15 ಮಂದಿ ವಿಕೃತ ಕಾಮಿಗಳಿಂದ 16 ರ ಬಾಲಕನ ಮೇಲೆ ನಿರಂತರ ರೇಪ್ !
Team Udayavani, Aug 3, 2017, 10:17 AM IST
ಮುಂಬಯಿ: ಅತ್ಯಂತ ಹೇಯ ಮತ್ತು ನಿರ್ಲಜ್ಜ ಘಟನೆಯೊಂದರಲ್ಲಿ 16 ವರ್ಷ ಪ್ರಾಯದ ಬಾಲಕನ ಮೇಲೆ 15 ಮಂದಿ ವಿಕೃತ ತರುಣರು ವರ್ಷದ ಕಾಲ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ.
ಅಂಧೇರಿಯ ಪಶ್ಚಿಮ ಭಾಗದಲ್ಲಿ ಘಟನೆ ನಡೆದಿದ್ದು,ಡಿಎನ್ ನಗರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಾಲಕ ತೀವ್ರ ನೋವಿನಿಂದ ಬಳಲುತ್ತಿದ್ದುದನ್ನು ಗಮನಿಸಿ ಸ್ನೇಹಿತ ಪೊಲೀಸರಿಗೆ ದೂರು ನೀಡಿದ್ದಾನೆ.
ಪೊಲೀಸರು ದೂರಿನನ್ವಯ 15 ಮಂದಿಯ ವಿರುದ್ಧ ಪೋಕ್ಸೋ ಕಾಯಿದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಗಳೆಲ್ಲರು 15 ರಿಂದ 17 ವರ್ಷದ ಒಳಗಿನವರಾಗಿದ್ದಾರೆ.
ಬಾಲಕನಿಗೆ ಬೆದರಿಕೆ ಹಾಕಿ ಬ್ಲ್ಯಾಕ್ಮೇಲ್ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ವೈದ್ಯಕೀಯ ಪರೀಕ್ಷೆ ನಡೆಸಲಾಗಿದ್ದು ಲೈಂಗಿಕ ದೌರ್ಜನ್ಯ ನಡೆದಿರುವುದು ಧೃಡಪಟ್ಟಿದೆ.
2016 ರಲ್ಲಿ ಮೊದಲ ಬಾರಿಗೆ ನೆರೆಮನೆಯ ಬಾಲಕ ಅಸಹಜ ಸೆಕ್ಸ್ ನಡೆಸಿ ವಿಡಿಯೋ ಚಿತ್ರಿಕರಿಸಿ ಸ್ನೇಹಿತರೊಂದಿಗೆ ಹಂಚಿಕೊಂಡಿದ್ದ , ಆ ಬಳಿಕ ಹಲವು ಬಾರಿ ಸ್ನೇಹಿತರು ಅಸಹಜ ಸೆಕ್ಸ್ನಲ್ಲಿ ಪಾಲ್ಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
MUST WATCH
ಹೊಸ ಸೇರ್ಪಡೆ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು