ನಡ್ಡಾ ಬಿಜೆಪಿ ಕಾರ್ಯಾಧ್ಯಕ್ಷ
Team Udayavani, Jun 18, 2019, 5:00 AM IST
ನವದೆಹಲಿ: ಬಿಜೆಪಿಯ ಹಿರಿಯ ನಾಯಕ ಹಾಗೂ ಕೇಂದ್ರದ ಮಾಜಿ ಸಚಿವ ಜೆ.ಪಿ. ನಡ್ಡಾ ಅವರನ್ನು ಬಿಜೆಪಿ ಕಾರ್ಯಾಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಸೋಮವಾರ ಸಂಜೆ ನವದೆಹಲಿಯಲ್ಲಿ ನಡೆದ ಬಿಜೆಪಿ ಸಂಸದೀಯ ಮಂಡಳಿಯ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಕೆಲವೇ ತಿಂಗಳಲ್ಲಿ ಮಹಾರಾಷ್ಟ್ರ, ಹರ್ಯಾಣ ಹಾಗೂ ಜಾರ್ಖಂಡ್ ವಿಧಾನಸಭಾ ಚುನಾವಣೆಗಳು ನಡೆಯುವುದರಿಂದ ಅಲ್ಲಿಯವರೆಗೂ ಬಿಜೆಪಿಯ ರಾಷ್ಟ್ರಾಧ್ಯಕ್ಷರಾಗಿ ಅಮಿತ್ ಶಾ ಅವರನ್ನೇ ಮುಂದುವರಿಸಲು ಸಂಸದೀಯ ಮಂಡಳಿ ತೀರ್ಮಾನಿಸಿದೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ರಕ್ಷಣಾ ಸಚಿವ ರಾಜನಾಥ್ ಸಿಂಗ್, ”ಸದ್ಯದ ಮಟ್ಟಿಗೆ ಪಕ್ಷದ ಅಧ್ಯಕ್ಷ ಸ್ಥಾನದಲ್ಲಿ ಶಾ ಅವರೇ ಮುಂದುವರಿಯಲಿದ್ದಾರೆ. ಪಕ್ಷದ ಕಾರ್ಯಾಧ್ಯಕ್ಷರ ಸ್ಥಾನಕ್ಕೆ ನಡ್ಡಾ ಅವರನ್ನು ಪಕ್ಷದ ಸಂಸದೀಯ ಮಂಡಳಿಯ ಸದಸ್ಯರು ಆರಿಸಿದ್ದಾರೆ” ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!