ನ್ಯಾಷನಲ್ ಹೆರಾಲ್ಡ್ ಪ್ರಕರಣ: ಇಂದು ಇ.ಡಿ. ಮುಂದೆ ಸೋನಿಯಾ ಹಾಜರು
Team Udayavani, Jul 21, 2022, 7:30 AM IST
ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ (ಇ.ಡಿ.) ನೋಟಿಸ್ ನೀಡಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರು ಜು. 21ರಂದು ದೆಹಲಿಯಲ್ಲಿರುವ ಇ.ಡಿ. ಕಚೇರಿಗೆ ವಿಚಾರಣೆಗೆ ಹಾಜರಾಗಲಿದ್ದಾರೆ.
ಕೆಲ ದಿನಗಳ ಹಿಂದೆ, ಅವರು ಕೊರೊನಾಕ್ಕೆ ತುತ್ತಾದ ಹಿನ್ನೆಲೆಯಲ್ಲಿ ಇ.ಡಿ. ಮುಂದೆ ವಿಚಾರಣೆಗೆ ಹಾಜರಾಗಿರಲಿಲ್ಲ. ಹಾಗಾಗಿ, ಅವರಿಗೆ ಕೆಲ ದಿನಗಳ ವಿಶ್ರಾಂತಿಗೆ ಅವಕಾಶ ಕಲ್ಪಿಸಲಾಗಿತ್ತು. ಅನಾರೋಗ್ಯದಿಂದ ಅವರು ಚೇತರಿಸಿಕೊಂಡ ಹಿನ್ನೆಲೆಯಲ್ಲಿ ಅವರಿಗೆ ಈ ತಿಂಗಳ ಆರಂಭದಲ್ಲಿ ಹೊಸ ನೋಟಿಸ್ ಜಾರಿಗೊಳಿಸಿದ್ದ ಇ.ಡಿ., ಜು. 21ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿತ್ತು.
ಪ್ರತಿಭಟನೆಗೆ ಕಾಂಗ್ರೆಸ್ ಸಜ್ಜು
ಸೋನಿಯಾ ಅವರನ್ನು ವಿಚಾರಣೆಗೊಳಪಡಿಸಿರುವುದನ್ನು ಖಂಡಿಸಿ, ದೇಶಾದ್ಯಂತ ಪ್ರತಿಭಟನೆ ನಡೆಸಲು ಕಾಂಗ್ರೆಸ್ ಸಜ್ಜಾಗಿದೆ. ಇತ್ತೀಚೆಗೆ, ರಾಹುಲ್ ಗಾಂಧಿಯವರು ಇ.ಡಿ. ಮುಂದೆ ವಿಚಾರಣೆಗೆ ಹಾಜರಾದಾಗಲೂ ರಾಷ್ಟ್ರವ್ಯಾಪಿ ಪ್ರತಿಭಟನೆ ನಡೆಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ