ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್ ನಿಂದ ಜೀವ ಬೆದರಿಕೆ: ನಟ ಸಲ್ಮಾನ್ ಖಾನ್ ಗೆ Y+ ಭದ್ರತೆ
Team Udayavani, Nov 1, 2022, 3:02 PM IST
ಮುಂಬಯಿ : ಬಾಲಿವುಡ್ ಸೂಪರ್ಸ್ಟಾರ್ ಸಲ್ಮಾನ್ ಖಾನ್ ಅವರಿಗೆ ಬೆದರಿಕೆ ಕರೆಗಳು ಬರುತ್ತಿರುವ ಹಿನ್ನೆಲೆಯಲ್ಲಿ ಭದ್ರತೆಯನ್ನು ಮತ್ತಷ್ಟು ಬಲಪಡಿಸಲು ಮುಂಬೈ ಪೊಲೀಸರು ನಿರ್ಧರಿಸಿದ್ದಾರೆ. ಅದರಂತೆ ಬಾಲಿವುಡ್ ನಟ ಸಲ್ಮಾನ್ಗೆ ಈಗ Y+ ವರ್ಗದ ಭದ್ರತೆಯನ್ನು ಒದಗಿಸಲಾಗಿದೆ.
ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್ನಿಂದ ನಟ ಸಲ್ಮಾನ್ ಖಾನ್ ಅವರಿಗೆ ಕೊಲೆ ಬೆದರಿಕೆಗಳು ಬಂದಿದ್ದವು. ಈ ಹಿನ್ನೆಲೆಯಲ್ಲಿ ಮುಂಬೈ ಪೊಲೀಸರು Y+ ಭದ್ರತೆಯನ್ನು ನೀಡಿದ್ದಾರೆ.
Y+ ಭದ್ರತೆಯಲ್ಲಿ ಇಬ್ಬರು ಶಸ್ತ್ರಸಜ್ಜಿತ ಕಾವಲುಗಾರರು ಸಲ್ಮಾನ್ ಜೊತೆಯಲ್ಲಿರುತ್ತಾರೆ. ಅವರ ನಿವಾಸಕ್ಕೆ ಇಬ್ಬರು ಕಾವಲುಗಾರರನ್ನೂ ನಿಯೋಜಿಸಲಾಗಿರುತ್ತದೆ.
ಈ ವರ್ಷದ ಮೇ 29 ರಂದು ಪಂಜಾಬಿ ಗಾಯಕ ಸಿಧು ಮೂಸೆವಾಲಾ ಅವರನ್ನು ಹತ್ಯೆ ಮಾಡಲಾಗಿತ್ತು. ಇದಾದ ನಂತರ ಸಲ್ಮಾನ್ ಖಾನ್ ಮತ್ತು ಅವರ ತಂದೆ ಸಲೀಂ ಖಾನ್ ಅವರಿಗೆ ಬೆದರಿಕೆ ಪತ್ರಗಳು ಬಂದಿತ್ತು. ಅದರಲ್ಲಿ ಸಲ್ಮಾನ್ ಅವರನ್ನು ಸಿದ್ದು ಮೂಸೆವಾಲಾ ರೀತಿಯಲ್ಲೇ ಹತ್ಯೆಗೀಡಾಗಲಿದ್ದಾರೆ ಎಂದು ಬರೆಯಲಾಗಿತ್ತು. ಅಲ್ಲದೆ ಸಿದ್ದು ಮೂಸೆವಾಲಾನನ್ನು ಕೊಂದಿರುವುದಾಗಿ ಒಪ್ಪಿಕೊಂಡ ಬಿಷ್ಣೋಯಿ ಗ್ಯಾಂಗ್ನ ಹಲವು ಸದಸ್ಯರನ್ನು ಪೊಲೀಸರು ಬಂಧಿಸಿದ್ದಾರೆ. ಬೆದರಿಕೆ ಪತ್ರವನ್ನು ಗಂಭೀರವಾಗಿ ಪರಿಗಣಿಸದ ಮುಂಬೈ ಪೊಲೀಸರು ಹೆಚ್ಚಿನ ಭದ್ರತೆ ನೀಡಲು ಮುಂದಾಗಿದ್ದಾರೆ.
ಇದನ್ನೂ ಓದಿ : ಎಚ್ಚರ: ರಸ್ತೆ ದಾಟುವ ಭರದಲ್ಲಿ ಈ ತಪ್ಪನ್ನು ಎಂದೂ ಮಾಡದಿರಿ… ಬೆಚ್ಚಿಬೀಳಿಸುತ್ತೇ ಈ ವಿಡಿಯೋ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MUST WATCH
ಹೊಸ ಸೇರ್ಪಡೆ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ
Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್ ನೀಚ ಕೃತ್ಯ