ಹೊಸ ಸಮವಸ್ತ್ರದಲ್ಲೇ ಕಮಾಂಡೋಗಳ ಪರೇಡ್‌

ಸೇನಾ ದಿನದ ಪರೇಡ್‌ನ‌ಲ್ಲಿ ಯೋಧರ ನೂತನ ಯೂನಿಫಾರ್ಮ್ ಅನಾವರಣ

Team Udayavani, Jan 16, 2022, 6:45 AM IST

thumb 4

ಹೊಸದಿಲ್ಲಿ: ಬಹಳ ಕಾಲದ ಬಳಿಕ ದೇಶದ ಸೇನಾಪಡೆಗೆ ಹೊಸ ಮಾದರಿಯ ಸಮವಸ್ತ್ರ ಸಿಕ್ಕಿದೆ. ಶನಿವಾರ ಹೊಸದಿಲ್ಲಿಯಲ್ಲಿ ಆಯೋಜಿಸಲಾಗಿದ್ದ ಸೇನಾ ದಿನಾಚರಣೆಯ ಪರೇಡ್‌ನಲ್ಲಿ ಸಶಸ್ತ್ರ ಪಡೆಗಳ ಯೋಧರು, ಈ ಸಮವಸ್ತ್ರವನ್ನೇ ಧರಿಸಿ ಹೆಜ್ಜೆ ಹಾಕಿದ್ದಾರೆ.

ಪುರುಷ ಮತ್ತು ಮಹಿಳಾ ಸಿಬಂದಿಗೆ ಧರಿಸಲು ಅನುಕೂಲವಾಗುವಂತೆ ಮತ್ತು ಹವಾಮಾನಕ್ಕೆ ತಕ್ಕಂತೆ ಹೊಸ ಸಮವಸ್ತ್ರವನ್ನು  ವಿನ್ಯಾಸಗೊಳಿಸಲಾಗಿದೆ. ಶನಿವಾರ ರಕ್ಷಣ ಪಡೆಗಳ 74ನೇ ಸ್ಥಾಪನ ದಿನದ ನಿಮಿತ್ತ ದಿಲ್ಲಿಯಲ್ಲಿ ನಡೆದ ಪರೇಡ್‌ನ‌ಲ್ಲಿ ಪ್ಯಾರಾಚೂಟ್‌ ರೆಜಿಮೆಂಟ್‌ನ ಯೋಧರು ಹೊಸ ಸಮವಸ್ತ್ರವನ್ನು ಧರಿಸಿ ಪಥಸಂಚಲನದಲ್ಲಿ ಭಾಗಿಯಾಗಿದ್ದಾರೆ.

ಗಡಿ ಬದಲಿಗೆ ಅವಕಾಶ ಇಲ್ಲ
ಸೇನಾ ದಿನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಭೂಸೇನಾ ಮುಖ್ಯಸ್ಥ ಜ| ಎಂ.ಎಂ. ನರವಾಣೆ, ದೇಶದ ಗಡಿ ಪ್ರದೇಶವನ್ನು ಬದಲಾವಣೆ ಮಾಡುವ ಯಾವುದೇ ಪ್ರಯತ್ನವನ್ನೂ ಯಶಸ್ವಿಯಾಗಲು ನಾವು ಬಿಡುವುದಿಲ್ಲ ಎಂದು  ಸ್ಪಷ್ಟವಾಗಿ ಸಾರಿದ್ದಾರೆ. ಕಳೆದ ವರ್ಷ ಉತ್ತರ ಭಾಗದ ಗಡಿ ಪ್ರದೇಶಗಳ ಪರಿಸ್ಥಿತಿ ನಿರ್ವಹಣೆ ಅತ್ಯಂತ ಸವಾಲಿನ ದ್ದಾಗಿತ್ತು ಎಂದ ಅವರು, ಈಗ ಪೂರ್ವ ಲಡಾಖ್‌ನಲ್ಲಿ  ಪರಿಸ್ಥಿತಿ ನಿಯಂತ್ರ ಣದಲ್ಲಿದೆ ಎಂದಿದ್ದಾರೆ.

ಇದೇ ವೇಳೆ, ದೇಶದ ಹಿತಾಸಕ್ತಿ ಕಾಪಾಡುವಲ್ಲಿ ಸೇನೆ ಅತ್ಯಂತ ಪ್ರಮುಖ ಪಾತ್ರ ವಹಿಸುತ್ತಿದೆ. ಅದು ನಮ್ಮ ಪ್ರಜೆಗಳ ವಿಶ್ವಾಸ ಗೆಲ್ಲುವಲ್ಲಿ ಯಶಸ್ವಿಯಾಗಿದೆ. ಪ್ರಾಕೃತಿಕ ವಿಕೋಪಗಳ ಸಂದರ್ಭದಲ್ಲಿ ಅದರ ಸೇವೆ ಅನನ್ಯವಾದದ್ದು ಎಂದು ರಕ್ಷಣ ಸಚಿವ ರಾಜನಾಥ್‌ ಸಿಂಗ್‌ ಅವರು ಸಶಸ್ತ್ರ ಪಡೆಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ:ಚಾಲಕನಿಗೆ ಪೀಡ್ಸ್‌ ; ಬರೋಬ್ಬರಿ 10ಕಿ.ಮೀ. ಬಸ್ ಚಲಾಯಿಸಿದ ಪ್ರಯಾಣಿಕ ಮಹಿಳೆ! ವಿಡಿಯೋ ವೈರಲ್‌

ಹಲವು ಬಣ್ಣಗಳ ಬಳಕೆ
ಹೊಸ ಸಮವಸ್ತ್ರದಲ್ಲಿ ಆಲಿವ್‌ ಗ್ರೀನ್‌, ವಿವಿಧ ರೀತಿಯ ಭೂ ಪ್ರದೇಶ ಗಳನ್ನು ಹೊಂದಿಕೊಂಡು ಬಣ್ಣಗಳನ್ನು ಹೋಲುವಂತೆ ವಿನ್ಯಾಸಗೊಳಿಸಲಾಗಿದೆ. ಹೊಸ ಸಮವಸ್ತ್ರವನ್ನು ಟಕ್‌ ಇನ್‌ ಮಾಡುವ ಕ್ರಮವಿಲ್ಲ. ಮಹಿಳಾ ಅಧಿಕಾರಿಗಳಿಗೆ ಮತ್ತು ಸಿಬಂದಿಗೆ ಕೊಂಚ ವ್ಯತ್ಯಾಸ ಇರುವ ಸಮವಸ್ತ್ರ ಇದೆ.

ಯಾವ ರೀತಿಯ ಬಟ್ಟೆ?
ಹತ್ತಿ ಮತ್ತು ಪಾಲಿಸ್ಟರ್‌ ಅನ್ನು 70:30ರ ಅನುಪಾತದಲ್ಲಿ ಬಳಸಲಾಗಿದೆ. ಸುಲಭದಲ್ಲಿ ಒಣಗಿಸಲೂ ಸಾಧ್ಯ.

ವಿನ್ಯಾಸಗೊಳಿಸಿದ್ದು ಯಾರು?
ನ್ಯಾಶನಲ್‌ ಇನ್‌ಸ್ಟಿಟ್ಯೂಟ್‌ ಆಫ್ ಫ್ಯಾಷನ್‌ ಟೆಕ್ನಾಲಜಿ ವಿನ್ಯಾಸ ತಂಡದ ಸಹಯೋಗದೊಂದಿಗೆ ಹೊಸ ಸಮವಸ್ತ್ರ ವಿನ್ಯಾಸಗೊಳಿಸಲಾಗಿದೆ.

ಹೊಸತೇನಿದೆ?
-ಯೋಧರಿಗೆ ಕರ್ತವ್ಯ ನಿರ್ವಹಿಸಲು ಅನುಕೂಲವಾಗುವಂತೆ ವಿನ್ಯಾಸ
-ವಿವಿಧ ಭೌಗೋಳಿಕ ಪ್ರದೇಶಗಳಿಗೆ ಅನ್ವಯವಾಗುವಂತೆ ತಯಾರು
-ಕಠಿನ ಚಳಿ, ಅತಿಯಾದ ಬಿಸಿ  ಹೀಗೆ ಅತ್ಯಂತ ಪ್ರತಿಕೂಲ ಹವಾಮಾನ ತಡೆಯುವ ನಿಟ್ಟಿನಲ್ಲಿ ಅನುಕೂಲ
-ದೀರ್ಘ‌ಕಾಲ ಬಾಳಿಕೆ ಬರುವಂಥ ಬಟ್ಟೆಯ ಬಳಕೆ

ಲೋಂಗೇವಾಲಾದಲ್ಲಿ ರಾರಾಜಿಸಿದ ಖಾದಿ ರಾಷ್ಟ್ರಧ್ವಜ
ಸೇನಾ ದಿನದ ಪ್ರಯುಕ್ತ ರಾಜಸ್ಥಾನಕ್ಕೆ ಹೊಂದಿಕೊಂಡಿರುವ ಭಾರತ- ಪಾಕಿಸ್ಥಾನ ಗಡಿಯಿರುವ ಲೋಂಗೇವಾಲಾದಲ್ಲಿ ಜಗತ್ತಿನ ಅತೀದೊಡ್ಡ ಖಾದಿ ರಾಷ್ಟ್ರಧ್ವಜವನ್ನು ಪ್ರದರ್ಶಿಸಲಾಗಿದೆ. 2021 ಅ.2ರ ಬಳಿಕ 5ನೇ ಬಾರಿಗೆ ಇದನ್ನು ಹಾರಿಸಲಾಗಿದೆ.

ಈ ಹಿಂದೆ ಎಲ್ಲಿ ಅಳವಡಿಸಲಾಗಿತ್ತು?
2021 ಅ.8: ಹಿಂಡನ್‌ ವಾಯುನೆಲೆಯಲ್ಲಿ
2021 ಅ.21: ಹೊಸದಿಲ್ಲಿಯ ಕೆಂಪುಕೋಟೆಯಲ್ಲಿ
2021 ಡಿ.4: ಮುಂಬಯಿಯ ಗೇಟ್‌ ವೇ ಆಫ್ ಇಂಡಿಯಾ ಬಳಿ

ಟಾಪ್ ನ್ಯೂಸ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Aravind kejriwal

Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.