Rashid Khan: ಸಂಗೀತ ಮಾಂತ್ರಿಕ ಉಸ್ತಾದ್ ರಶೀದ್ ಖಾನ್ ಅರೋಗ್ಯ ಸ್ಥಿತಿ ಗಂಭೀರ
Team Udayavani, Jan 9, 2024, 2:45 PM IST
ಕೋಲ್ಕತ್ತಾ: ಪ್ರಾಸ್ಟೇಟ್ ಕ್ಯಾನ್ಸರ್ ನಿಂದ ಬಳಲುತ್ತಿರುವ ಖ್ಯಾತ ಶಾಸ್ತ್ರೀಯ ಗಾಯಕ ರಶೀದ್ ಖಾನ್ ಅವರ ಅರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.
ಪ್ರಾಸ್ಟೇಟ್ ಕ್ಯಾನ್ಸರ್ ನಿಂದ ಬಳಲುತ್ತಿರುವ ಅವರನ್ನು ಕಳೆದ ತಿಂಗಳು ಕೋಲ್ಕತ್ತಾದ ಖಾಸಗಿ ಆಸ್ಪತ್ರೆಗೆ ದಾಖಲಾಗಿತ್ತು ಇದೀಗ ಮತ್ತೆ ಅವರ ಅರೋಗ್ಯ ಸ್ಥಿತಿ ಗಂಭೀರವಾಗಿದ್ದು ವೆಂಟಿಲೇಟರ್ ಬೆಂಬಲದಲ್ಲಿ ಇರಿಸಲಾಗಿದೆ ಎಂದು ಆಸ್ಪತ್ರೆಯ ವೈದ್ಯಾಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಈ ಕುರಿತು ಮಾಹಿತಿ ನೀಡಿದ ಆಸ್ಪತ್ರೆಯ ಹಿರಿಯ ವೈದ್ಯರು, ‘ಖಾನ್ ಅವರ ಸ್ಥಿತಿ ತುಂಬಾ ಗಂಭೀರವಾಗಿದೆ ಮತ್ತು ಅವರನ್ನು ಐಸಿಯುನಲ್ಲಿ ವೆಂಟಿಲೇಶನ್ನಲ್ಲಿ ಇರಿಸಲಾಗಿದ್ದು ಆಮ್ಲಜನಕದ ಬೆಂಬಲದಲ್ಲಿದ್ದಾರೆ. ನಮ್ಮ ವೈದ್ಯರ ತಂಡ ಅವರ ಮೇಲೆ ಹೆಚ್ಚಿನ ನಿಗಾ ಇರಿಸಿ ಚಿಕಿತ್ಸೆಯನ್ನು ನೀಡುತ್ತಿದ್ದಾರೆ” ಎಂದು ಹೇಳಿದ್ದಾರೆ.
ಕಳೆದ ತಿಂಗಳು ಸೆರೆಬ್ರಲ್ ಅಟ್ಯಾಕ್ ಆದ ಬಳಿಕ ಖಾನ್ ಅವರ ಆರೋಗ್ಯ ಸ್ಥಿತಿ ಹದಗೆಟ್ಟಿತು.
ಇದನ್ನೂ ಓದಿ: Reels ಮಾಡುವುದನ್ನು ನಿಲ್ಲಿಸು ಎಂದಿದ್ದಕ್ಕೆ ಪ್ಲ್ಯಾನ್ ಮಾಡಿ ಪತಿಯನ್ನೇ ಮುಗಿಸಿದ ಪತ್ನಿ