ಮಧ್ಯಪ್ರದೇಶ: ಗೋವು ಹತ್ಯೆ ಶಂಕೆ: ಥಳಿಸಿ ಇಬ್ಬರ ಹತ್ಯೆ
Team Udayavani, May 3, 2022, 10:34 PM IST
ಭೋಪಾಲ್: ಇಲ್ಲಿನ ಬುಡಕಟ್ಟು ಜನಾಂಗದ ಇಬ್ಬರು ವ್ಯಕ್ತಿಗಳನ್ನು ಗೋವು ವಧಾಕಾರರೆಂದು ತಿಳಿದು ಅವರನ್ನು ಥಳಿಸಿ ಹತ್ಯೆಗೈದಿರುವ ಪ್ರಕರಣ ಮಧ್ಯಪ್ರದೇಶದ ಸೆಯೊನಿ ಜಿಲ್ಲೆಯಲ್ಲಿ ನಡೆದಿದೆ.
ಇತ್ತೀಚೆಗೆ ಗೋವೊಂದನ್ನು ಕದ್ದೊಯ್ದು ಹತ್ಯೆಗೈದಿರುವ ಆರೋಪ ಈ ವ್ಯಕ್ತಿಗಳ ಮೇಲಿತ್ತು. ಈ ಹಿನ್ನೆಲೆಯಲ್ಲಿ, ಉದ್ರಿಕ್ತಗೊಂಡಿದ್ದ 20 ಜನರ ತಂಡವೊಂದು ಮಂಗಳವಾರ ಮಧ್ಯಾಹ್ನ ಇವರ ಮನೆಗೆ ತೆರಳಿ ಜಗಳ ತೆಗೆದು ಇವರ ಮೇಲೆ ಹಲ್ಲೆ ನಡೆಸಿತು. ಘಟನೆಯಲ್ಲಿ ಮತ್ತೊಬ್ಬನಿಗೆ ಗಾಯವಾಗಿದೆ ಎಂದು ಹೇಳಲಾಗಿದೆ.
ಘಟನೆಗೆ ಸಂಬಂಧಿಸಿದಂತೆ 20 ಮಂದಿಯ ವಿರುದ್ಧ ಕೇಸು ದಾಖಲಿಸಲಾಗಿದೆ. ಈ ಪೈಕಿ ಆರು ಮಂದಿ ವಿರುದ್ಧ ಕೊಲೆ ಕೇಸು ದಾಖಲಿಸಲಾಗಿದೆ. ಪ್ರಕರಣದಲ್ಲಿ ಭಾಗಿಯಾದ ಇತರರಿಗಾಗಿ ಶೋಧ ಕಾರ್ಯ ಮುಂದುವರಿದಿದೆ ಎಂದು ಸೆಯೋನಿ ಜಿಲ್ಲೆಯ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಸ್.ಕೆ.ಮರಾವಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tapi River; ಸಲ್ಮಾನ್ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!
MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್ ನಿಂದ ವಿವರ ಕೇಳಿದ ಭಾರತ
Loksabha Election; ಬಿಜೆಪಿ 14ನೇ ಪಟ್ಟಿ: ಲಡಾಖ್ ಹಾಲಿ ಸಂಸದ ನಮ್ಗ್ಯಾಲ್ ಗೆ ಕೊಕ್
Video| ರಾಮನ ಫೋಟೋ ಇರುವ ತಟ್ಟೆಯಲ್ಲಿ ಬಿರಿಯಾನಿ: ವಿವಾದ
Reliance Jio Profit; ರಿಲಯನ್ಸ್ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ