9 ತಿಂಗಳಿಂದ ಅಪ್ರಾಪ್ತೆ ಮೇಲೆ 29 ಜನ ಕೀಚಕರಿಂದ ಸಾಮೂಹಿಕ ಅತ್ಯಾಚಾರ
Team Udayavani, Sep 23, 2021, 6:37 PM IST
ಮುಂಬೈ : ವಾಣಿಜ್ಯ ನಗರಿ ಮುಂಬೈನಲ್ಲಿ ಆಘಾತಕಾರಿ ಘಟನೆಯೊಂದು ನಡೆದಿರುವುದು ಬೆಳಕಿಗೆ ಬಂದಿದೆ. 15 ವರ್ಷದ ಹುಡುಗಿಯ ಮೇಲೆ ಇಬ್ಬರು ಅಪ್ರಾಪ್ತರು ಸೇರಿದಂತೆ 29 ಜನ ಕೀಚಕರು ಕಳೆದ 9 ತಿಂಗಳಿನಿಂದ ಸತತವಾಗಿ ಸಾಮೂಹಿಕ ಅತ್ಯಾಚಾರ ನಡೆಸಿದ ಬೆಚ್ಚಿ ಬೀಳಿಸುವಂತಹ ಘಟನೆ ನಡೆದಿದೆ.
ಈ ವರ್ಷದ ಜನವರಿ ತಿಂಗಳಿನಲ್ಲಿ ಸಂತ್ರಸ್ತೆಯ ಬಾಯ್ಫ್ರೆಂಡ್ ಅತ್ಯಾಚಾರ ನಡೆಸಿದ್ದಾನೆ. ಈ ದೃಶ್ಯವನ್ನು ತನ್ನ ಮೊಬೈಲ್ನಲ್ಲಿ ಸೆರೆ ಹಿಡಿದಿದ್ದಾನೆ. ನಂತರ ಅತ್ಯಾಚಾರದ ವಿಡಿಯೋವನ್ನು ತನ್ನ ಸ್ನೇಹಿತರ ಜೊತೆ ಹಂಚಿಕೊಂಡಿದ್ದಾನೆ. ನಂತರದ ದಿನಗಳಲ್ಲಿ ಈ ವಿಡಿಯೋ ಇಟ್ಟುಕೊಂಡು ಬೆದರಿಸಿ ಆಕೆಯ ಮೇಲೆ ಹೀನಕೃತ್ಯವೆಸಗುತ್ತಲೆ ಬಂದಿದ್ದಾರೆ.
ಜನವರಿಯಲ್ಲಿ ಅತ್ಯಾಚಾರ ನಡೆಸಿದ ಬಾಯ್ಫ್ರೆಂಡ್ ಆ ವಿಡಿಯೋ ತೋರಿಸಿ ಹೆದರಿಸಿ ಬೆದರಿಸಿ ಹಲವು ಬಾರಿ ಮತ್ತೆ ಅದೇ ಕೃತ್ಯ ನಡೆಸಿದ್ದಾನೆ. ಬಳಿಕ ತನ್ನ ಸ್ನೇಹಿತರಿಗೆ ವಿಡಿಯೋ ಹರಿಬಿಟ್ಟಿದ್ದಾನೆ. ಇದನ್ನು ಇಟ್ಟುಕೊಂಡು 9 ತಿಂಗಳಿನಲ್ಲಿ ನಾಲ್ಕರಿಂದ ಐದು ಸಾರಿ ವಿವಿಧ ಸ್ಥಳಗಳಲ್ಲಿ ಆಕೆಯ ಮೇಲೆ 29 ಜನರು ಸಾಮೂಹಿಕವಾಗಿ ಅತ್ಯಾಚಾರ ನಡೆಸಿದ್ದಾರೆ ಎಂದು ಹೆಚ್ಚುವರಿ ಪೊಲೀಸ್ ಕಮಿಷನರ್ ದತ್ತಾತ್ರೇಯ ಕರಾಲೆ ಮಾಹಿತಿ ನೀಡಿದ್ದಾರೆ.
ಕಳೆದ ರಾತ್ರಿ ( ಬುಧವಾರ) ಸಂತ್ರಸ್ಥೆಯ ದೂರಿನ ಆಧಾರದ ಮೇಲೆ 24 ಜನ ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರು ಪ್ರಮುಖ ರಾಜಕೀಯ ಪಕ್ಷವೊಂದರ ಜೊತೆ ಗುರುತಿಸಿಕೊಂಡವರಾಗಿದ್ದಾರೆ ಎಂದು ಕರಾಲೆ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್