Rajkot: ಗೇಮಿಂಗ್‌ ಜೋನ್‌ ಬೆಂಕಿ ಅವಘಡದಲ್ಲಿ ಬೆಂದು ಹೋಯಿತು ನವ ದಂಪತಿಯ ಜೀವ

Team Udayavani, May 27, 2024, 10:30 AM IST

Rajkot: ಗೇಮಿಂಗ್‌ ಜೋನ್‌ ಬೆಂಕಿ ಅವಘಡದಲ್ಲಿ ಬೆಂದು ಹೋಯಿತು ನವ ದಂಪತಿಯ ಜೀವ

ಅಹ್ಮದಾಬಾದ್‌:‌ ಗುಜರಾತ್‌ ರಾಜ್‌ ಕೋಟ್‌ ನಲ್ಲಿನ ಗೇಮಿಂಗ್‌ ಜೋನ್‌ ಒಂದರಲ್ಲಿ ನಡೆದ ಅಗ್ನಿ ಅವಘಡದಲ್ಲಿ ಸಾವಿಗೀಡಾದವರ ಸಂಖ್ಯೆ ಹೆಚ್ಚಾಗುತ್ತಿದೆ.

ಈ ಘಟನೆಯಲ್ಲಿ ಮಕ್ಕಳು, ಮಹಿಳೆಯರು ಸೇರಿದಂತೆ  ಇದುವರೆಗೆ 34 ಮಂದಿ ಮೃತಪಟ್ಟಿದ್ದಾರೆ. ಕೆಲವರು ಸುಟ್ಟು ಕರಕಲಾಗಿದ್ದು, ಇನ್ನು ಕೆಲವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವ ವೇಳೆ ಮೃತಪಟ್ಟಿದ್ದಾರೆ.

ಮೃತಪಟ್ಟವರಲ್ಲಿ ಕೆಲವರ ಗುರುತು ಪರಿಚಯ ಇನ್ನಷ್ಟೇ ಆಗಬೇಕಿದೆ. ಈ ಅವಘಡದಲ್ಲಿ ನವದಂಪತಿಗಳು ಕೂಡ ಸಾವಿಗೀಡಾಗಿದ್ದಾರೆ.

ಅಕ್ಷಯ್ ಧೋಲಾರಿಯಾ -ಖ್ಯಾತಿ ಸ್ವಾಲಿವಿಯಾ ಬೆಂಕಿಯಲ್ಲಿ ಬೆಂದು ಹೋಗಿದ್ದಾರೆ.  ಅಕ್ಷಯ್‌ ಕೆನಾಡದಲ್ಲಿ ವ್ಯಾಸಂಗ ಮಾಡುತ್ತಿದ್ದು, ಮದುವೆಯಾಗಲು ಭಾರತಕ್ಕೆ ಬಂದಿದ್ದರು. ಕಳೆದ ವಾರ ಅಷ್ಟೇ ಇಬ್ಬರು ಕೋರ್ಟಿನಲ್ಲಿ ರಿಜಿಸ್ಟಾರ್‌ ಮ್ಯಾರೇಜ್‌ ಆಗಿದ್ದರು.

ಅಕ್ಷಯ್‌ – ಖ್ಯಾತಿ ಸ್ವಾಲಿವಿಯಾ ಶನಿವಾರ ಸಂಜೆ ಗೇಮಿಂಗ್‌ ಜೋನ್‌ಗೆ ಬಂದಿದ್ದರು. ಇವರೊಂದಿಗೆ ಸಂಬಂಧಿ ಕೂಡ ಬಂದಿದ್ದರು.

ದಂಪತಿ ಈ ವರ್ಷದ ಡಿಸೆಂಬರ್‌ನಲ್ಲಿ ಹಿಂದೂ ಸಂಪ್ರದಾಯಗಳ ಪ್ರಕಾರ ಕುಟುಂಬಗಳ ಸಮ್ಮುಖದಲ್ಲಿ ಮದುವೆ ಆಗುವ ಯೋಜನೆಯನ್ನು ಹಾಕಿಕೊಂಡಿದ್ದರು.

ಘಟನೆಯ ನಂತರ ಯುಎಸ್ ನಲ್ಲಿ ವಾಸಿಸುವ ಅಕ್ಷಯ್ ಪೋಷಕರು ರಾಜ್‌ ಕೋಟ್ ಗೆ ತೆರಳಿ ಪೊಲೀಸರು ಹೇಳಿದಂತೆ ಗುರುತನ್ನು ಖಚಿತಪಡಿಸಿಕೊಳ್ಳಲು ಡಿಎನ್‌ಎ ಮಾದರಿಗಳನ್ನು ಕೊಟ್ಟಿದ್ದಾರೆ.

ಅಕ್ಷಯ್‌ , ಖ್ಯಾತಿ ಹಾಗೂ ಅಕ್ಷಯ್‌ ಅವರ ಸಂಬಂಧಿ ಬೆಂಕಿ ಅವಘಡದಲ್ಲಿ ಸುಟ್ಟು ಕರಕಲಾಗಿದ್ದಾರೆ.

ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡಕ್ಕೆ ತನಿಖೆಯನ್ನು ವಹಿಸಿದೆ.

ಒಂದೇ ನಿರ್ಗಮನ ಬಾಗಿಲು, 3,500 ಲೀ. ಇಂಧನ ಸಂಗ್ರಹ!
ಬೆಂಕಿ ಅವಘಡಕ್ಕೀಡಾದ ರಾಜಕೋಟ್‌ನ ಟಿಆರ್‌ಪಿ ಗೇಮಿಂಗ್‌ ಜೋನ್‌ಗೆ ಪರವಾನಿಗೆ ಹಾಗೂ ಎನ್‌ಒಸಿ ಕೂಡ ಇರಲಿಲ್ಲ. 99 ರೂ. ಟಿಕೆಟ್‌ ರಿಯಾಯಿತಿ ನೀಡಿದ್ದರಿಂದ ಹೆಚ್ಚಿನ ಜನರು ಕೂಡ ಬಂದಿದ್ದರು. ವಿಶೇಷ ಎಂದರೆ, ಈ ಗೇಮಿಂಗ್‌ ಜೋನ್‌ನಲ್ಲಿ ಒಂದೇ ಹೊರ ಹೋಗುವ ಬಾಗಿಲು ಇತ್ತು. ಜನರೇಟರ್‌ಗಳಿಗಾಗಿ 3,500 ಲೀ. ಇಂಧನವನ್ನು ಸಂಗ್ರಹಿಸಿಡಲಾಗಿತ್ತು. ಇದು ಕೂಡ ಬೆಂಕಿಯು ತೀವ್ರತೆಗೆ ಕಾರಣವಾಯಿತು ಎಂದು ಹೇಳಲಾಗುತ್ತಿದೆ. ಸದ್ಯಕ್ಕೆ ಶಾರ್ಟ್‌ ಸರ್ಕಿಟ್‌ ಅವಘಡಕ್ಕೆ ಕಾರಣ ಎಂದು ಹೇಳಲಾಗುತ್ತಿದೆಯಾ ದರೂ ಇನ್ನೂ ನಿಖರ ಕಾರಣ ಗೊತ್ತಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದೇ ವೇಳೆ, ಗೇಮಿಂಗ್‌ ಸೆಂಟರ್‌ಗೆ ಅಗ್ನಿಶಾಮಕ ಇಲಾಖೆ ಯಿಂದ ಪರವಾನಿಗೆ ಪಡೆದುಕೊಂಡಿಲ್ಲದ ಅಂಶ ಕೂಡ ಬೆಳಕಿಗೆ ಬಂದಿದೆ.

ಈ ಸಂಬಂಧ ಗೇಮಿಂಗ್‌ ಜೋನ್‌ 6 ಪಾಲುದಾರರ ವಿರುದ್ಧ ಪೊಲೀಸರು ಎಫ್ಐಆರ್‌ ದಾಖಲಿಸಿದ್ದು, ಇಬ್ಬರನ್ನು ಬಂಧಿಸಿದ್ದಾರೆ. ಪ್ರಕರಣವನ್ನು ಸ್ವಯಂ ಪ್ರೇರಿತವಾಗಿ ಗುಜರಾತ್‌ ಹೈಕೋರ್ಟ್‌ ವಿಚಾರಣೆಗೆ ಕೈಗೆತ್ತಿಕೊಂಡಿದೆ.

ಟಾಪ್ ನ್ಯೂಸ್

ರೈತರ ಸಾಲ ಮನ್ನಾ ಸಂದರ್ಭದಲ್ಲೂ ಪೆಟ್ರೋಲ್‌ ದರ ಏರಿಸಿರಲಿಲ್ಲ: ಎಚ್‌ಡಿಕೆ

ರೈತರ ಸಾಲ ಮನ್ನಾ ಸಂದರ್ಭದಲ್ಲೂ ಪೆಟ್ರೋಲ್‌ ದರ ಏರಿಸಿರಲಿಲ್ಲ: ಎಚ್‌ಡಿಕೆ

ರಾಜ್ಯದಲ್ಲಿ ಪೆಟ್ರೋಲ್‌ ಶತಕ ಗಡಿ ದಾಟಿಸಿದ್ದೇ ಬಿಜೆಪಿ: ಜಮೀರ್‌

ರಾಜ್ಯದಲ್ಲಿ ಪೆಟ್ರೋಲ್‌ ಶತಕ ಗಡಿ ದಾಟಿಸಿದ್ದೇ ಬಿಜೆಪಿ: ಜಮೀರ್‌

ಗ್ಯಾರಂಟಿಗಾಗಿ ತೈಲ ದರ ಏರಿಕೆ ವ್ಯಾಖ್ಯಾನ ತಪ್ಪು: ಪರಮೇಶ್ವರ್‌

ಗ್ಯಾರಂಟಿಗಾಗಿ ತೈಲ ದರ ಏರಿಕೆ ವ್ಯಾಖ್ಯಾನ ತಪ್ಪು: ಪರಮೇಶ್ವರ್‌

bjpತೈಲ ದರ ಇಳಿಸದಿದ್ದರೆ ನಾಡಿದ್ದು ಸಂಚಾರ ತಡೆ: ಬಿಜೆಪಿ

ತೈಲ ದರ ಇಳಿಸದಿದ್ದರೆ ನಾಡಿದ್ದು ಸಂಚಾರ ತಡೆ: ಬಿಜೆಪಿ

RenukaSwamy ತಂದೆ ಹೇಳಿಕೆ ಬೆನ್ನಲ್ಲೇ ಮತ್ತೊಮ್ಮೆ ಮಹಜರು

RenukaSwamy ತಂದೆ ಹೇಳಿಕೆ ಬೆನ್ನಲ್ಲೇ ಮತ್ತೊಮ್ಮೆ ಮಹಜರು

ರಾಜಕಾಲುವೆಯಲ್ಲಿ ಹುಡುಕಿದರೂ ಸಿಗದ ರೇಣುಕಾಸ್ವಾಮಿ ಮೊಬೈಲ್‌!

ರಾಜಕಾಲುವೆಯಲ್ಲಿ ಹುಡುಕಿದರೂ ಸಿಗದ ರೇಣುಕಾಸ್ವಾಮಿ ಮೊಬೈಲ್‌!

ದರ್ಶನ್‌, ಚಿಕ್ಕಣ್ಣ ಸಮಕ್ಷಮ ಪಬ್‌ನಲ್ಲಿ ಸ್ಥಳ ಮಹಜರು

ದರ್ಶನ್‌, ಚಿಕ್ಕಣ್ಣ ಸಮಕ್ಷಮ ಪಬ್‌ನಲ್ಲಿ ಸ್ಥಳ ಮಹಜರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP 2

Election: ಮಹಾರಾಷ್ಟ್ರ ಸೇರಿ 4 ರಾಜ್ಯ ಉಸ್ತುವಾರಿ ನೇಮಿಸಿದ ಬಿಜೆಪಿ

1-aasdsadsa-dad

Bihar; ಮುಸ್ಲಿಂ ಮತ್ತು ಯಾದವರ ಕೆಲಸ ಮಾಡುವುದಿಲ್ಲ: ಜೆಡಿಯು ಸಂಸದ

1-asdsdsad

Poll debut; ವಯನಾಡು ಕ್ಷೇತ್ರ ತಂಗಿಗೆ ಬಿಟ್ಟುಕೊಟ್ಟ ರಾಹುಲ್: ನಾಳೆ ರಾಜೀನಾಮೆ

Rahul Gandhi resfused to take Leader of Opposition post In Lok Sabha

Lok Sabha; ವಿಪಕ್ಷ ನಾಯಕನ ಸ್ಥಾನಕ್ಕೆ ಹೆಸರು ಬಹುತೇಕ ಅಂತಿಮ; ಹುದ್ದೆ ಬೇಡ ಎಂದ ರಾಹುಲ್

Goa Calangute Beach: ಮೊಬೈಲ್,ಬ್ಯಾಗ್‍ ಕಳ್ಳತನ; ಮೂವರ ಬಂಧನ

Goa Calangute Beach: ಮೊಬೈಲ್,ಬ್ಯಾಗ್‍ ಕಳ್ಳತನ; ಮೂವರ ಬಂಧನ

MUST WATCH

udayavani youtube

ಈದ್ಗಾ ಮೈದಾನದಲ್ಲಿ ನಡೆದ ಬಕ್ರೀದ್ ಆಚರಣೆಯಲ್ಲಿ ಪ್ರಾರ್ಥನೆ ಸಲ್ಲಿಸಿದ ಆರ್ ಬಿ ತಿಮ್ಮಾಪುರ

udayavani youtube

ಮಾನಸಿಕ ಸಮಸ್ಯೆಯ ಲಕ್ಷಣಗಳೇನು?

udayavani youtube

ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ

udayavani youtube

ಸಿದ್ದರಾಮಯ್ಯ ಡಿಕೆ ಶಿವಕುಮಾರ್ ಆಡಳಿತ ಮಾಡಲು ಅಸಮರ್ಥರು

udayavani youtube

ಬಿಜೆಪಿ ಹಿರಿಯ ಮುಖಂಡ ಎಂ.ಬಿ‌.ಭಾನುಪ್ರಕಾಶ್ ಹೃದಯಾಘಾತದಿಂದ ನಿಧನ

ಹೊಸ ಸೇರ್ಪಡೆ

BJP 2

Election: ಮಹಾರಾಷ್ಟ್ರ ಸೇರಿ 4 ರಾಜ್ಯ ಉಸ್ತುವಾರಿ ನೇಮಿಸಿದ ಬಿಜೆಪಿ

ರೈತರ ಸಾಲ ಮನ್ನಾ ಸಂದರ್ಭದಲ್ಲೂ ಪೆಟ್ರೋಲ್‌ ದರ ಏರಿಸಿರಲಿಲ್ಲ: ಎಚ್‌ಡಿಕೆ

ರೈತರ ಸಾಲ ಮನ್ನಾ ಸಂದರ್ಭದಲ್ಲೂ ಪೆಟ್ರೋಲ್‌ ದರ ಏರಿಸಿರಲಿಲ್ಲ: ಎಚ್‌ಡಿಕೆ

ರಾಜ್ಯದಲ್ಲಿ ಪೆಟ್ರೋಲ್‌ ಶತಕ ಗಡಿ ದಾಟಿಸಿದ್ದೇ ಬಿಜೆಪಿ: ಜಮೀರ್‌

ರಾಜ್ಯದಲ್ಲಿ ಪೆಟ್ರೋಲ್‌ ಶತಕ ಗಡಿ ದಾಟಿಸಿದ್ದೇ ಬಿಜೆಪಿ: ಜಮೀರ್‌

ಗ್ಯಾರಂಟಿಗಾಗಿ ತೈಲ ದರ ಏರಿಕೆ ವ್ಯಾಖ್ಯಾನ ತಪ್ಪು: ಪರಮೇಶ್ವರ್‌

ಗ್ಯಾರಂಟಿಗಾಗಿ ತೈಲ ದರ ಏರಿಕೆ ವ್ಯಾಖ್ಯಾನ ತಪ್ಪು: ಪರಮೇಶ್ವರ್‌

bjpತೈಲ ದರ ಇಳಿಸದಿದ್ದರೆ ನಾಡಿದ್ದು ಸಂಚಾರ ತಡೆ: ಬಿಜೆಪಿ

ತೈಲ ದರ ಇಳಿಸದಿದ್ದರೆ ನಾಡಿದ್ದು ಸಂಚಾರ ತಡೆ: ಬಿಜೆಪಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.