ಗಿಲಾನಿಗೆ ಸೇರಿದ 2 ಸ್ಥಳಗಳ ಮೇಲೆ ಎನ್ಐಎ ದಾಳಿ
Team Udayavani, Jul 31, 2017, 8:50 AM IST
ಜಮ್ಮು/ಹೊಸದಿಲ್ಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿಗಳ ವಿರುದ್ಧ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಮತ್ತೆ ದಾಳಿ ನಡೆಸಿದೆ. ಹುರ್ರಿಯತ್ ನಾಯಕ ಸಯ್ಯದ್ ಅಲಿ ಶಾ ಗಿಲಾನಿ ಅವರಿಗೆ ಸೇರಿದ 2 ಸ್ಥಳಗಳ ಮೇಲೆ ದಾಳಿ ನಡೆಸಲಾಗಿದೆ. ಇದೇ ವೇಳೆ ಗಿಲಾನಿ ಅವರ ಎರಡನೇ ಪುತ್ರ ನಸೀಮ್ಗೆ ಸಮನ್ಸ್ ನೀಡಿ, ಬುಧವಾರ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ. ಮತ್ತೂಬ್ಬ ಪುತ್ರನಿಗೆ ಸೋಮವಾರ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ. ಗಿಲಾನಿ ಜತೆಗೆ ನಿಕಟ ಸಂಪರ್ಕ ಇರಿಸಿಕೊಂಡಿದ್ದ ನ್ಯಾಯವಾದಿಯೊಬ್ಬರ ನಿವಾಸ ಮತ್ತು ಕಚೇರಿ ಮೇಲೆ ದಾಳಿ ನಡೆಸಿದ ಸಂದರ್ಭದಲ್ಲಿ ಕೆಲವೊಂದು ದಾಖಲೆಗಳು, ಕಂಪ್ಯೂಟರ್ ಹಾರ್ಡ್ಡಿಸ್ಕ್ ಅನ್ನು ವಶಪಡಿಸಿಕೊಳ್ಳಲಾಗಿದೆ. ಅವರು ಕೈಗೊಂಡಿರುವ ವಿದೇಶ ಪ್ರವಾಸಗಳ ವಿವರಗಳನ್ನು ತನಿಖಾ ಸಂಸ್ಥೆ ಪರಿಶೀಲನೆ ನಡೆಸುತ್ತಿದೆ.
ಇಬ್ಬರು ಉಗ್ರರು ಫಿನಿಶ್: ಕಣಿವೆ ರಾಜ್ಯದ ಪುಲ್ವಾಮಾ ಜಿಲ್ಲೆಯಲ್ಲಿ ರವಿವಾರ ಸೇನಾ ಪಡೆಗಳು ನಡೆಸಿದ ಶೋಧ ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರನ್ನು ಕೊಲ್ಲಲಾಗಿದೆ. ಅವರ ಇರವಿನ ಬಗ್ಗೆ ಮಾಹಿತಿ ಸಿಕ್ಕಿದ ಹಿನ್ನೆಲೆಯಲ್ಲಿ ತಹಾಬ್ ಎಂಬ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಉಗ್ರರು ಸೈನಿಕರತ್ತ ಗುಂಡು ಹಾರಿಸಿದರು. ನಂತರ ನಡೆದ ಕಾಳಗದಲ್ಲಿ ಅವರಿಬ್ಬರನ್ನು ಕೊಲ್ಲಲಾಯಿತು. ಅವರ ಸಂಘಟನೆಯ ಗುರುತು ಪತ್ತೆಯಾಗಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಜಗತ್ತಿಗಿಂತ ಮೊದಲು ಪಾಕ್ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್ ದಾಳಿ ಬಗ್ಗೆ ಪ್ರಧಾನಿ
Encounter: ಛತ್ತೀಸ್ಗಢದಲ್ಲಿ ಎನ್ಕೌಂಟರ್… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್
Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ