ಬ್ರಿಟಿಷ್ ಕಾಲದ ಸೇತುವೆಯನ್ನು ಕೆಡವಲು 27 ಗಂಟೆಗಳ ರೈಲುಗಳ ಮೆಗಾ ಬ್ಲಾಕ್
37 ಲಕ್ಷಕ್ಕೂ ಹೆಚ್ಚು ಪ್ರಯಾಣಿಕರ ಮೇಲೆ ಪರಿಣಾಮ ಬೀರುವ ಸಾಧ್ಯತೆ
Team Udayavani, Nov 19, 2022, 1:51 PM IST
ಮುಂಬಯಿ : ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್ (CSMT) ಮತ್ತು ದಕ್ಷಿಣ ಮುಂಬೈನ ಮಸೀದಿ ಬಂದರ್ ನಿಲ್ದಾಣದ ನಡುವಿನ ಬ್ರಿಟಿಷ್ ಕಾಲದ ಕಾರ್ನಾಕ್ ಸೇತುವೆಯನ್ನು ಕೆಡವಲು ಸೆಂಟ್ರಲ್ ರೈಲ್ವೆ (CR) ಶನಿವಾರ ರಾತ್ರಿಯಿಂದ 27 ಗಂಟೆಗಳ ಮೆಗಾ ಬ್ಲಾಕ್ ಅನ್ನು ನಡೆಸುತ್ತಿದೆ.
ಮೆಗಾ ಬ್ಲಾಕ್ ರಾತ್ರಿ 11 ಗಂಟೆಗೆ (ನವೆಂಬರ್ 19) ಪ್ರಾರಂಭವಾಗುತ್ತದೆ ಮತ್ತು ನವೆಂಬರ್ 21 ರಂದು ಬೆಳಗಿನ ಜಾವ 2 ಗಂಟೆಗೆ ಕೊನೆಗೊಳ್ಳುತ್ತದೆ, ಈ ಕಾರಣದಿಂದಾಗಿ ಈ ಅವಧಿಯಲ್ಲಿ ಉಪನಗರ ಮತ್ತು ಎಕ್ಸ್‌ಪ್ರೆಸ್ ರೈಲುಗಳ ವೇಳಾಪಟ್ಟಿಯ ಮೇಲೆ ಪರಿಣಾಮ ಬೀರುತ್ತದೆ ಎಂದು ಪ್ರಕಟಣೆ ತಿಳಿಸಿದೆ.
ವಿಶೇಷ ಬ್ಲಾಕ್‌ನಿಂದ ಪ್ರತಿದಿನ 37 ಲಕ್ಷಕ್ಕೂ ಹೆಚ್ಚು ಸ್ಥಳೀಯ ರೈಲು ಪ್ರಯಾಣಿಕರು ಹಾಗೂ ಹೊರ ನಿಲ್ದಾಣದ ರೈಲುಗಳಲ್ಲಿ ಪ್ರಯಾಣಿಸುವವರ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ. 1,800 ಕ್ಕೂ ಹೆಚ್ಚು ಸ್ಥಳೀಯ ರೈಲು ಸೇವೆಗಳು ಸೆಂಟ್ರಲ್ ರೈಲ್ವೆಯ ಮುಂಬೈ ಉಪನಗರ ನೆಟ್‌ವರ್ಕ್‌ನಲ್ಲಿ ಕಾರ್ಯನಿರ್ವಹಿಸುತ್ತವೆ, ಇದು ದಕ್ಷಿಣ ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್ ನಿಂದ ಹಾರ್ಬರ್ ಮತ್ತು ಮುಖ್ಯ ಮಾರ್ಗಗಳನ್ನು ಒಳಗೊಂಡಿದೆ.
ಸೇತುವೆಯನ್ನು 1866-67 ರಲ್ಲಿ ನಿರ್ಮಿಸಲಾಗಿತ್ತು 2018 ರಲ್ಲಿ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಬಾಂಬೆ (ಐಐಟಿಬಿ) ಯ ಪರಿಣಿತ ತಂಡವು ಅಸುರಕ್ಷಿತವೆಂದು ಘೋಷಿಸಿತ್ತು.ಅದರ ಮೇಲೆ ಭಾರೀ ವಾಹನಗಳ ಸಂಚಾರವನ್ನು 2014 ರಲ್ಲಿ ನಿಲ್ಲಿಸಲಾಗಿತ್ತು ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಿರೀಕ್ಷಣಾ ಜಾಮೀನು: ಮಾಡಾಳ್ ವಿರೂಪಾಕ್ಷಪ್ಪಗೆ ಸುಪ್ರೀಂ ನೋಟಿಸ್ ಜಾರಿ
ಸಕ್ರಿಯ ರಾಜಕಾರಣಕ್ಕೆ ಕಾಲಿಟ್ಟ ಸುಷ್ಮಾ ಸ್ವರಾಜ್ ಪುತ್ರಿ ಬಾನ್ಸುರಿ; ಕಾನೂನು ಪದವೀಧರೆ
4 ಮಕ್ಕಳೊಂದಿಗೆ ಬಾವಿಗೆ ಹಾರಿ,ಹಗ್ಗ ಹಿಡಿದು ತನ್ನನು ಹಾಗೂ ಹಿರಿ ಮಗಳನ್ನು ರಕ್ಷಿಸಿದ ತಾಯಿ.!
ಸಾವರ್ಕರ್ ಅವರನ್ನು ಅವಮಾನಿಸಿದರೆ… ರಾಹುಲ್ ಗಾಂಧಿ ಹೇಳಿಕೆಗೆ ಉದ್ಧವ್ ಠಾಕ್ರೆ ಆಕ್ರೋಶ
ರಾಘವ್ ಛಡ್ಡಾ-ಪರಿಣಿತಿ ಛೋಪ್ರಾ ಶೀಘ್ರವೇ ಎಂಗೇಜ್
MUST WATCH
ಹೊಸ ಸೇರ್ಪಡೆ
ಆಕಾಂಕ್ಷಾ ದುಬೆ ಪ್ರಕರಣ: ಮಗಳ ಸಾವಿಗೆ ಇವರಿಬ್ಬರೇ ಕಾರಣವೆಂದ ತಾಯಿ
ಜೆಡಿಎಸ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಗುಬ್ಬಿ ಶ್ರೀನಿವಾಸ್
Mumbai to London;ಯೋಗೇಶ್ ಎಂಬ ಅಲೆಮಾರಿ! 100 ದಿನಗಳ ಬೈಕ್ ಪ್ರಯಾಣ…24 ದೇಶಗಳಿಗೆ ಭೇಟಿ…
ಮಂಗಳೂರಿನಲ್ಲಿ ಗಾಂಜಾ ಜಾಲ; ಪೆಡ್ಲರ್ ಸಹಿತ ನಾಲ್ವರ ಬಂಧನ
ಧಮಕಿ ಹಾಕುವುದು- ಹೊಡೆಯುವುದು ಡಿಕೆಶಿ- ಸಿದ್ದರಾಮಯ್ಯ ಸಂಸ್ಕೃತಿ: ಪ್ರಹ್ಲಾದ ಜೋಶಿ