ಮೇ 30 ರಂದು ಮೋದಿ 2 ನೇ ಬಾರಿಗೆ ಪ್ರಮಾಣ ವಚನ ಸ್ವೀಕಾರ
Team Udayavani, May 26, 2019, 5:41 PM IST
ಹೊಸದಿಲ್ಲಿ: ಭರ್ಜರಿ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೇರುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರು ಮೇ 30 ರಂದು 2 ನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ.
ಮೇ 30 ಗುರುವಾರ ಸಂಜೆ 7 ಗಂಟೆಗೆ ರಾಷ್ಟ್ರಪತಿ ಭವನದಲ್ಲಿ ಕಾರ್ಯಕ್ರಮ ಜರುಗಲಿದೆ. ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಕೆಲ ಸಂಪುಟ ಸದಸ್ಯರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಪ್ರಮಾಣ ವಚನ ಕಾರ್ಯಕ್ರಮಕ್ಕೆ ವಿದೇಶಿ ನಾಯಕರು ಸಾಕ್ಷಿಯಾಗಲಿದ್ದಾರೆ.