
ಆರ್ಯನ್ ಖಾನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
Team Udayavani, Oct 14, 2021, 7:20 PM IST

ಮುಂಬೈ: ಡ್ರಗ್ಸ್ ಸೇವನೆ ಪ್ರಕರಣದಡಿ ಬಂಧಿತನಾಗಿರುವ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಅವರಿಗೆ ಇಂದೂ ಕೂಡ ಜಾಮೀನು ಸಿಗಲಿಲ್ಲ. ಮುಂಬೈನ ವಿಶೇಷ ನ್ಯಾಯಾಲಯವು ಆರ್ಯನ್ ಖಾನ್ ಅವರ ಜಾಮೀನು ಅರ್ಜಿಯ ಆದೇಶವನ್ನು ಅಕ್ಟೋಬರ್ 20ಕ್ಕೆ ಮುಂದೂಡಿದೆ.
ಮುಂಬೈನಿಂದ ಗೋವಾ ಕಡೆಗೆ ತೆರಳುತ್ತಿದ್ದ ಹಡಗಿನ ಮೇಲೆ ಅಕ್ಟೋಬರ್ 3 ರಂದು ಎನ್‌ಸಿಬಿ ದಾಳಿ ನಡೆಸಿತ್ತು. ಆ ಸಂದರ್ಭದಲ್ಲಿ ಆರ್ಯನ್ ಖಾನ್ ಅವರನ್ನು ಬಂಧಿಸಲಾಯಿತು.
ಸದ್ಯ ಆರ್ಯನ್ ಖಾನ್ ನ್ಯಾಯಾಂಗ ಬಂಧನದಲ್ಲಿದ್ದು, ಮುಂಬೈನ ಆರ್ಥರ್ ರೋಡ್ ಜೈಲಿನಲ್ಲಿದ್ದಾನೆ.
ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಕಳೆದ ವಾರ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ ನಂತರ ಅವರು ವಿಶೇಷ ನ್ಯಾಯಾಲಯದ ಮೊರೆ ಹೋಗಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ಪಾಕ್ ಆಕ್ರಮಿತ ಪ್ರದೇಶದಲ್ಲಿ ತಲೆಯೆತ್ತಿದ ಶಾರದಾ ಪೀಠ | ಏನಿದರ ಹಿನ್ನೆಲೆ ?

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ
