ತಮಿಳುನಾಡು: ಮಾನಸಿಕ ಅಸ್ವಸ್ಥ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ..!
Team Udayavani, May 20, 2022, 2:16 PM IST
ತಮಿಳುನಾಡು: 31 ವರ್ಷದ ಮಾನಸಿಕ ಅಸ್ವಸ್ಥ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಮೂವರನ್ನು ತಮಿಳುನಾಡು ಪೊಲೀಸರು ಬಂಧಿಸಿದ್ದು, ತಲೆಮರೆಸಿಕೊಂಡಿರುವ ನಾಲ್ಕನೇ ಆರೋಪಿಗಾಗಿ ಶೋಧ ಕಾರ್ಯ ಮುಂದುವರಿದಿದೆ. ಮೇ 18 ರ ಬುಧವಾರ ರಾತ್ರಿ ಚೆಂಗಲ್ಪೇಟ್ ಜಿಲ್ಲೆಯ ಹಳ್ಳಿಯೊಂದರಲ್ಲಿ ಈ ಘಟನೆ ನಡೆದಿದೆ.
ಪೊಲೀಸರ ಪ್ರಕಾರ, ಸಂತ್ರಸ್ತೆ ತನ್ನ ಬಾಲ್ಯದಿಂದಲೂ ವಿಕಲ ಚೇತನಳಾಗಿದ್ದು, ಆಕೆಯ ಪೋಷಕರು ಕೃಷಿ ಕೆಲಸಗಾರರಾಗಿದ್ದು, ಆಕೆಯನ್ನು ಮನೆಯಲ್ಲಿ ಒಬ್ಬಂಟಿಯಾಗಿ ಬಿಡುತ್ತಿದ್ದರು ಎಂದು ವರದಿ ತಿಳಿಸಿದೆ.
ಇದನ್ನೂ ಓದಿ: ಎಲ್ಲಾದರು ಇರು…ಕೆನಡಾ ಸಂಸತ್ ನಲ್ಲಿ ಕನ್ನಡ ಕಲರವ; ವಿಡಿಯೋ ವೈರಲ್
ಕುಡಿದ ಅಮಲಿನಲ್ಲಿ ನಾಲ್ವರು ಮನೆಗೆ ನುಗ್ಗಿ ಆಕೆ ಕಿರುಚದಂತೆ ಬಾಯಿ ಬಿಗಿದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. “ಅವರು ಆಕೆಯನ್ನು ಆರೋಪಿಯ ಮನೆಯ ಟೆರೇಸ್ಗೆ ಕರೆದೊಯ್ದು ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ” ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಘಟನೆಯಲ್ಲಿ ಸಂತ್ರಸ್ತೆಯ ಕೂಗು ಕೇಳಿ ಸ್ಥಳೀಯ ಮಹಿಳೆಯೊಬ್ಬರು ಆಕೆಯನ್ನು ಹುಡುಕಿಕೊಂಡು ಬಂದರು ಮತ್ತು ಸ್ಥಳೀಯರನ್ನು ಕರೆದು ಎಚ್ಚರಿಸಿದ ಕೆಲವೇ ಕ್ಷಣಗಳಲ್ಲಿ ನಾಲ್ವರು ಆರೋಪಿಗಳು ಮನೆಯಿಂದ ಓಡಿ ಹೋಗಿದ್ದರು. ಸಂತ್ರಸ್ತೆ ನೋವಿನಿಂದ ನರಳುತ್ತಿರುವುದನ್ನು ಗಮನಿಸಿದ ಸ್ಥಳಿಯರು ಆಕೆಯನ್ನು ಚಿಕಿತ್ಸೆಗಾಗಿ ಚೆಂಗಲಪೇಟೆಯ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಪ್ರಗತಿಯಲ್ಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ
ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್ ಇನ್ ಫ್ಲುಯೆನ್ಸರ್ ನಿಧನ
Lok Sabha Election 2024: ಝಾರ್ಖಂಡ್, ಛತ್ತೀಸ್ಗಢದಲ್ಲಿ ಗೆಲುವು ಯಾರಿಗೆ?
ಗ್ಯಾಂಗ್ ಸ್ಟರ್ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್ ಮನೆಯಿಂದ ಕ್ಯಾಬ್ ಬುಕ್: ಯುವಕ ಅರೆಸ್ಟ್
Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!
MUST WATCH
ಹೊಸ ಸೇರ್ಪಡೆ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!
Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್ ಟಿಆರ್ – ಪ್ರಶಾಂತ್ ನೀಲ್ ಸಿನಿಮಾ
Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ
Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ