

Team Udayavani, May 1, 2019, 12:19 PM IST
ಮುಂಬಯಿ: ಮೊಹಮ್ಮದ್ ಅಲಿ ಜಿನ್ನಾ ಕಾಂಗ್ರೆಸ್ ಕುಟುಂಬಕ್ಕೆ ಸೇರಿದವರು ಎಂಬ ಕಾಂಗ್ರೆಸ್ ಮುಖಂಡ ಶತ್ರುಘ್ನ ಸಿನ್ಹಾ ಅವರ ಹೇಳಿಕೆಯ ಬೆನ್ನಲ್ಲೇ, ಎನ್‌ಸಿಪಿ ನಾಯಕ ಮಜೀದ್ ಮೆಮನ್ ಜಿನ್ನಾ ಪರ ಹೇಳಿಕೆ ನೀಡಿರುವುದು ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗೆ ಗ್ರಾಸವಾಗಿದೆ.
ಪಾಕಿಸ್ತಾನದ ಸ್ಥಾಪಕ ಮೊಹಮ್ಮದ್ ಅಲಿ ಜಿನ್ನಾ ಸ್ವಾತಂತ್ರ್ಯ ಹೋರಾಟಕ್ಕಾಗಿ ವಿಶೇಷ ಕೊಡುಗೆ ನೀಡಿದ್ದಾರೆ. ಜಿನ್ನಾ ಮುಸ್ಲಿಂ ಆಗಿದ್ದರಿಂದಲೇ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು ಶತ್ರುಘ್ನ ಸಿನ್ಹಾ ಅವರನ್ನು ದೇಶದ್ರೋಹಿ ಅಂತಾರೆ ಎಂದು ಮೆಮನ್ ಹೇಳಿದ್ದಾರೆ. ಮಹಾತ್ಮಾ ಗಾಂಧಿಯಿಂದ ಹಿಡಿದು ಮೊಹಮ್ಮದ್ ಅಲಿ ಜಿನ್ನಾವರೆಗೆ ಎಲ್ಲರೂ ಕಾಂಗ್ರೆಸ್ ಕುಟುಂಬಕ್ಕೆ ಸೇರಿದವರು ಎಂದು ಶತ್ರುಘ್ನ ಸಿನ್ಹಾ ಶನಿವಾರ ಹೇಳಿದ ಬಳಿಕ, ಇಂದು ಮೆಮನ್ ಅವರಲ್ಲಿ ಪ್ರತಿಕ್ರಿಯೆ ಕೇಳಿದಾಗ, ಶತ್ರುಘ್ನ ಸಿನ್ಹಾ ಅವರು ನಿನ್ನೆವರೆಗೆ ಬಿಜೆಪಿಯಲ್ಲಿದ್ದರು ಎಂಬುದು ಅಮಿತ್ ಶಾ ಅವರಿಗೆ ನೆನಪಿರಲಿ. ಅವರೇನಾದರೂ ದೇಶದ್ರೋಹದ ಹೇಳಿಕೆ ನೀಡಿದ್ದರೆ ಅದು ಬಿಜೆಪಿಯಿಂದಲೇ ಕಲಿತದ್ದು ಎಂದು ವ್ಯಂಗ್ಯವಾಡಿದ್ದಾರೆ.
ಜಿನ್ನಾ ಅವರು ಸ್ವಾತಂತ್ರ್ಯ ಹೋರಾಟಕ್ಕೆ ದೊಡ್ಡ ಕೊಡುಗೆ ನೀಡಿದ್ದಾರೆ. ಅವರೋರ್ವ ಮುಸ್ಲಿಂ ಆಗಿದ್ದರಿಂದಲೇ ಅವರ ಬಗ್ಗೆ ಅಸಮಾಧಾನ ಹೊಂದಿರುವ ಬಿಜೆಪಿ ಶತ್ರುಘ್ನ ಸಿನ್ಹಾರನ್ನು ದೇಶದ್ರೋಹಿ ಎನ್ನುತ್ತಿದೆ ಎಂದು ಮೆಮನ್ ತಿಳಿಸಿದ್ದಾರೆ. ಮಧ್ಯ ಪ್ರದೇಶದ ಚಿಂದ್‌ವಾರ್‌ನಲ್ಲಿ ನಡೆದ ರ್ಯಾಲಿಯಲ್ಲಿ ಮಾತನಾಡಿದ್ದ ಶತ್ರುಘ್ನ ಸಿನ್ಹಾ ಅವರು, ಮಹಾತ್ಮಾ ಗಾಂಧಿ, ಸರ್ದಾರ್ ಪಟೇಲ್ ಮತ್ತು ಜವಾಹರ್ ಲಾಲ್ ನೆಹರೂ ಜತೆ ಮೊಹಮ್ಮದ್ ಅಲಿ ಜಿನ್ನಾ ಕೂಡಾ ಸ್ವಾತಂತ್ರ ಹೋರಾಟ ಮಾಡಿದ್ದರು ಎಂದು ಹೇಳಿದ್ದರು. ಆಮೇಲೆ ತಾನು ಬಾಯ್ತಪ್ಪಿನಿಂದ ಈ ರೀತಿಯಾಗಿ ಹೇಳಿದ್ದೆ ಎಂದಿದ್ದರು. ಇದಕ್ಕೆ ಬಿಜೆಪಿ ರಾಷ್ಟಾÅಧ್ಯಕ್ಷ ಅಮಿತ್ ಶಾ ಅವರು ಇದು ದೇಶದ್ರೋಹದ ಹೇಳಿಕೆಯಾಗಿದೆ ಎಂದು ಕಿಡಿಕಾರಿದ್ದರು. ಶತ್ರುಘ್ನ ಸಿನ್ಹಾ ಅವರು ಇತ್ತೀಚೆಗೆ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದರು.
Ad
ಹಳಸಿದ ಆಹಾರ ಕೊಟ್ಟಿದ್ದಕ್ಕೆ ಕ್ಯಾಂಟೀನ್ ಸಿಬ್ಬಂದಿ ಮುಖಕ್ಕೆ ಗುದ್ದಿದ ಶಿವಸೇನೆ ಶಾಸಕ!
Shocking! ಬುದ್ಧಿಮಾತು ಹೇಳಿದ್ದಕ್ಕೆ ಕೊಡಲಿಯಿಂದ ಹ*ಲ್ಲೆ ನಡೆಸಿ ಅಜ್ಜಿಯನ್ನೇ ಕೊಂ*ದ ಮೊಮ್ಮಗ
Kejriwal: ಉತ್ತಮ ಆಡಳಿತಕ್ಕಾಗಿ ನನಗೆ ನೊಬೆಲ್ ಪ್ರಶಸ್ತಿ ಸಿಗಬೇಕು!: ಕೇಜ್ರಿವಾಲ್
Mumbai: ಮನೆಗೆ ಊಟಕ್ಕೆ ಬರುವುದಾಗಿ ಹೇಳಿ ಸೇತುವೆಯಿಂದ ಜಿಗಿದು ವೈದ್ಯ ಆತ್ಮಹ*ತ್ಯೆಗೆ ಶರಣು!
Rajasthan: ವಾಯುಪಡೆಯ ಜಾಗ್ವಾರ್ ಯುದ್ಧ ವಿಮಾನ ಪತನ; ಪೈಲಟ್ ಸೇರಿ ಇಬ್ಬರು ಸಾವು
ಹಳಸಿದ ಆಹಾರ ಕೊಟ್ಟಿದ್ದಕ್ಕೆ ಕ್ಯಾಂಟೀನ್ ಸಿಬ್ಬಂದಿ ಮುಖಕ್ಕೆ ಗುದ್ದಿದ ಶಿವಸೇನೆ ಶಾಸಕ!
Dharwad: ಆಂಗ್ಲ ಮಾದ್ಯಮ ಶಾಲೆ ಆರಂಭಿಸುವುದು ಕೈಬಿಡಿ… ಸರ್ಕಾರಕ್ಕೆ ಕವಿಸಂ ಆಗ್ರಹ
Shocking! ಬುದ್ಧಿಮಾತು ಹೇಳಿದ್ದಕ್ಕೆ ಕೊಡಲಿಯಿಂದ ಹ*ಲ್ಲೆ ನಡೆಸಿ ಅಜ್ಜಿಯನ್ನೇ ಕೊಂ*ದ ಮೊಮ್ಮಗ
ENG vs IND: 3ನೇ ಟೆಸ್ಟ್‌ಗೆ ಇಂಗ್ಲೆಂಡ್ ತಂಡ ಪ್ರಕಟ; 4 ವರ್ಷದ ಬಳಿಕ ಮರಳಿದ ಘಾತಕ ವೇಗಿ
Dharawad: ಕಾಂಗ್ರೆಸ್-ಬಿಜೆಪಿಯಿಂದ ಹಿಂದಿ ಹೇರಿಕೆ ತಡೆ ಅಸಾಧ್ಯ: ಪ್ರೊ.ಬಿಳಿಮಲೆ
You seem to have an Ad Blocker on.
To continue reading, please turn it off or whitelist Udayavani.