ಮಹಾರಾಷ್ಟ್ರ: ಮೂವರು ಮಹಿಳೆಯರು ಸೇರಿ ಐವರು ನಕ್ಸಲರ ಹತ್ಯೆ
Team Udayavani, Oct 19, 2020, 8:26 AM IST
ಮುಂಬಯಿ: ಮಹಾರಾಷ್ಟ್ರದ ಗಡ್ಚಿರೋಲಿ ಜಿಲ್ಲೆಯ ಗ್ಯಾರಪಟ್ಟಿಯಲ್ಲಿ ರವಿವಾರ ಐವರು ನಕ್ಸಲರನ್ನು ಹೊಡೆದುರುಳಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಸಂಜೆ ನಾಲ್ಕು ಗಂಟೆಗೆ ಕೋಸ್ಮಿ-ಕಿಸ್ನೇಲಿ ಅರಣ್ಯಪ್ರದೇಶದಲ್ಲಿ ಈ ಎನ್ಕೌಂಟರ್ ನಡೆದಿದೆ. ಮೃತ ನಕ್ಸಲರ ಪೈಕಿ ಮೂವರು ಮಹಿಳೆಯರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಇದು ಈ ವರ್ಷ ನಕ್ಸಲರ ವಿರುದ್ಧ ನಡೆದ ಅತಿದೊಡ್ಡ ಕಾರ್ಯಾಚರಣೆ ಎಂದು ಹೇಳಲಾಗಿದೆ. ಗಡ್ಚಿರೋಲಿ ಪೊಲೀಸ್ ವಿಭಾಗದ ಸಿ-60 ಕಮಾಂಡೋಗಳು ಅರಣ್ಯದಲ್ಲಿ ಶೋಧ ನಡೆಸುತ್ತಿದ್ದಾಗ ನಕ್ಸಲರು ಏಕಾಏಕಿ ಗುಂಡಿನ ದಾಳಿ ನಡೆಸಿದರು.
ಎರಡೂ ಕಡೆ ಗುಂಡಿನ ಚಕಮಕಿ ನಡೆಯಿತು. ಅನಂತರ ನಕ್ಸಲರು ಅಲ್ಲಿಂದ ತಪ್ಪಿಸಿಕೊಂಡರು. ಶೋಧ ನಡೆಸಿದಾಗ ಮೂವರು ಮಹಿಳಾ ನಕ್ಸಲರು ಸೇರಿದಂತೆ ಐವರ ಮೃತದೇಹ ಪತ್ತೆಯಾಯಿತು ಎಂದು ಪೊಲೀಸರು ಹೇಳಿದ್ದಾರೆ.
ತೆಲಂಗಾಣ: ಇಬ್ಬರು ನಕ್ಸಲರ ಸಾವು
ಇನ್ನೊಂದೆಡೆ ಪ್ರತ್ಯೇಕ ಘಟನೆಯೊಂದರಲ್ಲಿ ತೆಲಂಗಾಣದ ಮುಲುಗು ಜಿಲ್ಲೆಯಲ್ಲಿ ಪೊಲೀಸರು ರವಿವಾರ ಇಬ್ಬರು ನಕ್ಸಲರನ್ನು ಸದೆಬಡಿದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಶಿವಲಿಂಗದ ಕುರಿತು ಅವಹೇಳನಕಾರಿ ಹೇಳಿಕೆ: ಎಐಎಂಐಎಂ ನಾಯಕನ ಬಂಧನ
ಚಳ್ಳಕೆರೆಯಲ್ಲಿ ಹನ್ಸ-ಎನ್ಜಿ ಯಶಸ್ವಿ ಪ್ರಯೋಗ; ಸಿಎಸ್ಐಆರ್, ಎನ್ಎಎಲ್ನಿಂದ ವಿಮಾನ ಸಿದ್ಧ
ಸ್ಥ.ಸಂಸ್ಥೆ ಚುನಾವಣೆ: ಒಬಿಸಿ ಮೀಸಲಾತಿಗೆ ಅಸ್ತು; ಮಧ್ಯಪ್ರದೇಶದ ಅರ್ಜಿಗೆ ಸು.ಕೋ.ಒಪ್ಪಿಗೆ
ಮುಂಗಾರು ಪ್ರವೇಶಕ್ಕೂ ಮುನ್ನ ಅಬ್ಬರ : ಕೇರಳ, ಅಸ್ಸಾಂ, ಮೇಘಾಲಯದಲ್ಲಿ ಮಳೆ ಪ್ರಕೋಪ
ರಾಹುಲ್ ಗಾಂಧಿ ಆದ್ಯತೆಯ ಆಯ್ಕೆ : ಕಾಂಗ್ರೆಸ್ ಹಿರಿಯ ನಾಯಕ ಶಶಿ ತರೂರ್ ಹೇಳಿಕೆ
MUST WATCH
ಹೊಸ ಸೇರ್ಪಡೆ
ಶಿವಲಿಂಗದ ಕುರಿತು ಅವಹೇಳನಕಾರಿ ಹೇಳಿಕೆ: ಎಐಎಂಐಎಂ ನಾಯಕನ ಬಂಧನ
ಎಸೆಸೆಲ್ಸಿ ಪರೀಕ್ಷಾ ಫಲಿತಾಂಶ ಇಂದು ಪ್ರಕಟ
ಪ್ರತಿಷ್ಠೆಗೆ ರಚನೆಯಾದ ತಾಲೂಕುಗಳು ಅನಾಥ; ತಹಶೀಲ್ದಾರ್ ನೇಮಕವಾಗಿಲ್ಲ ,ಆಡಳಿತ ಸೌಧವಿಲ್ಲ
ಚಳ್ಳಕೆರೆಯಲ್ಲಿ ಹನ್ಸ-ಎನ್ಜಿ ಯಶಸ್ವಿ ಪ್ರಯೋಗ; ಸಿಎಸ್ಐಆರ್, ಎನ್ಎಎಲ್ನಿಂದ ವಿಮಾನ ಸಿದ್ಧ
ಸ್ಥ.ಸಂಸ್ಥೆ ಚುನಾವಣೆ: ಒಬಿಸಿ ಮೀಸಲಾತಿಗೆ ಅಸ್ತು; ಮಧ್ಯಪ್ರದೇಶದ ಅರ್ಜಿಗೆ ಸು.ಕೋ.ಒಪ್ಪಿಗೆ