
Nashik: ಕಾರು ನದಿಗೆ ಉರುಳಿ ಒಂದೇ ಕುಟುಂಬದ ಮೂವರ ಸಾವು; ಆರು ಮಂದಿಗೆ ಗಾಯ
Team Udayavani, May 30, 2023, 8:14 PM IST

ನಾಸಿಕ್: ಕಾರು ನದಿಗೆ ಉರುಳಿದ ಪರಿಣಾಮ ನಾಲ್ಕು ವರ್ಷದ ಬಾಲಕಿ ಸಹಿತ ಒಂದೇ ಕುಟುಂಬದ ಮೂವರು ಸಾವನ್ನಪ್ಪಿ ಆರು ಮಂದಿ ಗಾಯಗೊಂಡ ಘಟನೆ ಜಿಲ್ಲೆಯಲ್ಲಿ ಮಂಗಳವಾರ ಸಂಭವಿಸಿದೆ.
ಒಂದೇ ಕುಟುಂಬದ 10 ಸದಸ್ಯರಿದ್ದ ಕಾರು ಜಾಲಾ°ದಿಂದ ಮಾಲೆಗಾಂವ್‌ಗೆ ತೆರಳುತ್ತಿದ್ದಾಗ ನಂದಗಾಂವ್ ತಾಲೂಕಿನ ಪಂಜಾನ್ ನದಿ ಸೇತುವೆಯ ಮೇಲೆ ಮುಂಜಾನೆ 1 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ.
ಅಪಘಾತದಲ್ಲಿ ಮನ್ಸೂರಿ ಕುಟುಂಬದ ಮೂವರು ಸದಸ್ಯರಾದ ಡಾ| ಯಾಕೂಬ್ ರಂಜಾನ್ ಮನ್ಸೂರಿ (50), ಅಫ್ರೋಜ್ ಅಬ್ದುಲ್ ಲತೀಫ್ (35) ಮತ್ತು ಶಿಫಾ (4) ಸಾವನ್ನಪ್ಪಿದ್ದು, ಆರು ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಕಾರು ಚಾಲನೆ ಮಾಡುತ್ತಿದ್ದ ಡಾ| ಮನ್ಸೂರಿ ಅವರು ನಿದ್ದೆಗೆ ಜಾರಿದ ಪರಿಣಾಮ ಕಾರು ಪಂಜಾನ್ ನದಿಗೆ ಉರುಳಿದೆ. ಗಾಯಾಳುಗಳು ವಿವಿಧ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ.
ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ

India-Canada Diplomatic Row: ಅಮೇರಿಕ ವಿದೇಶಾಂಗ ಕಾರ್ಯದರ್ಶಿ ಬ್ಲಿಂಕನ್, ಜೈಶಂಕರ್ ಭೇಟಿ

Sukhpal Singh Khaira: ಡ್ರಗ್ಸ್ ಪ್ರಕರಣ.. ಕಾಂಗ್ರೆಸ್ ಶಾಸಕ ಸುಖ್ಪಾಲ್ ಸಿಂಗ್ ಖೈರಾ ಬಂಧನ

Asian Games 2023: ಮುಂದುವರೆದ ಭಾರತದ ಪದಕ ಬೇಟೆ… ಶೂಟಿಂಗ್ ನಲ್ಲಿ ಮತ್ತೊಂದು ಚಿನ್ನ

Gudibande: ಬುದ್ದಿ ಹೇಳಿದ್ದಕ್ಕೆ ಪೊಲೀಸರ ಬೈಕ್ ಗೆ ಬೆಂಕಿ ಇಟ್ಟ ಭೂಪ

Daily Horoscope: ಸ್ವಂತ ಉದ್ಯಮಿಗಳಿಗೆ ತಾತ್ಕಾಲಿಕ ಹಿನ್ನಡೆ, ಸಾಹಿತ್ಯ ಸಾಧಕರಿಗೆ ಗೌರವ