ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ನೇಪಾಲಿ ವಿದ್ಯಾರ್ಥಿ ಅರೆಸ್ಟ್
Team Udayavani, Dec 13, 2018, 5:39 PM IST
ಹೈದರಾಬಾದ್ : ತನ್ನ ಸಹಪಾಠಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿ ಬ್ಲಾಕ್ ಮೇಲ್ ಮಾಡುತ್ತಿದ್ದ ಆರೋಪದ ಮೇಲೆ ನಗರದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಓದುತ್ತಿರುವ ನೇಪಾಲೀ ವಿದ್ಯಾರ್ಥಿಯನ್ನು ಪೊಲೀಸರು ಬಂಧಿಸಿದ್ದಾರೆ.
ನೇಪಾಲಿ ವಿದ್ಯಾರ್ಥಿಯು ತನ್ನ ಸಹಪಾಠಿ ವಿದ್ಯಾರ್ಥಿನಿಯ ಗೆಳೆತನ ಬೆಳೆಸಿಕೊಂಡು ಆಕೆಯನ್ನು ಲೈಂಗಿಕವಾಗಿ ಶೋಷಿಸಿ ಬ್ಲಾಕ್ ಮೇಲ್ ಮಾಡುತ್ತಿದ್ದ. ಆತನ ಕಿರುಕುಳವನ್ನು ತಾಳಲಾರದೆ ಆಕೆ ಪೊಲೀಸರಲ್ಲಿ ದೂರು ದಾಖಲಿಸಿದಳು ಎಂದು ಇನ್ಸ್ಪೆಕ್ಟರ್ ಪಿ. ಗುರವ ರೆಡ್ಡಿ ತಿಳಿಸಿದರು.
ಬಂಧಿತ ನೇಪಾಲಿ ವಿದ್ಯಾರ್ಥಿ ವಿರುದ್ಧ ಪೊಲೀಸರು ಐಪಿಸಿ ಸೆ.376ರಡಿ ಮತ್ತು ಎಸ್ಸಿ/ಎಸ್ಟಿ ದೌರ್ಜನ್ಯ ತಡೆ ಕಾಯಿದೆಯಡಿ ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.