Goa ಡ್ರಗ್ಸ್ ದಂಧೆ: ಒಲಿಂಪಿಕ್ ಪದಕ ವಿಜೇತೆ ರಷ್ಯನ್ ಸೇರಿ ಮೂವರ ಬಂಧನ
Team Udayavani, Apr 29, 2023, 2:43 PM IST
ಪಣಜಿ: ಎನ್ಸಿಬಿ( Narcotics Control Bureau) ಗೋವಾದಲ್ಲಿ ಅಂತಾರಾಷ್ಟ್ರೀಯ ಮಟ್ಟದ ಡ್ರಗ್ ದಂಧೆಯನ್ನ ಭೇದಿಸಿದ್ದು ಇಬ್ಬರು ರಷ್ಯನ್ನರನ್ನು ಬಂಧಿಸಿದೆ. 1980 ರ ಒಲಿಂಪಿಕ್ ಬೆಳ್ಳಿ ಪದಕ ವಿಜೇತ ಈಜುಗಾರ್ತಿ, ಮಾಜಿ ಪೊಲೀಸ್ ಮತ್ತು ಒಬ್ಬ ಭಾರತೀಯನನ್ನ ಬಂಧಿಸಿ ವಿವಿಧ ಮಾದಕವಸ್ತುಗಳನ್ನು ವಶಪಡಿಸಿಕೊಂಡಿದೆ ಎಂದು ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.
ಕಳೆದ ಎರಡು ವಾರಗಳಿಂದ ಎನ್ಸಿಬಿಯ ಗೋವಾ ಘಟಕ ಕಾರ್ಯಾಚರಣೆ ನಡೆಸಿದೆ. ರಷ್ಯಾದ ಡ್ರಗ್ ದಂಧೆ ಗೋವಾದ ಅರಂಬೋಲ್ ಮತ್ತು ಅದರ ಪಕ್ಕದ ಪ್ರದೇಶಗಳಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದೆ ಎಂಬ ಸುಳಿವು ಆಧರಿಸಿ, ತನಿಖೆಯನ್ನು ಪ್ರಾರಂಭಿಸಲಾಯಿತು. ಗುಪ್ತಚರ ಮಾಹಿತಿಯ ಪ್ರಕಾರ, ಎಸ್ ವರ್ಗನೋವಾ ಎಂಬ ರಷ್ಯಾದ ಮಹಿಳೆ ವಿದೇಶಿ ಪ್ರಜೆಗಳಿಗೆ ಡ್ರಗ್ಸ್ ಪೂರೈಕೆಯಲ್ಲಿ ತೊಡಗಿಸಿಕೊಂಡಿದ್ದು, ತನಿಖೆಯ ಸಮಯದಲ್ಲಿ, ಆಕಾಶ್ ಎಂಬ ಸ್ಥಳೀಯ ವ್ಯಕ್ತಿಯನ್ನು ಬಂಧಿಸಿ ಪೂರಕ ಮಾಹಿತಿಯನ್ನು ಸಹ ನಾವು ಸ್ವೀಕರಿಸಿದ್ದೇವೆ ಎಂದು ಎನ್ಸಿಬಿ ಅಧಿಕಾರಿ ತಿಳಿಸಿದ್ದಾರೆ.
“ಹೆಚ್ಚಿನ ತನಿಖೆಯ ಸಮಯದಲ್ಲಿ, ಆಕಾಶ್ ದೊಡ್ಡ ನೆಟ್ವರ್ಕ್ನ ಭಾಗವಾಗಿದ್ದಾನೆ ಮತ್ತು ಅವನು ಕಾರ್ಟೆಲ್ನ ಕಿಂಗ್ಪಿನ್ ಆಗಿ ಕಾರ್ಯನಿರ್ವಹಿಸುತ್ತಿದ್ದ ರಷ್ಯಾದ ವ್ಯಕ್ತಿಯ ನಿರ್ದೇಶನಗಳ ಮೇಲೆ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ” ಎಂದು ಅಧಿಕಾರಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್ ಘೋಷಣೆ ಬರೆದ ವಿದ್ಯಾರ್ಥಿ ಪಾಸ್: ಪ್ರಾಧ್ಯಾಪಕ ಅಮಾನತು!
ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
MUST WATCH
ಹೊಸ ಸೇರ್ಪಡೆ
April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ
ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ
Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ