ಮುಂಬೈ: ಗೋರೆಗಾಂವ್ ಸ್ಟುಡಿಯೋದಲ್ಲಿ ಅಗ್ನಿ ಅವಘಡ; ಸಾವು, ನೋವು ಸಂಭವಿಸಿಲ್ಲ
ಕಳೆದ ವಾರ ಮಹಾರಾಷ್ಟ್ರದ ಭಿವಾಂಡಿಯ ಎಂಐಡಿಸಿ ಪ್ರದೇಶದಲ್ಲಿನ ಗೋದಾಮಿನಲ್ಲಿ ಅಗ್ನಿ ಅವಘಡ ಸಂಭವಿಸಿತ್ತು.
Team Udayavani, Feb 2, 2021, 6:31 PM IST
ಮುಂಬೈ: ಇಲ್ಲಿನ ಗೋರೆಗಾಂವ್ ಪಶ್ಚಿಮದಲ್ಲಿರುವ ಸ್ಟುಡಿಯೋದಲ್ಲಿ ಮಂಗಳವಾರ(ಫೆ.1, 2021) ಅಗ್ನಿ ಅನಾಹುತ ಸಂಭವಿಸಿದ್ದು, ಈ ಸ್ಟುಡಿಯೋ ನಗರದ ಇನೋರ್ಬಿಟ್ ಮಾಲ್ ಬಳಿ ಇದ್ದಿರುವುದಾಗಿ ವರದಿ ತಿಳಿಸಿದೆ.
ಘಟನಾ ಸ್ಥಳಕ್ಕೆ ಎಂಟು ಅಗ್ನಿಶಾಮಕ ದಳ ದೌಡಾಯಿಸಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಸ್ಟುಡಿಯೋದಲ್ಲಿ ಬೆಂಕಿ ಅವಘಡ ಸಂಭವಿಸಿದ ವೇಳೆ ಯಾರೂ ಒಳಗೆ ಇಲ್ಲದಿದ್ದ ಕಾರಣ ಯಾವುದೇ ಸಾವು, ನೋವು ಸಂಭವಿಸಿಲ್ಲ. ಪ್ರಾಥಮಿಕ ವರದಿಗಳ ಪ್ರಕಾರ, ಶಾರ್ಟ್ ಸರ್ಕ್ಯೂಟ್ ನಿಂದಾಗಿ ಅಗ್ನಿ ಅವಘಡ ಸಂಭವಿಸಿರುವುದಾಗಿ ತಿಳಿಸಿದೆ.
ಗೋರೆಗಾಂವ್ ಸಿನಿಮಾ ಸ್ಟುಡಿಯೋಗಳ ಹಬ್ ಆಗಿದೆ. ಪೂರ್ವ ಗೋರೆಗಾಂವ್ ಪ್ರಸಿದ್ಧ ಫಿಲ್ಮ್ ಸಿಟಿಯಾಗಿದೆ. ಕಳೆದ ವಾರ ಮಹಾರಾಷ್ಟ್ರದ ಭಿವಾಂಡಿಯ ಎಂಐಡಿಸಿ ಪ್ರದೇಶದಲ್ಲಿನ ಗೋದಾಮಿನಲ್ಲಿ ಅಗ್ನಿ ಅವಘಡ ಸಂಭವಿಸಿತ್ತು.
ಮಹಾರಾಷ್ಟ್ರದ ಬಾಂದ್ರಾದಲ್ಲಿನ ಜಿಲ್ಲಾ ಜನರಲ್ ಆಸ್ಪತ್ರೆಯಲ್ಲಿ ಜನವರಿ 9ರಂದು ಭಾರೀ ಅಗ್ನಿ ಅವಘಡ ಸಂಭವಿಸಿದ ಪರಿಣಾಮ ಹತ್ತು ನವಜಾತ ಶಿಶುಗಳು ಸಾವನ್ನಪ್ಪಿದ್ದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
MUST WATCH
ಹೊಸ ಸೇರ್ಪಡೆ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ