೆ.
ಭಾನುವಾರ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಬಳಿಕ ಮಾತನಾಡಿದ ಅವರು, ‘ಕಾಂಗ್ರೆಸ್ ಆಡಳಿತಾವಧಿಯಲ್ಲಿ 9 ವರ್ಷಗಳ ಕಾಲ ನನಗೆ ಚಿತ್ರಹಿಂಸೆ ನೀಡಿದ್ದರಿಂದ ಸಾಕಷ್ಟು ಗಾಯಗೊಂಡಿದ್ದೇನೆ.
ಒಂದು ಕಣ್ಣು ಕಾಣುವುದಿಲ್ಲ. ನಾನು ಅನುಭವಿಸುತ್ತಿರುವ ದೃಷ್ಟಿ ದೋಷ, ಮೆದುಳು ಸಮಸ್ಯೆಗೆ ಕಾಂಗ್ರೆಸ್ ಕಾರಣವಾಗಿದೆ ಎಂದು ಆರೋಪಿಸಿದ್ದಾರೆ.
ಪ್ರಜ್ಞಾ ಸಿಂಗ್ ಆರೋಪಕ್ಕೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಮುಖಂಡ ಪಿ.ಸಿ.ಶರ್ಮಾ, ಮಧ್ಯಪ್ರದೇಶದಲ್ಲಿ 15 ವರ್ಷಗಳ ಕಾಲ ಬಿಜೆಪಿ ಆಡಳಿತವಿತ್ತು.
ಅಲ್ಲದೆ, ಕೇಂದ್ರದಲ್ಲಿ ಆರು ವರ್ಷಗಳ ಕಾಲ ಅವರದ್ದೇ ಸರಕಾರವಿದೆ. ಪರಿಸ್ಥಿತಿ ಹೀಗಿರುವಾಗ ಕಾಂಗ್ರೆಸ್ನಿಂದ ಅವರಿಗೆ ಹೇಗೆ ತೊಂದರೆಯಾಯಿತು ಎಂದು ಪ್ರಶ್ನಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rameshwaram Cafe case: ಎನ್ಐಎಯಿಂದ ಸಹ ಸಂಚುಕೋರನ ಬಂಧನ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು