ಬಾರಾಚಟ್ಟಿ ಎನ್ ಕೌಂಟರ್: ಮೂವರು ನಕ್ಸಲರನ್ನು ಹತ್ಯೆಗೈದ ಭದ್ರತಾ ಪಡೆ
Team Udayavani, Nov 22, 2020, 10:07 AM IST
ಪಾಟ್ನಾ: ಇಂದು ನಸುಕಿನಲ್ಲಿ ನಡೆದ ಎನ್ ಕೌಂಟರ್ ನಲ್ಲಿ ಮೂವರು ನಕ್ಸಲರನ್ನು ಹೊಡೆದುರುಳಿಸುವಲ್ಲಿ ಭದ್ರತಾ ಪಡೆಗಳು ಯಶಸ್ವಿಯಾಗಿದೆ. ಬಿಹಾರದ ಗಯಾ ಜಿಲ್ಲೆಯ ಬಾರಾಚಟ್ಟಿಯಲ್ಲಿ ಇಂದು ನಸುಕಿನಲ್ಲಿ ಈ ಎನ್ ಕೌಂಟರ್ ನಡೆದಿದೆ.
ಸ್ಥಳದಲ್ಲಿ ನಕ್ಸಲರು ಇರುವ ಬಗ್ಗೆ ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದ ಭದ್ರತಾ ಪಡೆಗೆ ಅರಣ್ಯ ಪ್ರದೇಶದಲ್ಲಿ ನಕ್ಸಲರು ಎದುರಾಗಿದ್ದು, ಗುಂಡಿನ ದಾಳಿ ಆರಂಭಿಸಿದ್ದಾರೆ. ಕೆಲ ಹೊತ್ತಿನ ಬಳಿಕ ಸ್ಥಳ ತಪಾಸಣೆ ನಡೆಸಿದಾಗ ಮೂವರು ನಕ್ಸಲರ ಶವ ಪತ್ತೆಯಾಗಿದೆ.
ಕೋಬ್ರಾ 205 ನೇ ಬೆಟಾಲಿಯನ್ ನೇತೃತ್ವದಲ್ಲಿ ಎನ್ ಕೌಂಟರ್ ನಡೆಸಲಾಗಿದೆ. ಬಿಹಾರ ಪೊಲೀಸ್ ಸಿಬ್ಬಂದಿಯ ಸಹಯೋಗದೊಂದಿಗೆ ಕಾರ್ಯಾಚರಣೆ ಮಾಡಲಾಗಿದೆ.
ಇದನ್ನೂ ಓದಿ:ಎರಡನೇ ವಿಶ್ವಯುದ್ಧದ ನಂತರ ಅತೀ ದೊಡ್ಡ ಸವಾಲು ಎದುರಿಸುತ್ತಿದ್ದೇವೆ: ಪ್ರಧಾನಿ ಮೋದಿ
ಸ್ಥಳದಿಂದ ಎಕೆ ಸರಣಿಯ ಆಕ್ರಮಣಕಾರಿ ರೈಫಲ್ ಮತ್ತು ಐಎನ್ಎಸ್ಎಎಸ್ ರೈಫಲ್ ಅನ್ನು ವಶಪಡಿಸಿಕೊಳ್ಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್