‘ನೀಟ್’ ಫಲಿತಾಂಶ ಪ್ರಕಟಕ್ಕೆ ದಾರಿ ಸುಗಮ
Team Udayavani, Jun 13, 2017, 2:17 AM IST
ಹೊಸದಿಲ್ಲಿ: ‘ನೀಟ್’ ಪರೀಕ್ಷಾ ಫಲಿತಾಂಶ ಕುರಿತಾದ ಗೊಂದಲಗಳು ನೀಟಾಗಿಯೇ ಬಗೆಹರಿದಿವೆೆ. ಮದ್ರಾಸ್ ಹೈಕೋರ್ಟ್ ನೀಡಿದ್ದ ತಡೆಯಾಜ್ಞೆಯನ್ನು ಸೋಮವಾರ ತೆರವುಗೊಳಿಸಿರುವ ಸುಪ್ರೀಂ ಕೋರ್ಟ್, ಕೂಡಲೇ ಎಂಬಿಬಿಎಸ್ ಹಾಗೂ ಬಿಡಿಎಸ್ ಕೋರ್ಸ್ಗಳ ಪ್ರವೇಶಕ್ಕೆ ನಡೆದ ನೀಟ್ ಫಲಿತಾಂಶ ಪ್ರಕಟಿಸುವಂತೆ ಕೇಂದ್ರ ಪ್ರೌಢ ಶಿಕ್ಷಣ ಮಂಡಳಿ (ಸಿಬಿಎಸ್ಇ)ಗೆ ಆದೇಶಿಸಿದೆ. ಪರಿಣಾಮ ಅಂದಾಜು 12 ಲಕ್ಷ ವೈದ್ಯಕೀಯ ಪರೀಕ್ಷಾರ್ಥಿಗಳು ನಿಟ್ಟುಸಿರು ಬಿಡುವಂತಾಗಿದೆ.
ಇದೇ ಸಂದರ್ಭದಲ್ಲಿ, ನೀಟ್ಗೆ ಸಂಬಂಧಿಸಿದ ಯಾವುದೇ ಅರ್ಜಿಗಳನ್ನು ವಿಚಾರಣೆಗೆ ಕೈಗೆತ್ತಿಕೊಳ್ಳದಂತೆ ಸುಪ್ರೀಂ ಕೋರ್ಟ್ ದೇಶದ ಎಲ್ಲ ಹೈಕೋರ್ಟ್ಗಳಿಗೆ ನಿರ್ದೇಶನ ನೀಡಿದೆ. ಈಗಾಗಲೇ ನಿಗದಿಗೊಳಿಸಲಾದ ಕೌನ್ಸೆಲಿಂಗ್ ಹಾಗೂ ಪ್ರವೇಶ ಪ್ರಕ್ರಿಯೆಗಳಿಗೆ ಅನುಕೂಲವಾಗುವಂತೆ ಶೀಘ್ರ ಫಲಿತಾಂಶ ಪ್ರಕಟಿಸಿ ಎಂದು ಹೇಳಿರುವ ಸುಪ್ರೀಂ ಕೋರ್ಟ್, ಮದ್ರಾಸ್ ಹೈಕೋರ್ಟ್ಗೆ ತಡೆಯಾಜ್ಞೆ ನೀಡುವ ಅಧಿಕಾರವಿಲ್ಲ ಎಂದು ಹೇಳಿದೆ. ಇದರಿಂದಾಗಿ, ನೀಟ್ ಪರೀಕ್ಷಾ ಫಲಿತಾಂಶ ಪ್ರಕಟನೆಗೆ ದಾರಿ ಸುಗಮಗೊಂಡಂತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?
JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA